UGCET 2026 Results: ಸಿಇಟಿ ಫಲಿತಾಂಶ ಪ್ರಕಟ ಯಾವಾಗ? ಇಲ್ಲಿದೆ ಬಿಗ್ ಅಪ್ಡೇಟ್

ಬೆಂಗಳೂರು: ರಾಜ್ಯದ ಎಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಸಿಇಟಿ - 2026 ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಜೂನ್ 1ರಂದು ಹಿರಿಯೂರು ಕೇಂದ್ರದಲ್ಲಿ ಕೃಷಿ ಮತ್ತು ಪಶು ವೈದ್ಯಕೀಯ ಪ್ರಾಯೋಗಿಕ ಪರೀಕ್ಷೆ ನಡೆಯಲಿದ್ದು, ಈ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿದ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಐಎಎಸ್ ಸ್ಪಷ್ಟಪಡಿಸಿದ್ದಾರೆ.

ಹಿರಿಯೂರು ಕೇಂದ್ರದಲ್ಲಿ ಈ ಹಿಂದೆ ನಡೆದಿದ್ದ ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಒಂದೇ ಕೇಂದ್ರದ ಬರೋಬ್ಬರಿ 74 ವಿದ್ಯಾರ್ಥಿಗಳು 200ಕ್ಕೆ 200 ಅಂಕ ಪಡೆದಿದ್ದರು. ವಿದ್ಯಾರ್ಥಿಗಳಿಗೆ ಸಾಮಾನ್ಯ ಹಾಗೂ ಸುಲಭದ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂಬ ಸಮರ್ಥನೆಗಳಿದ್ದರೂ, ಈ ಅಚ್ಚರಿಯ ಫಲಿತಾಂಶವು ಭಾರೀ ವಿವಾದಕ್ಕೆ ಹಾಗೂ ಅಕ್ರಮದ ಆರೋಪಗಳಿಗೆ ಕಾರಣವಾಗಿತ್ತು. ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಮರುಪರೀಕ್ಷೆಗೆ ಪಟ್ಟು ಹಿಡಿದಿದ್ದವು. ಈ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಿದ ಬಳಿಕ, ಕೃಷಿ ವಿಶ್ವವಿದ್ಯಾಲಯದವರು ಹಿರಿಯೂರು ಕೇಂದ್ರದ ಅಭ್ಯರ್ಥಿಗಳಿಗೆ ಮಾತ್ರ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮರು ನಿಗದಿ ಮಾಡಲು ನಿರ್ಧರಿಸಿದರು.

UGCET 2026 Results

ರಾಜ್ಯ ಕೃಷಿ ಸಚಿವರೂ ಕೂಡ ಈ ಬಗ್ಗೆ ಇತ್ತೀಚೆಗೆ ಮಾಹಿತಿ ನೀಡಿ ಮರುಪರೀಕ್ಷೆಯನ್ನು ಖಚಿತಪಡಿಸಿದ್ದರು. ಹೀಗಾಗಿ ಇದೀಗ ಜೂನ್ 1ರಂದು ಹಿರಿಯೂರಿನಲ್ಲಿ ಮರುಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ರಾಜ್ಯಾದ್ಯಂತ ಕೃಷಿ ಮತ್ತು ಪಶು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ವರ್ಷ ಒಟ್ಟು 24,250 ಮಂದಿ ಕೃಷಿ ಪ್ರಾಯೋಗಿಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. ಜೂನ್ 1ರಂದು ನಡೆಯುವ ಹಿರಿಯೂರು ಕೇಂದ್ರದ ಪರೀಕ್ಷೆ ಮುಗಿದ ಬಳಿಕ, ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳ ಅಂಕಗಳನ್ನು ಕೃಷಿ ವಿಶ್ವವಿದ್ಯಾಲಯವು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಸಲ್ಲಿಸಲಿದೆ. ಆ ಪ್ರಾಯೋಗಿಕ ಅಂಕಗಳ ಆಧಾರದ ಮೇಲೆ ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಯ ಅಂಕಗಳನ್ನು ಕ್ರೋಢೀಕರಿಸಿ, ಅಂತಿಮವಾಗಿ ಸಿಇಟಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ.

ಫಲಿತಾಂಶ ಪ್ರಕಟವಾಗುವವರೆಗೆ ಅಭ್ಯರ್ಥಿಗಳು ಹಾಗೂ ಪೋಷಕರು ಕೌನ್ಸೆಲಿಂಗ್ ಪ್ರಕ್ರಿಯೆ ಹೇಗೆ ನಡೆಯುತ್ತದೆ, ಸೀಟು ಹಂಚಿಕೆ ನಿಯಮಗಳೇನು ಮತ್ತು ಆಪ್ಷನ್ಸ್ (ಕಾಲೇಜುಗಳ ಆಯ್ಕೆಗಳನ್ನು) ದಾಖಲಿಸುವ ವಿಧಾನದ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಕೆಇಎ ನಿರ್ದೇಶಕರು ತಿಳಿಸಿದ್ದಾರೆ.

ಇದಕ್ಕಾಗಿಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ 'ಮಂಥನ' ಎಂಬ ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದೆ. ಮೇ 30ರವರೆಗೆ ರಾಜ್ಯದ ವಿವಿಧ ಸರ್ಕಾರಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಈ ಸಿಇಟಿ ಸೀಟು ಹಂಚಿಕೆ ಕುರಿತಾದ ಮಂಥನ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಕಾರ್ಯಕ್ರಮದ ಮೂಲಕ ತಜ್ಞರು ಕೌನ್ಸೆಲಿಂಗ್ ಹಂತಗಳ ಬಗ್ಗೆ ವಿದ್ಯಾರ್ಥಿಗಳಿಗೆ ನೇರವಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ. ಅಭ್ಯರ್ಥಿಗಳು ಸಾಧ್ಯವಾದರೆ ಈ ಕಾರ್ಯಕ್ರಮಗಳಲ್ಲಿ ಖುದ್ದಾಗಿ ಭಾಗವಹಿಸಿ, ಮುಂದಿನ ಕೌನ್ಸೆಲಿಂಗ್ ಪ್ರಕ್ರಿಯೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ತಮ್ಮ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಹೆಚ್. ಪ್ರಸನ್ನ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಇಟಿ - 2026ರ ಫಲಿತಾಂಶವು ಜೂನ್ ಮೊದಲ ವಾರದಲ್ಲಿ ಪ್ರಕಟವಾಗುವುದು ಬಹುತೇಕ ಖಚಿತವಾಗಿದೆ. ಎಂಜಿನಿಯರಿಂಗ್, ಬಿಎಸ್ಸಿ ಅಗ್ರಿ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ಫಲಿತಾಂಶ ಅತ್ಯಂತ ನಿರ್ಣಾಯಕವಾಗಿದೆ. ವಿದ್ಯಾರ್ಥಿಗಳು ನಕಲಿ ಸುದ್ದಿಗಳಿಗೆ ಕಿವಿಗೊಡದೆ, ತಾಜಾ ಮಾಹಿತಿಗಾಗಿ ಹಾಗೂ ಅಧಿಕೃತ ಅಪ್ಡೇಟ್ಸ್‌ಗಳಿಗಾಗಿ ಕೆಇಎ ಅಧಿಕೃತ ವೆಬ್‌ಸೈಟ್‌ ಅನ್ನು ಪರಿಶೀಲಿಸುವಂತೆ ಪ್ರಾಧಿಕಾರವು ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+