ಇಂದು ಕೇಂದ್ರ ಸಂಪುಟ ಸಭೆ: ರಾಜ್ಯಕ್ಕೆ ನೆರೆ ಪರಿಹಾರ ಪ್ಯಾಕೇಜ್ ನಿರೀಕ್ಷೆ

ನವದೆಹಲಿ, ಆಗಸ್ಟ್ 28: ಕೇಂದ್ರ ಸಚಿವ ಸಂಪುಟದ ಸಭೆ ಬುಧವಾರ ಸಂಜೆ 4.30ಕ್ಕೆ ನಡೆಯಲಿದೆ. ಆರ್ಥಿಕ ಹಿಂಜರಿತ, ಜಮ್ಮು ಮತ್ತು ಕಾಶ್ಮೀರ ವಿಚಾರ ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆ ಉಂಟಾದ ಪ್ರವಾಹ ಪರಿಸ್ಥಿತಿ ಮುಂತಾದ ಮಹತ್ವದ ವಿಚಾರಗಳು ಇಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ.

ರಾಜ್ಯದ ಬಹುತೇಕ ಭಾಗ ಪ್ರವಾಹದಿಂದ ಹಾನಿಗೊಳಗಾಗಿದೆ. ಕೇಂದ್ರದ ಅಧಿಕಾರಿಗಳ ಅಧ್ಯಯನ ತಂಡ ರಾಜ್ಯದ ವಿವಿಧೆಡೆ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿಯ ಕುರಿತು ಪರಿಶೀಲನೆ ನಡೆಸಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೂ ಹೆಚ್ಚಿನ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಹೀಗಾಗಿ, ಸಚಿವ ಸಂಪುಟ ಸಭೆಯಲ್ಲಿ ನೆರೆಯಿಂದ ಉಂಟಾದ ನಷ್ಟವನ್ನು ಪರಿಹರಿಸಲು ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆಯಿದೆ. ಒಂದು ವೇಳೆ ಹೆಚ್ಚಿನ ಅನುದಾನ ನೀಡಿದರೆ ಪರಿಹಾರ ಕಾರ್ಯಗಳನ್ನು ನಡೆಸಲು ಅನುಕೂಲವಾಗಲಿದೆ.

Union Cabinet Meeting Karnataka Expecting Special Package For Flood Loss

ರಾಜ್ಯದಲ್ಲಿ ಹಿಂಗಾರು ಕೊರತೆಯಿಂದ ಬರ ಪರಿಸ್ಥಿತಿ ಉಂಟಾಗಿದ್ದರಿಂದ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ, ಬರ ಪರಿಹಾರಕ್ಕೆ 2034 ಕೋಟಿ ರೂ. ನೆರವು ಕೋರಿತ್ತು. ಆದರೆ, ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ನೆರೆ ಪರಿಹಾರಕ್ಕೆ ಮನವಿ ಮಾಡುತ್ತಿದ್ದ ಸಂದರ್ಭದಲ್ಲಿ 1,029 ಕೋಟಿ ರೂ. ಬರ ಪರಿಹಾರದ ನೆರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಅದು ಎಲ್ಲ ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಹೀಗಾಗಿ ಅಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಭಾರಿ ಅನುದಾನ ಬಿಡುಗಡೆಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾದ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+