ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಸಾರ್ವತ್ರಿಕ ರಜೆ

ಬೆಂಗಳೂರು, ಆಗಸ್ಟ್ : ನಗರ ಸ್ಥಳೀಯ ಸಂಸ್ಥೆ ಚುನಾವಣೆ ಆಗಸ್ಟ್ 31ರಂದು ನಡೆಯಲಿದ್ದು, ಆಯಾ ಮತ ಕ್ಷೇತ್ರಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಆಗಸ್ಟ್ 31ರಂದು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ರಾಜ್ಯದ 163 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ರಾಜಕೀಯ ಪಕ್ಷಗಳ ನಾಯಕರು ತಳ ಮಟ್ಟದ ನಾಯಕರು ಅವಿರತವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ಹಾಗೂ ಮೂರು ಪಕ್ಷದ ಶಾಸಕರು, ಈ ಸ್ಥಳೀಯ ಸಂಸ್ಥೆ ಚುನಾವಣೆ ಭವಿಷ್ಯ ನಿರ್ಧರಿಸಲಿದ್ದಾರೆ.

ULB poll: General holiday on Aug.31

ಈಗಾಗಲೇ ವಿಧಾನ ಸಭೆ ಚುನಾವಣೆ ಮುಗಿದಿದ್ದು ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಿದೆ. 2013 ರಲ್ಲಿ 208 ನಗರ ಸ್ಥಳೀಯ ಸಂಸ್ಥೆ. ಮುನಿಸಿಪಲ್ ಕಾರ್ಪೋರೇಷನ್ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆದಿತ್ತು.

ವಿಧಾನಸಭೆ ಚುನಾವಣೆಗೂ 12 ತಿಂಗಳ ಮುನ್ನ ಚುನಾವಣೆ ನಡೆದಿತ್ತು. ಆಗ ಫಲಿತಾಂಶ ಕಾಂಗ್ರೆಸ್ ಪರವಾಗಿತ್ತು, ಆದರೆ ಈ ಬಾರಿ ಸಮಯ ಭಿನ್ನವಾಗಿದೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವದಲ್ಲಿದ್ದು ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ್ತಷ್ಟು ರಂಗೇರಿದೆ. ಜೊತೆಗೆ ಲೋಕಸಭೆ ಚುನಾವಣೆ ಕೂಡ ಸಮೀಪಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+