ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್‌ 2019 : ಕರ್ನಾಟಕದ ನಾಯಕರ ಪ್ರತಿಕ್ರಿಯೆಗಳು

|
Google Oneindia Kannada News

Recommended Video

Union Budget 2019 : ಮೋದಿ ಸರ್ಕಾರದ ಬಜೆಟ್ ಬಗ್ಗೆ ಕರ್ನಾಟಕ ರಾಜಕೀಯ ನಾಯಕರ ಪ್ರತಿಕ್ರಿಯೆ | Oneindia Kannada

ಬೆಂಗಳೂರು, ಫೆಬ್ರವರಿ 01 : ಹಣಕಾಸು ಸಚಿವ ಪಿಯೂಷ್ ಘೋಯೆಲ್ ಮಂಡಿಸಿದ 2019-20ನೇ ಸಾಲಿನ ಬಜೆಟ್‌ಗೆ ಕರ್ನಾಟಕದ ರಾಜಕೀಯ ನಾಯಕರು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಎಲ್ಲಾ ವರ್ಗದ ಬಜೆಟ್ ಇದಾಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಶುಕ್ರವಾರ ಹಣಕಾಸು ಸಚಿವ ಪಿಯೂಷ್ ಘೋಯೆಲ್ ಅವರು 2019-20ರ ಬಜೆಟ್‌ ಮಂಡಿಸಿದರು. 'ಬಜೆಟ್‌ನಲ್ಲಿ ಘೋಷಣೆ ಮಾಡಿದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ನಾನು 2018-19ರ ಬಜೆಟ್ ನಲ್ಲಿ ಪ್ರಕಟಿಸಿದ್ದ ರೈತ ಬೆಳಕು ಯೋಜನೆಯ ಅರ್ಧ ಕಾಪಿ ಎಂದು ಸಿದ್ದರಾಮಯ್ಯ ದೂರಿದರು.

Interim Union Budget 2019 LIVE: 5 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ.

2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ 'ರೈತ ವಿರೋಧಿ' ಮತ್ತು 'ಯುವಜನ ವಿರೋಧಿ' ಆಗಿದೆ. ತೀರಾ ಸಂಕಷ್ಟದಲ್ಲಿರುವ ಈ ಎರಡೂ ವರ್ಗಗಳಿಗೆ ಸಮಾಧಾನ ನೀಡಬಲ್ಲ ಬಲವಾದ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಧ್ಯಂತರ ಬಜೆಟ್ 2019: ಆದಾಯ ತೆರಿಗೆ ಮಿತಿಯಲ್ಲಿ ಏರಿಕೆ

ಕೇಂದ್ರ ಮಧ್ಯಂತರ ಬಜೆಟ್ ಬಗ್ಗೆ ಕರ್ನಾಟಕ ವಿವಿಧ ನಾಯಕರು ನೀಡಿದ ಪ್ರತಿಕ್ರಿಯೆಗಳು ಇಲ್ಲಿವೆ...

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಹಕಾರ ನೀಡಬೇಕು

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಹಕಾರ ನೀಡಬೇಕು

'ರಾಜ್ಯದ ಎಲ್ಲಾ ಜನರು ವಿಜಯೋತ್ಸವ ಆಚರಣೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಸಹಕಾರ ನೀಡಬೇಕು' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 'ಕಿಸಾನ್ ಸನ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6 ಸಾವಿರ ರೂ. ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ನೈಸರ್ಗಿಕ ವಿಕೋಪಕ್ಕೆ ತುತ್ತಾದ ಬೆಳೆಗಳ ಬಡ್ಡಿಯಲ್ಲಿ ಶೇ 2ರಷ್ಟು ವಿನಾಯಿತಿ ನೀಡಲಾಗಿದೆ. ಆದಾಯ ತೆರಿಗೆ ಮಿತಿ ಏಕೆ ಮಾಡಿದ್ದರಿಂದ ಮಧ್ಯಮ ವರ್ಗಕ್ಕೆ ಸಹಹಾರಿಯಾಗಿದ್ದು, ಇದೊಂದು ಐತಿಹಾಸಿಕ ನಿರ್ಧಾರ' ಎಂದರು.

ಎಲ್ಲಾ ವರ್ಗದ ಪರವಾದ ಬಜೆಟ್

ಎಲ್ಲಾ ವರ್ಗದ ಪರವಾದ ಬಜೆಟ್

ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು, 'ಕಿಸಾನ್ ಸಮ್ಮಾನ್ ಯೋಜನೆಯಿಂದಾಗಿ ಕೋಟ್ಯಾಂತರ ಕರ್ನಾಟಕದ ರೈತರಿಗೂ ಅನುಕೂಲವಾಗಲಿದೆ. ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಾಗಿದೆ. ಆದಾಯ ತೆರಿಗೆ ಮಿತಿ 5 ಲಕ್ಷಕ್ಕೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗಕ್ಕೆ ಅನುಕೂಲವಾಗಲಿದೆ' ಎಂದರು.

ಉದ್ಯೋಗ ಸೃಷ್ಟಿಸುವ ಯಾವುದೇ ಕಾರ್ಯಕ್ರಮ ಘೋಷಿಸಿಲ್ಲ

'ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡುವಂತಿದೆ. ಈ ಬಜೆಟ್‌ ನಿರೀಕ್ಷೆಯ ಮಟ್ಟ ತಲುಪಿಲ್ಲ' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಬಜೆಟ್‌ನಲ್ಲಿ ಘೋಷಣೆ ಮಾಡಿದಕಿಸಾನ್ ಸಮ್ಮಾನ್ ಯೋಜನೆ ನಮ್ಮ ರೈತ ಬೆಳಕು ಯೋಜನೆ ಅರ್ಧ ಕಾಪಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ರೈತರಿಗೆ ನೀಡಿರುವ ಹಣ

ಬಿಜೆಪಿಯವರು ರೈತರಿಗೆ ನೀಡಿರುವ ಹಣ

'ಚುನಾವಣೆಯಲ್ಲಿ ಜನರಿಗೆ ನೇರವಾಗಿ ಹಣ ಕೊಡಲು ಆಗಲ್ಲ. ಹಾಗೆ ಕೊಟ್ಟರೆ ಚುನಾವಣಾ ಆಯೋಗದವರು ಹಿಡಿದು ಹಾಕುತ್ತಾರೆ. ಆ ಕಾರಣಕ್ಕೆ 6 ಸಾವಿರ ಹಣ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡುತ್ತಾರೆ ಅಂದುಕೊಂಡಿದ್ದೆವು. ಆದರೆ, ನಿರೀಕ್ಷೆ ಹುಸಿಯಾಗಿದೆ' ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.

ರೈತ ಮತ್ತು ಯುವಜನ ವಿರೋಧಿ ಆಗಿದೆ

2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ 'ರೈತ ವಿರೋಧಿ' ಮತ್ತು 'ಯುವಜನ ವಿರೋಧಿ' ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಬಡವರ ಪರವಾದ ಬಜೆಟ್

ಬಡವರ ಪರವಾದ ಬಜೆಟ್

'ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಬಡವರ ಪರವಾಗಿದೆ. ದೇಶದ ಜನರ ನಿರೀಕ್ಷೆಗಳು ನಿಜವಾಗಿವೆ. ಸಣ್ಣ ಕೈಗಾರಿಕೆಗಳಿಗೆ ಸಾಲದ ಬಡ್ಡಿದರ ಕಡಿಮೆಯಾಗಿದೆ. ತೆರಿಗೆದಾರರಿಗೆ ತುಂಬಾ ಅನುಕೂಲವಾಗಿದ್ದು, ಇದೊಂದು ಜನಪ್ರಿಯ ಬಜೆಟ್' ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

English summary
Finance minister Piyush Goyal presented interim budget 2019-20. Karnataka leaders reaction for the budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X