• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಿಂದ ನಿರ್ಮಲಾ ಸೀತಾರಾಮನ್ ಸ್ಪರ್ಧೆ ಇಲ್ಲ: ಅಚ್ಚರಿಯ ಆಯ್ಕೆ?

|
Google Oneindia Kannada News

ನಿಗೂಢತೆ ಕಾಯ್ದುಕೊಳ್ಳುವಲ್ಲಿ ಎತ್ತಿದ ಕೈಯಾಗಿರುವ ಬಿಜೆಪಿಯ ವರಿಷ್ಠರು ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಮತ್ತು ಜೂನ್ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ತುರ್ತಾಗಿ ದೆಹಲಿಗೆ ವರಿಷ್ಠರು ಕರೆಸಿಕೊಂಡಿದ್ದರು. ಆದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಜೈಪುರದ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ಹೋಗಿದ್ದರಿಂದ ಅವರಿಬ್ಬರನ್ನೂ ಸಿಎಂಗೆ ಭೇಟಿಯಾಗಲು ಸಾಧ್ಯವಾಗಿರಲಿಲ್ಲ.\

'ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ''ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ'

ಇನ್ನು, ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲೇ ಇದ್ದರೂ ತಡರಾತ್ರಿಯವರೆಗೂ ಅವರನ್ನೂ ಭೇಟಿಯಾಗಲು ಸಿಎಂಗೆ ಸಾಧ್ಯವಾಗಲಿಲ್ಲ. ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಜೊತೆ ಸಿಎಂ ಬೊಮ್ಮಾಯಿ ಸುದೀರ್ಘ ಮಾತುಕತೆಯನ್ನು ನಡೆಸಿದ್ದಾರೆ.

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಚಾರದಲ್ಲಿ ಹೈಕಮಾಂಡ್ ತಮ್ಮ ಅಂತಿಮ ನಿರ್ಧಾರವನ್ನು ತಿಳಿಸಲು ಸಿಎಂ ಬೊಮ್ಮಾಯಿಯನ್ನು ದೆಹಲಿಗೆ ಕರೆಸಿಕೊಂಡರು ಎನ್ನುವ ಮಾತು ಕೇಳಿ ಬರುತ್ತಿದೆ.

ಹೈಕಮಾಂಡ್ ಅಂಗಣದಲ್ಲಿ ಡಿಕೆಶಿ, ಸಿದ್ದರಾಮಯ್ಯ ಮತ್ತೊಂದು ಸುತ್ತಿನ ಪ್ರತಿಷ್ಠೆಯ ಮೇಲಾಟಹೈಕಮಾಂಡ್ ಅಂಗಣದಲ್ಲಿ ಡಿಕೆಶಿ, ಸಿದ್ದರಾಮಯ್ಯ ಮತ್ತೊಂದು ಸುತ್ತಿನ ಪ್ರತಿಷ್ಠೆಯ ಮೇಲಾಟ

 ರಾಜ್ಯ ಬಿಜೆಪಿ ಕೋರ್ ಕಮಿಟಿಯ ಶಿಫಾರಸು ಪಟ್ಟಿ

ರಾಜ್ಯ ಬಿಜೆಪಿ ಕೋರ್ ಕಮಿಟಿಯ ಶಿಫಾರಸು ಪಟ್ಟಿ

ರಾಜ್ಯ ಬಿಜೆಪಿ ಕೋರ್ ಕಮಿಟಿಯವರು ಶಿಫಾರಸು ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿದ್ದರು. ಇದರೆ ಜೊತೆಗೆ, ಪಕ್ಷದ ಮಾತೃ ಸಂಘಟನೆ ಕಡೆಯಿಂದಲೂ ಇನ್ನೊಂದು ಪಟ್ಟಿ ದೆಹಲಿಗೆ ಹೋಗಿದೆ ಎನ್ನುವ ಸುದ್ದಿ ಚಾಲ್ತಿಯಲ್ಲಿದೆ. ಹಾಗಾಗಿ, ವರಿಷ್ಠರು ಯಾರ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎನ್ನುವ ಕುತೂಹಲ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಮನೆ ಮಾಡಿದೆ. ಈಗ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೆ. ಸಿ. ರಾಮಮೂರ್ತಿಯವರ ರಾಜ್ಯಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ, ಇವರಿಬ್ಬರನ್ನು ಮತ್ತೆ ರಾಜ್ಯದಿಂದ ವರಿಷ್ಠರು ನಿಲ್ಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ.

 ನಿರ್ಮಲಾ ಸೀತಾರಾಮನ್‌ ಕರ್ನಾಟಕದಿಂದ ಹೊರತಾದ ರಾಜ್ಯ

ನಿರ್ಮಲಾ ಸೀತಾರಾಮನ್‌ ಕರ್ನಾಟಕದಿಂದ ಹೊರತಾದ ರಾಜ್ಯ

ನಿರ್ಮಲಾ ಸೀತಾರಾಮನ್‌ರನ್ನು ಕರ್ನಾಟಕದಿಂದ ಹೊರತಾದ, ಬಹುತೇಕ ಉತ್ತರ ಪ್ರದೇಶದಿಂದ ರಾಜ್ಯಸಭೆಯ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಮೂಲದವರಿಗೇ ಟಿಕೆಟ್ ನೀಡುವ ಬಗ್ಗೆ ವರಿಷ್ಠರು ಚಿಂತನೆ ನಡೆಸಿದ್ದಾರೆಂಬ ಸುದ್ದಿಯೂ ಇದೆ. ಈ ಹಿಂದೆ ವೆಂಕಯ್ಯ ನಾಯ್ಡುಗೆ ರಾಜ್ಯದಿಂದ ಟಿಕೆಟ್ ನೀಡಲು ಬಯಸಿದಾಗ 'ವೆಂಕಯ್ಯ ಸಾಕಯ್ಯ' ಎನ್ನುವ ಹ್ಯಾಷ್ ಟ್ಯಾಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

 ಹೊಸ ಮುಖಗಳಿಗೆ ಮನ್ನಣೆ ನೀಡಲಿದೆ ಬಿಜೆಪಿ ಹೈಕಮಾಂಡ್

ಹೊಸ ಮುಖಗಳಿಗೆ ಮನ್ನಣೆ ನೀಡಲಿದೆ ಬಿಜೆಪಿ ಹೈಕಮಾಂಡ್

ಈಗ, ಕರ್ನಾಟಕದವರಲ್ಲದ ನಿರ್ಮಲಾ ಸೀತಾರಾಮನ್ ಬಗ್ಗೆಯೂ ಅಲ್ಲಲ್ಲಿ ಅಪಸ್ವರ ಕೇಳಿ ಬರುತ್ತಿರುವುದರಿಂದ, ಬಿಜೆಪಿ ವರಿಷ್ಠರು ರಿಸ್ಕ್ ತೆಗೆದುಕೊಳ್ಳದೇ ರಾಜ್ಯದ ಮತ್ತು ಪಕ್ಷಕ್ಕೆ ನಿಷ್ಟಾವಂತರಾಗಿರುವ ಇಬ್ಬರ ಹೆಸರನ್ನು ಬಹುತೇಕ ಅಂತಿಮಗೊಳಿಸಿದೆ ಎನ್ನುವ ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಹೊಸ ಮುಖಗಳಿಗೆ ಮನ್ನಣೆ ನೀಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಅವರು ಯಾರು? ಎನ್ನುವುದು ಕುತೂಹಲ

 ನಿರ್ಮಲ್ ಕುಮಾರ್ ಸುರಾನ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ

ನಿರ್ಮಲ್ ಕುಮಾರ್ ಸುರಾನ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ

ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ. ಎಲ್. ಸಂತೋಷ್ ಆಪ್ತವಲಯದಲ್ಲಿ ಕಾಣಿಸಿಕೊಳ್ಳುವ ನಿರ್ಮಲ್ ಕುಮಾರ್ ಸುರಾನ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿರುವ ಗೀತಾ ವಿವೇಕಾನಂದ ಇವರಿಬ್ಬರ ಹೆಸರನ್ನು ವರಿಷ್ಠರು ಪರಿಗಣಿಸುವ ಸಾಧ್ಯತೆಯಿದೆ. ಪ್ರತಿ ಬಾರಿಯೂ ಸುರಾನ ಹೆಸರು ಮುನ್ನಲೆಗೆ ಬಂದು ಪರಿಗಣನೆಯಾಗುತ್ತಿರಲಿಲ್ಲ. ಆದರೆ, ಈ ಬಾರಿ ನಿರ್ಮಲ್ ಕುಮಾರ್ ಸುರಾನಗೆ ರಾಜ್ಯಸಭೆಯ ಟಿಕೆಟ್ ಸಿಗುವ ಸಾಧ್ಯತೆಯಿದೆ.

ನಿರ್ಮಲಾ ಸೀತಾರಾಮನ್
Know all about
ನಿರ್ಮಲಾ ಸೀತಾರಾಮನ್
English summary
Union Finance Minister Nirmala Sitharaman may not contest from Karnataka for Rajya Sabha seat. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X