ಬಜೆಟ್‌ನಲ್ಲಿ ಕರ್ನಾಟಕದ ಅಭಿವೃದ್ಧಿಗೆ ಯೋಜನೆ, ಅನುದಾನ ಕೇಳಿದೆವು, ನಯಾಪೈಸೆಯೂ ಕೊಡಲಿಲ್ಲ: ಸಿದ್ದರಾಮಯ್ಯ
ಕೇಂದ್ರ ಬಜೆಟ್‌ನಲ್ಲಿ ನಾವು ಬೆಂಗಳೂರಿನ ಅಭಿವೃದ್ಧಿಗೆ, ಕಲ್ಯಾಣ ಕರ್ನಾಟಕ, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು, ಅನುದಾನಗಳನ್ನು ಕೇಳಿದ್ದೆವು. ಆದರೆ ನಯಾಪೈಸೆ ಕೊಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 2022ರಿಂದ ಪ್ರತಿ ವರ್ಷ ರಾಜ್ಯಕ್ಕೆ 18ರಿಂದ 20 ಸಾವಿರ ಕೋಟಿ ರೂಪಾಯಿಗಳಷ್ಟು ಜಿಎಸ್‌ಟಿ ಪರಿಹಾರ ನಷ್ಟವಾಗಿದೆ ಎಂದು ವಿವರ ಹಂಚಿಕೊಂಡರು.
ನಾಲ್ಕು ವರ್ಷಗಳಲ್ಲಿ 80,000 ಕೋಟಿವರೆಗೆ ಬಾಬತ್ತಿನಲ್ಲಿ ನಷ್ಟವಾಗಿದೆ. 2020ರಿಂದ 2025ರವರೆಗೆ 2,00,000 ಕೋಟಿ ರೂಪಾಯಿಗಳಷ್ಟು ರಾಜ್ಯಕ್ಕೆ ನಷ್ಟವಾಗಿದೆ. ಜಿಎಸ್‌ಟಿ ಪರಿಹಾರದ ಸೆಸ್ ಅನ್ನು ಕೇಂದ್ರದವರು ಜನರಿಂದ ಸಂಗ್ರಹಿಸುವುದನ್ನು ನಿಲ್ಲಿಸಿದ್ದರೆ ಒಪ್ಪುತ್ತಿದ್ದೆ. ಬೆಲ್ಲದ್ ಅವರೇ 2025-26 ರಲ್ಲಿ 1,67,000 ಕೋಟಿ ರೂಪಾಯಿಗಳಷ್ಟು ಸೆಸ್ ಸಂಗ್ರಹಿಸಿದ್ದಾರೆ ಎಂದರು.

16ನೇ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದರೆ ಆಯೋಗದ ಶಿಫಾರಸ್ಸುಗಳಿಂದಲೂ ನಮಗೆ ಸಿಗಬೇಕಾದ ನ್ಯಾಯ ಸಿಕ್ಕಿಲ್ಲ. 14ನೇ ಹಣಕಾಸು ಆಯೋಗವು ನಮಗೆ ಶೇ 4.71ರಷ್ಟು ತೆರಿಗೆ ಹಂಚಿಕೆ ಮಾಡಿತ್ತು. ಅದಕ್ಕಿಂತ ಹೆಚ್ಚಿನ ಅನುದಾನ ಸಿಕ್ಕರೆ ಮಾತ್ರ ನಮಗೆ ನ್ಯಾಯ ದೊರೆಯುತ್ತದೆ ಎಂದು ಹೇಳಿದ್ದೆವು. ಆದರೆ 16ನೇ ಹಣಕಾಸು ಆಯೋಗವು ಶೇ.4.13ರಷ್ಟನ್ನು ಮಾತ್ರ ಶಿಫಾರಸ್ಸು ಮಾಡಿದೆ ಎಂದು ಅಂಕಿಅಂಶ ಸಹಿತ ವಿವರಿಸಿದರು.
ತೆರಿಗೆ ಪಾಲು ಕೂಡ ಕಡಿಮೆ
ತೆರಿಗೆ ಪಾಲನ್ನು ಶೇ 50ಕ್ಕೆ ಏರಿಸಿ ಎಂದು ಕೇಳಿದ್ದೆವು. ಆದರೆ, ಶೇ.41ರಷ್ಟೇ ಕೊಟ್ಟಿದೆ. ಇದರಿಂದಲೂ ನಮಗೆ 14ನೇ ಹಣಕಾಸು ಆಯೋಗದ ಶಿಫಾರಸ್ಸಿಗೆ ಹೋಲಿಸಿದರೆ ಶೇ.14.1 ರಷ್ಟು ಕಡಿಮೆಯಾಗುತ್ತದೆ. ಕರ್ನಾಟಕದ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 5 ವರ್ಷಗಳಲ್ಲಿ 37,372 ಕೋಟಿ ರೂಪಾಯಿ ಸಿಕ್ಕರೆ, ಉತ್ತರ ಪ್ರದೇಶಕ್ಕೆ 1.17 ಲಕ್ಷ ಕೋಟಿ, ಮಹಾರಾಷ್ಟ್ರಕ್ಕೆ 79.6 ಸಾವಿರ ಕೋಟಿ, ಮಧ್ಯಪ್ರದೇಶಕ್ಕೆ 48,000 ಕೋಟಿ ದೊರೆಯಲಿದೆ. ಹಾಗೆಯೇ ಪ್ರಕೃತಿ ವಿಕೋಪ ನಿಧಿಯಲ್ಲೂ ರಾಜ್ಯಕ್ಕೆ ಭಾರೀ ಅನ್ಯಾಯ ಮಾಡಲಾಗಿದೆ. ನಮಗೆ 5,135 ಕೋಟಿ ರೂ, ಮಹಾರಾಷ್ಟ್ರಕ್ಕೆ 31,597 ಕೋಟಿ, ಗುಜರಾತಿಗೆ 6,766 ಕೋಟಿ ಸಿಗಲಿದೆ ಎಂದರು.

ರಾಜ್ಯಪಾಲರು ಮಾಡಿದ್ದು ಸರಿಯಲ್ಲ
ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ಪೂರ್ತಿ ಭಾಷಣ ಓದದೆ, ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದರು.
ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ. ಮನರೇಗಾ ಬದಲಾಯಿಸಿ "ವಿಬಿ ಜಿ ರಾಮ್ ಜಿ" ಎಂದು ಮಾಡಿದ್ದಾರೆ. ಇದರಲ್ಲಿರುವ ರಾಮ, ಧಶರಥ ರಾಮನೂ ಅಲ್ಲ. ಅಯೋಧ್ಯೆ ರಾಮನೂ ಅಲ್ಲ. ಹೆಸರು ಬದಲಾಯಿಸುವುದಕ್ಕೇ ಕೆಲವರನ್ನು ಅವರು ಇಟ್ಟುಕೊಂಡಿದ್ದಾರೆ ಅನಿಸುತ್ತೆ ಟೀಕಿಸಿದರು.
ಸಂವಿಧಾನದ ಆರ್ಟಿಕಲ್ 176 ಓದಿದ್ದರೆ ಚೆನ್ನಾಗಿರುತ್ತಿತ್ತು. ಸಂವಿಧಾನ ಜಾರಿಯಾದ ದಿನದಿಂದ ಇವತ್ತಿವರೆಗೆ ಜಂಟಿ ಅಧಿವೇಶನಗಳು ನಡೆದುಕೊಂಡು ಬಂದಿವೆ. ಇದು ಸಂವಿಧಾನದ ಪ್ರಕಾರ ನಡೆದುಕೊಂಡು ಬರುತ್ತಿರುವ ಪದ್ಧತಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರ ಬಾಯಲ್ಲೂ ಹೇಳಿಸಿದ್ದೀರಿ ಎಂದು ನೆನಪಿಸಿದರು.
ರಾಜ್ಯಪಾಲರ ಭಾಷಣದ ಮೇಲೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿ 15 ಜನ ಸದಸ್ಯರು ಮಾತನಾಡಿದ್ದಾರೆ. ಕಾಂಗ್ರೆಸ್ 5 ಗಂಟೆ 18 ನಿಮಿಷ, ಬಿಜೆಪಿಯವರು 8 ಗಂಟೆ 53 ನಿಮಿಷ, ಜೆಡಿಎಸ್‌ನವರು 12 ನಿಮಿಷ ಮತ್ತು ಪಕ್ಷೇತರರು 54 ನಿಮಿಷ ಮಾತನಾಡಿದ್ದು, ಹೀಗೆ ಒಟ್ಟು 15 ಗಂಟೆ 17 ನಿಮಿಷ ಚರ್ಚೆ ನಡೆದಿದೆ ಎಂದರು.
ಜೈ ಸಂವಿಧಾನ ಎಂದು ಹೇಳಲಿಲ್ಲ
ರಾಜ್ಯಪಾಲರು ಪೂರ್ಣ ಭಾಷಣವನ್ನು ಓದದೇ, ಮೊದಲನೇ ಹಾಗೂ ಕಡೆಯ ಜೈ ಹಿಂದ್ ಜೈ ಕರ್ನಾಟಕ ಎಂದು ಓದಿದರು. ಭಾಷಣದಲ್ಲಿ ಬರೆದುಕೊಡಲಾಗಿದ್ದ 'ಜೈ ಸಂವಿಧಾನ'ವನ್ನು ಹೇಳಲಿಲ್ಲ. ರಾಷ್ಟ್ರಗೀತೆ ಮುಗಿಯುವವರೆಗೂ ರಾಜ್ಯಪಾಲರು ತೆರಳಬಹುದಿತ್ತು. ಈ ಬಗ್ಗೆ ಸಂವಿಧಾನದ ಕಲಂ 176, 163 ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ.
ಶಾಸಕ ಸುನಿಲ್ ಕುಮಾರ್ ಅವರು 'ಸರ್ಕಾರ ಆಡಳಿತ ಹದಗೆಟ್ಟಿದೆ ಮತ್ತು ಸಂವಿಧಾನರಹಿತ ಸರ್ಕಾರ', 'ಅಸಹಾಯಕ ಮುಖ್ಯಮಂತ್ರಿ' ಎಂದಿದ್ದಾರೆ. ಕೆಲವೊಮ್ಮ ಅಸತ್ಯದ ಎದುರು ಸತ್ಯ ಅಸಹಾಯಕವಾಗುತ್ತದೆ. ಜನರು ನಮ್ಮನ್ನು ಅವರ ಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ. ವಿರೋಧ ಪಕ್ಷದವರ ಮತ್ತು ಸರ್ಕಾರದವರ ಸಿದ್ಧಾಂತಗಳು ವಿಭಿನ್ನವಾಗಿರುತ್ತವೆ. ನಾವಿಬ್ಬರೂ ಪರಸ್ಪರ ಒಪ್ಪಲೇಬೇಕೆಂಬ ಷರತ್ತು ಇಲ್ಲ. ಆದರೆ ನಾವೆಲ್ಲರೂ ಸಂವಿಧಾನ ಒಪ್ಪಲೇಬೇಕು ಎಂದರು.
ಸಂವಿಧಾನಬದ್ಧವಾಗಿ ಸರ್ಕಾರ, ಆಡಳಿತ ನಡೆಯಲೇಬೇಕು. ಸಂವಿಧಾನವನ್ನು ಯಾವುದೇ ಕಾರಣಕ್ಕೂ ವಿರೋಧಿಸಬಾರದು. ರಾಜ್ಯಪಾಲರು ಮೂಲತ: ಉತ್ತಮ ವ್ಯಕ್ತಿಯೇ. ನಾವು ರಾಜ್ಯಪಾಲರ ವಿರುದ್ಧವಿಲ್ಲ. ಆದರೆ ಕೇಂದ್ರ ಸರ್ಕಾರದ ನಮ್ಮ ವಿರೋಧವಿದೆ. ಭಾಷಣದಲ್ಲಿ ಮನರೇಗಾ ರದ್ದುಪಡಿಸಿ ವಿಬಿಜಿರಾಮ್ ಜಿ ಅನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಅದರಲ್ಲಿ 'ಗ್ರಾಮ' ಎನ್ನುವ ಪದವೂ ಇಲ್ಲ. ಈ ಕಾಯ್ದೆ ಜಾರಿಗೆ ಮುನ್ನ 176 ಕಲಂ ಅನ್ನು ಕೇಂದ್ರ ವಿಶ್ಲೇಷಣೆ ಮಾಡಬೇಕಿತ್ತು ಎಂದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications