ಸ್ಥಳೀಯ ಸಂಸ್ಥೆಗಳ ಚುನಾವಣೆ ಮೀಸಲು ಪಟ್ಟಿ ಪ್ರಕಟ ಸಾಧ್ಯತೆ

ಬೆಂಗಳೂರು, ಆಗಸ್ಟ್‌ 1: ಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲು ಪಟ್ಟಿ ಬುಧವಾರ ಪ್ರಕಟವಾಗುವ ಸಾಧ್ಯತೆಗಳಿದೆ. ಸರ್ಕಾರವು ರಾಜ್ಯ ಹೈಕೋರ್ಟ್‌ಗೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಿ ನೀಡಲಿದೆ.

ಈ ಕುರಿತು ಮಂಗಳವಾರ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ರಾಜ್ಯದ 215ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಯುಕ್ತ ಅಂತಿಮಗೊಳಿಸಿರುವ ಮೀಸಲು ಪಟ್ಟಿ ಕುರಿತು ಬುಧವಾರದೊಳಗೆ ನೋಟಿಫಿಕೇಷನ್‌ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದೆ.

ಹೈಕೋರ್ಟ್‌ ನಿರ್ದೇಶನದ ಹೊರತಾಗಿಯೂ ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಪಟ್ಟಿ ಪ್ರಕಟಿಸಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯನ್ನು ಮುಖ್ಯ ನಾಯಯಮೂರ್ತಿ ದಿನೇಶ್ ಮಹೇರ್ಶವರಿ ಹಾಗೂ ನ್ಯಾಯಮೂರ್ತಿ ಆರ್‌. ದೇವದಾಸ್‌ ಅರಿದ್ದ ವಿಭಾಗೀಯ ಪೀಠ ಮಂಗಳವಾರ ನಡೆಸಿದೆ.

ULBs election: Reservation list may release today

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲ ಉದಯ ಹೊಳ್ಳ ವಾದಿಸಿ ಈಗಾಗಲೇ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಪಟ್ಟಿ ಪ್ರಕಟಿಸಲಾಗಿದೆ, ಉಳಿದಿರುವ 16 ಸಂಸ್ಥೆಗಳಿಗೆ ಮೀಸಲು ಪಟ್ಟಿ ಅಂತಿಮಗೊಳಿಸಲಾಗಿದೆ. ಆ ಕುರಿತು ಬುಧವಾರ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠದ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ, ಈ ನಡುವೆ ಒಮ್ಮೆ ಚುನಾವಣಾ ಪ್ರಕ್ರಿಯೆ ಆರಂಭವಾದಲ್ಲಿ ಅದರಲ್ಲಿ ನ್ಯಾಯಾಲಯ ಮಧ್ಯೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+