ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟ ಕತ್ತಿಗೆ ಜೀವ ಬೆದರಿಕೆ ಕರೆ

|
Google Oneindia Kannada News

ಬೆಂಗಳೂರು, ಸೆ. 17 : ಪದೇ ಪದೇ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಡುತ್ತಿರುವ ಮಾಜಿ ಸಚಿವ ಮತ್ತು ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರಿಗೆ ಜೀವ ಬೆದರಿಕೆ ಕರೆ ಬರುತ್ತಿದೆಯಂತೆ. ಮಂಗಳವಾರ ಕತ್ತಿ ಅವರು ಈ ಕುರಿತು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ.

ಭೂಗತ ಪಾತಕಿ ರವಿ ಪೂಜಾರಿ ಸಹಚರ ಕಲಿ ಯೋಗೇಶ್ ಹೆಸರಿನಲ್ಲಿ ಸೋಮವಾರದಿಂದ ನನಗೆ 3 ರಿಂದ 4 ಬಾರಿ ಜೀವ ಬೆದರಿಕೆ ಕರೆಗಳು ಬಂದಿವೆಯೆಂದು ಉಮೇಶ್ ಕತ್ತಿ ವಿಧಾನಸೌಧ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ.

Umesh Katti

ಕಳೆದ ಎರಡು ದಿನಗಳಿಂದ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಿ ಎಂದು ಬೆಳಗಾವಿಯಲ್ಲಿ ಹೇಳಿಕೆ ನೀಡುತ್ತಿದ್ದ ಶಾಸಕ ಉಮೇಶ್ ಕತ್ತಿ ಮಂಗಳವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಿದ್ದಾರೆ. ಹೀಗಾಗಿ ಉತ್ತರ ಕರ್ನಾಕಟವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ಅವರು ಪುನರುಚ್ಚರಿಸಿದ್ದಾರೆ. [ಪ್ರತ್ಯೇಕ ರಾಜ್ಯ ಬೇಕೆಂಬ ಕತ್ತಿ ವಿರುದ್ಧ ನಾಯಕರು ಗರಂ]

ಶಾಸಕ ಉಮೇಶ್ ಕತ್ತಿ ಅವರ ಹೇಳಿಕೆಗೆ ಬಿಜೆಪಿಯಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ ಅನಂತ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮುಂತಾದವರು ಕತ್ತಿ ಹೇಳಿಕೆಯನ್ನು ಖಂಡಿಸಿದ್ದಾರೆ. [ಪ್ರತ್ಯೇಕ ರಾಜ್ಯ ಹೋರಾಟದಲ್ಲಿ ಸ್ವಾರ್ಥವಿಲ್ಲ: ಕತ್ತಿ]

English summary
The former Minister and Hukkeri MLA (BJP) Umesh Katti received a threatening phone call. Umesh Katti filed complaint in vidhana soudha police station on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X