ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿಗೆ ಸಿಕ್ತು ಪೊಲೀಸ್ ತರಬೇತಿ ಕೇಂದ್ರ

|
Google Oneindia Kannada News

ಉಡುಪಿ, ಜೂ. 11 : ಉಡುಪಿಯಲ್ಲಿ 36 ಎಕರೆ ಪ್ರದೇಶದಲ್ಲಿ ಪೊಲೀಸ್ ತರಬೇತಿ ಕೇಂದ್ರ ಆರಂಭವಾಗಲಿದೆ. ಉಡುಪಿ ಜಿಲ್ಲಾಡಳಿತ ಈ ಕುರಿತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಸರ್ಕಾರ ಮೊದಲ ಹಂತದಲ್ಲಿ 75 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಿದೆ.

ಉಡುಪಿಯ ಉಪ್ಪೂರು ಗ್ರಾಮದ ಬಳಿಯ 36 ಎಕರೆ ಪ್ರದೇಶದಲ್ಲಿ ಪೊಲೀಸ್ ತರಬೇತಿ ಕೇಂದ್ರ ನಿರ್ಮಾಣಗೊಳ್ಳಲಿದೆ. ಕೇಂದ್ರಕ್ಕಾಗಿ ಗುರುತಿಸಿದ ಜಾಗವನ್ನು 15 ದಿನಗಳಲ್ಲಿ ಜಿಲ್ಲಾಡಳಿತ ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡಲಿದೆ. ನಂತರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ. [ಮಂಗಳೂರಿಗೆ ಬಂತು ಸೈಬರ್ ಕ್ರೈಂ ಪೊಲೀಸ್ ಠಾಣೆ]

police

ಹೊಸದಾಗಿ ನೇಮಕವಾದ ಅದರಲ್ಲೂ ಕಾನ್ಸ್‌ಟೇಬಲ್‌ಗಳಿಗೆ ತರಬೇತಿ ನೀಡುವ ಕೇಂದ್ರವಿದಾಗಿದೆ. ಸರ್ಕಾರ ಮೊದಲ ಹಂತದಲ್ಲಿ 75 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಿದ್ದು, 2 ವರ್ಷದಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಅಂದಾಜಿಸಲಾಗಿದೆ. [ಪೊಲೀಸ್ ಮಹಾನಿರ್ದೇಶಕರು 10 ಸಾವಿರ ಕಳೆದುಕೊಂಡಿದ್ದು ಹೇಗೆ?]

ಮಂಗಳೂರು, ಕಾರವಾಡ, ಚಿಕ್ಕಮಗಳೂರು ಸೇರಿದಂತೆ ಉಡುಪಿ ಸುತ್ತಮುತ್ತಲಿನ ಅಭ್ಯರ್ಥಿಗಳಿಗೆ ಇಲ್ಲಿ 9 ತಿಂಗಳ ತರಬೇತಿ ನೀಡಲಾಗುತ್ತದೆ. ಪರೇಡ್ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಬೇಕಾದ ಸ್ಥಳವಕಾಶವನ್ನು ಈ ಕೇಂದ್ರದಲ್ಲಿ ಕಲ್ಪಿಸಲಾಗುತ್ತದೆ. [ಗುಪ್ತಚರ ಇಲಾಖೆಗೆ 100 ಎಸ್‌ಐಗಳ ನೇಮಕ]

ಈಗಾಗಲೇ ಚನ್ನಪಟ್ಟಣ, ಖಾನಾಪುರ, ಕಲಬುರಗಿಯಲ್ಲಿ ಪೊಲೀಸ್ ತರಬೇತಿ ಕೇಂದ್ರಗಳಿವೆ. ಇದೇ ಮಾದರಿಯಲ್ಲಿ ಉಡುಪಿಯಲ್ಲಿಯೂ ಕೇಂದ್ರ ಸ್ಥಾಪನೆಯಾಗಲಿದೆ. ತರಬೇತಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಮಕ್ಕಳಿಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತದೆ.

English summary
A full fledged police training school will soon be a reality in Udupi district. The proposal for its construction has been forwarded to the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X