BPL Card: ಬಿಪಿಎಲ್ ಕಾರ್ಡ್ಗಳಲ್ಲಿ ಅನರ್ಹ ಫಲಾನುಭವಿಗಳ ಪತ್ತೆ: ಈ ಪಟ್ಟಿಯಲ್ಲಿ ಯಾವ ಜಿಲ್ಲೆ ಪ್ರಥಮ? ಇಲ್ಲಿದೆ ಮಾಹಿತಿ
BPL Card: ಹೊಸ ಬಿಪಿಲ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆಗೆ ಲೋಕಸಭೆ ಚುನಾವಣೆ ಮುಗಿದ ಬಳಿಕ ಅಂದರೆ ಇತ್ತೀಚೆಗಷ್ಟೇ ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ನಡುವೆಯೇ ಈಗಿರುವ ಬಿಪಿಎಲ್ ಕಾರ್ಡ್ಗಳಲ್ಲಿ ಅನರ್ಹ ಫಲಾನುಭವಿಗಳು ಇರುವುದು ಪತ್ತೆ ಆಗಿದೆ. ಹಾಗಾದರೆ ಹೆಚ್ಚು ಅನರ್ಹ ಫಲಾನುಭವಿಗಳು ಯಾವ ಜಿಲ್ಲೆಯಲ್ಲಿದ್ದಾರೆ ಹಾಗೂ ಅಂತಹವರ ವಿರುದ್ಧ ಕ್ರಮ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಿಪಿಎಲ್ ಕಾರ್ಡ್ಗಳಲ್ಲಿ ಅನರ್ಹರ ಪಟ್ಟಿಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ನಂಬರ್ 1 ಸ್ಥಾನದಲ್ಲಿದ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಇದೀಹ ಅನರ್ಹ ಫಲಾನುಭವಿಗಳ ವಿರುದ್ಧ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಆಹಾರ ಇಲಾಖೆಯ ನಿಯಮಗಳನ್ನು ಮೀರಿ ಬಿಪಿಎಲ್ ಕಾರ್ಡ್ ಬಳಕೆ ಮಾಡುವರರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಲು ಅಂದರೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ. ಬಡತನ ರೇಖೆಗಿಂತ ಮೇಲಿರುವವರು ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆ ಆಗಿದ್ದು, ಒಟ್ಟು 40,00,000ಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್‌ದಾರರಾರು ಇರುವುದು ಪತ್ತೆ ಆಗಿದೆ. ಈ ಪಟ್ಟಿಯಲ್ಲಿ ಶೇಕಡ 20ರಷ್ಟು ಬಿಪಿಎಲ್ ಕಾರ್ಡ್‌ಗಳು ಬೆಂಗಳೂರಿನಲ್ಲಿಯೇ ಇರುವುದು ಬೆಳಕಿಗೆ ಬಂದಿದೆ.
ಇದರಲ್ಲಿ ಲಕ್ಷಾಂತರ ಕಾರ್ಡ್‌ಗಳನ್ನು ಅರ್ಹತೆಯಿಲ್ಲದವರೂ ಬಿಪಿಎಲ್ ಕಾರ್ಡ್ ಪಡೆದುಕೊಂಡು ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದು, ಇದರಿಂದ ಅರ್ಹರಿಗೆ ಸಿಗಬೇಕಿರುವ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿದ್ದು, ಅನರ್ಹರ ಕಾರ್ಡ್ ಎಪಿಎಲ್ ಪಟ್ಟಿಗೆ ಸೇರಿಸಲು ಆಹಾರ ಸರಬರಾಜು ಇಲಾಖೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಅನರ್ಹರು ಸಹ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದಾರೆ ಎನ್ನುವ ಅನುಮಾನ ಬಂದ ತಕ್ಷಣ ಆಹಾರ ಇಲಾಖೆ ಕಾರ್ಡುದಾರರ ಹೆಸರಿನಲ್ಲಿ ಪರಿಶೀಲನೆ ನಡೆಸಿತ್ತು. ಕಾರ್ಡುದಾರರಲ್ಲಿ ವಾಹನಗಳು ಇವೆಯಾ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದರೆ, ಫಲಾನುಭವಿಗಳ ಹೆಸರಲ್ಲಿ ಭೂಮಿ ಎಷ್ಟಿದೆ ಎಂಬ ಮಾಹಿತಿಯನ್ನು ಕಂದಾಯ ಇಲಾಖೆ ನೀಡಿದೆ.
ಮತ್ತೊಂದೆಡೆ ಐಟಿ ಪಾವತಿ ಬಗ್ಗೆ ಐಟಿ ಇಲಾಖೆಯಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಸರ್ಕಾರಿ ನೌಕರಿ, ಸರ್ಕಾರಿ ಪ್ರಾಯೋಜಿತ ಇಲಾಖೆ, ನಿಗಮ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆ ಮಾಹಿತಿ ಕಲೆ ಹಾಕಿದೆ. ಅನರ್ಹ ಕಾರ್ಡ್‌ಗಳ ಪತ್ತೆಗಾಗಿ ಆಹಾರ ಇಲಾಖೆಗೆ ಸಾರಿಗೆ, ಕಂದಾಯ ಮತ್ತಿತರ ಇಲಾಖೆಗಳು ಸಾಥ್ ನೀಡಿದ್ದು, ಶೇಕಡ 40ರಷ್ಟು ಅನರ್ಹರು ಇದ್ದಾರೆ ಎನ್ನುವ ಶಾಕಿಂಗ್ ಸಂಗತಿ ಬಯಲಾಗಿದೆ.












Click it and Unblock the Notifications