ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್ 2019 : ಟ್ವೀಟ್ ಮೂಲಕ ಕೇಂದ್ರದ ಕಾಲೆಳೆದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜುಲೈ 05 : ಕೇಂದ್ರ ಬಜೆಟ್ ರೈತರು, ಯುವಜನರು ಮತ್ತು ಗ್ರಾಮೀಣ ಭಾರತಕ್ಕೆ ಮಾರಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ 2ನೇ ಬಜೆಟ್ ಶುಕ್ರವಾರ ಮಂಡನೆಯಾಗಿದೆ.

ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಹಲವು ಕೊಡುಗೆಗಳನ್ನು ನೀಡಲಿದ್ದಾರೆ ಎಂಬ ನಿರೀಕ್ಷೆ ಇತ್ತು.

ಕೇಂದ್ರ ಬಜೆಟ್: ಹೊಸ ಬಾಟಲಿಯಲ್ಲಿ ಹಳೇ ವೈನ್ ಎಂದ ಕಾಂಗ್ರೆಸ್!ಕೇಂದ್ರ ಬಜೆಟ್: ಹೊಸ ಬಾಟಲಿಯಲ್ಲಿ ಹಳೇ ವೈನ್ ಎಂದ ಕಾಂಗ್ರೆಸ್!

ಬಜೆಟ್ ಬಗ್ಗೆ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಿಳಿದಿರಲಿ. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ, ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ‌ ಸಚಿವರೇ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಬಜೆಟ್ 2019 : ಮಾರುಕಟ್ಟೆಗೆ ಬರಲಿದೆ 20 ರೂ. ಹೊಸ ನಾಣ್ಯಕೇಂದ್ರ ಬಜೆಟ್ 2019 : ಮಾರುಕಟ್ಟೆಗೆ ಬರಲಿದೆ 20 ರೂ. ಹೊಸ ನಾಣ್ಯ

'ರೈತರ ಆದಾಯವನ್ನು ದುಪ್ಪಟ್ಟುಗೊಳಿಸುತ್ತೇವೆ ಎಂದು 5 ವರ್ಷಗಳ ಹಿಂದೆ ಆಶ್ವಾಸನೆ ನೀಡಿದ್ದ ಮೋದಿ ಸರ್ಕಾರ ಈ ಆಯವ್ಯಯ ಪತ್ರದಲ್ಲಿಯೂ ಅದರ ಬಗ್ಗೆ ಉಲ್ಲೇಖ ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ ಕೇವಲ 0.3 % ನಷ್ಟು ಮಾತ್ರ ಬಜೆಟ್ ಹಣವನ್ನು ಖರ್ಚು ಮಾಡಿರುವುದು ಸರ್ಕಾರದ ರೈತ ವಿರೋಧಿ ನೀತಿಗೆ ಸಾಕ್ಷಿ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಬಜೆಟ್ 2019 : ಕರ್ನಾಟಕದ ನಾಯಕರ ಪ್ರತಿಕ್ರಿಯೆಕೇಂದ್ರ ಬಜೆಟ್ 2019 : ಕರ್ನಾಟಕದ ನಾಯಕರ ಪ್ರತಿಕ್ರಿಯೆ

ಸರ್ಕಾರ ರೈತರ ವಿಚಾರದಲ್ಲಿ ಕಿವುಡಾಗಿದೆ

ಸರ್ಕಾರ ರೈತರ ವಿಚಾರದಲ್ಲಿ ಕಿವುಡಾಗಿದೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ನಲ್ಲಿ, 'ಸಾಲ ಮನ್ನಾಕ್ಕಾಗಿ ದೇಶದ ರೈತರು ಒಕ್ಕೊರಲಿನಿಂದ ಮೊರೆ ಇಡುತ್ತಿದ್ದಾರೆ. ರಾಜ್ಯದ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಈಗಿನ ಮೈತ್ರಿ ಸರ್ಕಾರಗಳೆರಡೂ ರೈತರ ಮೊರೆಗೆ ಓಗೊಟ್ಟು ಸಾಲ ಮನ್ನಾ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದೆ. ಆದರೆ ನರೇಂದ್ರ ಮೋದಿ ಸರ್ಕಾರ ರೈತರ ಮೊರೆ ಕೇಳದೆ ಇರುವಷ್ಟು ಕಿವುಡಾಗಿದೆ' ಎಂದು ಆರೋಪಿಸಿದ್ದಾರೆ.

ಗ್ರಾಮೀಣ ಭಾರತಕ್ಕೆ ಮಾರಕ

ಗ್ರಾಮೀಣ ಭಾರತಕ್ಕೆ ಮಾರಕ

ಬಜೆಟ್ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, '2019-20ರ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು, ಯುವಜನರು ಮತ್ತು ಗ್ರಾಮೀಣ ಭಾರತಕ್ಕೆ ಮಾರಕವಾಗಿದೆ' ಎಂದು ಆರೋಪಿಸಿದ್ದಾರೆ.

'ಕೃಷಿ ಬೆಳವಣಿಗೆಗೆ ಪೂರಕವಾಗಿರುವ ನೀರಾವರಿ, ತೋಟಗಾರಿಕೆ, ಸಹಕಾರ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗಿದೆ. ನಿರುದ್ಯೋಗ ತಾಂಡವವಾಡುತ್ತಿರುವಾಗ ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿರುವುದರಿಂದ ನಿರುದ್ಯೋಗದ ಪ್ರಮಾಣ ಮಾತ್ರವಲ್ಲ,ವಲಸೆ ಪ್ರಮಾಣ ಕೂಡಾ ಹೆಚ್ಚಾಗಲಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಉದ್ಯೋಗ ಸೃಷ್ಟಿಯಾಗುವುದಿಲ್ಲ

ಉದ್ಯೋಗ ಸೃಷ್ಟಿಯಾಗುವುದಿಲ್ಲ

ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್‌ನಲ್ಲಿ ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ತಿಳಿದಿರಲಿ. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ, ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ‌ ಸಚಿವರೇ' ಎಂದು ಹೇಳಿದ್ದಾರೆ.

'ಇಲ್ಲಿಯವರೆಗೆ ಹೆಚ್ಚುತ್ತಿರುವ ನಿರುದ್ಯೋಗ ಪ್ರಮಾಣದ ಬಗ್ಗೆ ಕಣ್ಣು ಮುಚ್ಚಾಲೆ ಆಡುತ್ತಾ ಬಂದಿರುವ ಕೇಂದ್ರ ಸರ್ಕಾರ ಮೊದಲ ಬಾರಿಗೆ ನಿರುದ್ಯೋಗದ ಪ್ರಮಾಣ ಶೇಕಡಾ 45 ತಲುಪಿದೆ ಎಂದು ಒಪ್ಪಿಕೊಂಡಿರುವುದು ಸ್ವಾಗತಾರ್ಹ ಬೆಳವಣಿ' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜನರ ಕಷ್ಟಗಳು ಹೆಚ್ಚಾಗಲಿವೆ

ಜನರ ಕಷ್ಟಗಳು ಹೆಚ್ಚಾಗಲಿವೆ

ಸಿದ್ದರಾಮಯ್ಯ ಅವರು, 'ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ ನರೇಂದ್ರ ಮೋದಿ ಅವರ ಸರ್ಕಾರ
ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ. ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ. ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ' ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

English summary
Budget news in Kannada : Finance Minister Nirmala Sitharaman presented 2019-20 budget on July 5, 2019. In a series of tweet former Karnataka Chief Minister Siddaramaiah criticized budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X