KEA: ಯುಜಿನೀಟ್ ಪರೀಕ್ಷೆ ಅಭ್ಯರ್ಥಿಗಳು ಗಮನಿಸಿ: ಸೀಟು ಹಂಚಿಕೆ ಆಗದವರಿಗೆ ಗುಡ್ ನ್ಯೂಸ್
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (UGNEET-25) ಪರೀಕ್ಷೆ ಬರೆದ ಅಭ್ಯರ್ಥಿಗಳು ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ. ಈ ವಾರದಲ್ಲಿ ಪ್ರವೇಶ ಪ್ರಕ್ರಿಯೆ ಕೂಡ ಆರಂಭವಾಗುತ್ತದೆ. ಈ ಮಧ್ಯೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸೀಟು ಹಂಚಿಕೆ ಆಗಿರದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.
ಈಗಾಗಲೇ ಆಪ್ಷನ್‌ಗಳನ್ನು ನಮೂದಿಸಿ ಆದರೆ ಯಾವುದೇ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳು CHOICE ಗಳನ್ನು ನೀಡುವ ಅವಶ್ಯಕತೆ ಇರುವುದಿಲ್ಲ. ಮುಂದಿನ ಸುತ್ತಿನ ಸೀಟು ಹಂಚಿಕೆಗೆ ಭಾಗವಹಿಸಬಹುದು. ಆದರೆ ಎರಡನೇ ಸುತ್ತಿನಲ್ಲಿ ಇಚ್ಛೆ/ ಆಯ್ಕೆಗಳನ್ನು ದಾಖಲಿಸುವ ಪ್ರಕ್ರಿಯೆ ಪ್ರಾರಂಭಿಸಿದ ನಂತರ ಆಪ್ಷನ್ ನಮೂದಿಸುವ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ಲಾಗಿನ್ ಮಾಡಿ ಒಪ್ಪಿಗೆ ನೀಡಿದ ನಂತರ ಮೊದಲನೇ ಸುತ್ತಿನಲ್ಲಿ ಅಭ್ಯರ್ಥಿಗಳು ದಾಖಲಿಸಿದ ಎಲ್ಲಾ options ಗಳನ್ನು ತೋರಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಾರ್ಯ ನಿರ್ವಾಹಕ ನಿರ್ದೇಶಕ ಎಚ್ ಪ್ರಸಣ್ಣ ಅವರು ತಿಳಿಸಿದ್ದಾರೆ.

ಒಂದು ವೇಳೆ ಅಭ್ಯರ್ಥಿಯು ವೈದ್ಯಕೀಯ ಕೋರ್ಸಿಗೆ ಈಗಾಗಲೇ ದಾಖಲಿಸಿರುವ ಆಯ್ಕೆಗಳೊಂದಿಗೆ ಎರಡನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ ಎಚ್ಚರಿಕೆ ಡೆಪೋಸಿಟ್ ಪಾವತಿಸಬೇಕು. (CAUTION DEPOSIT) ಅದರ ಪಾವತಿಗೆ ವೇಳಾಪಟ್ಟಿಯನ್ನು ನೀಡಲಾಗುವುದು. ದಂತ ವೈದ್ಯಕೀಯ ಮತ್ತು ಹೋಮಿಯೋಪತಿ ಸೀಟುಗಳಿಗೆ ಎರಡನೇ ಸುತ್ತಿನಲ್ಲಿ ಭಾಗವಹಿಸುವುದಕ್ಕೆ ಈ ಎಚ್ಚರಿಕೆ ಪಾವತಿ ಅಗತ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಆಗಸ್ಟ್ 9 ಕೊನೆಯ ದಿನ
ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಬಿಡುಗಡೆ ಆಗಿದೆ. ಇದೇ ಮೊದಲ ಬಾರಿಗೆ ಒಂದೊಂದು ಕೋರ್ಸ್‌ಗೂ ಪ್ರತೇಕವಾದ ಪ್ರವೇಶ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆ ಪ್ರಕಾರ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು.
ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಛಾಯ್ಸ್ ಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶನಿವಾರದಿಂದಲೇ ಆರಂಭವಾಗಿದೆ. ಛಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಶುಲ್ಕ ಪಾವತಿ, ನಂತರ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಲು ಆಗಸ್ಟ್ 2ರಿಂದ ಆಗಸ್ಟ್ 8ರವರೆಗೆ ಅವಕಾಶ ನೀಡಲಾಗಿದೆ. ಕಾಲೇಜಿಗೆ ವರದಿ ಮಾಡಿಕೊಳ್ಳಲು ಆಗಸ್ಟ್ 9ರಂದು ಕೊನೆ ದಿನವಾಗಿದೆ.
ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕೆ ಛಾಯ್ಸ್ ಗಳನ್ನು ಆಯ್ಕೆ ಮಾಡಲು ಆಗಸ್ಟ್ 4ರಿಂದ ಅವಕಾಶ ನೀಡಲಾಗಿದೆ. ಛಾಯ್ಸ್-1 ಆಯ್ಕೆ ಮಾಡಿದವರು ಆಗಸ್ಟ್ 4ರಿಂದ 8ರವರೆಗೆ ಶುಲ್ಕ ಪಾವತಿಸಿ, ಆಗಸ್ಟ್ 9ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು.
ಪ್ರಮುಖ ದಿನಾಂಕಗಳು ಗಮನಿಸಿ
ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್, ಆರ್ಕಿಟೆಕ್ಚರ್ ಕೋರ್ಸ್ ಅಭ್ಯರ್ಥಿಗಳು ಆಗಸ್ಟ್ 5ರಿಂದ ಛಾಯ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಛಾಯ್ಸ್-1 ಆಯ್ಕೆ ಮಾಡಿದವರು ಆಗಸ್ಟ್ 11ರೊಳಗೆ ಶುಲ್ಕ ಪಾವತಿಸಬೇಕು. ಆಗಸ್ಟ್ 12ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು.
ಬಿಎಸ್‌ಸಿ ನರ್ಸಿಂಗ್ ಕೋರ್ಸ್‌ಗೆ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಆಗಸ್ಟ್ 6ರಿಂದ ಛಾಯ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಛಾಯ್ಸ್- 1 ಆಯ್ಕೆ ಮಾಡಿದವರು, ಆ.11ರೊಳಗೆ ಶುಲ್ಕ ಪಾವತಿಸಿ, ಆ.12ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳುವಂತೆ ಪರೀಕ್ಷಾ ಪ್ರಾಧಿಕಾರವು ಸೂಚನೆ ನೀಡಿದೆ.
ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಹೋಮಿಯೋಪಥಿ ಕೋರ್ಸ್ ಗಳಿಗೆ ಸೀಟು ಹಂಚಿಕೆಯಾಗಿರುವವರು ಆಗಸ್ಟ್ 7ರಿಂದ ಛಾಯ್ಸ್ ಗಳನ್ನು ಆಯ್ಕೆ ಮಾಡಬಹುದು. ಅವರು ಆಗಸ್ಟ್ 11ರೊಳಗೆ ಶುಲ್ಕ ಪಾವತಿಸಿ, ಆಗಸ್ಟ್ 12ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು. ಎಂಸಿಸಿ ಸೀಟು ಹಂಚಿಕೆ ಫಲಿತಾಂಶವನ್ನು ಆ.6ರಂದು ಪ್ರಕಟವಾಗಲಿದೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.












Click it and Unblock the Notifications