Breaking: ಕೇಂದ್ರದಿಂದ ರಾಜ್ಯಕ್ಕೆ 8,633 ಕೋಟಿ ರೂ. ಜಿಎಸ್‌ಟಿ ಪರಿಹಾರ
ಬೆಂಗಳೂರು, ಮೇ 31: ಕೇಂದ್ರ ಸರ್ಕಾರವು ರಾಜ್ಯಕ್ಕೆ ಬಾಕಿ ಉಳಿಸಿಕೊಂಡಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೊತ್ತದಲ್ಲಿ 8,633 ಕೋಟಿ ರೂ. ಮಂಗಳವಾರ ಮಂಜೂರು ಮಾಡಿದೆ.
ಕರ್ನಾಟಕವೂ ಸೇರಿದಂತೆ 21 ರಾಜ್ಯಗಳಿಗೆ ನೀಡಬೇಕಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) 86,912 ಕೋಟಿ ರೂ.ಗಳನ್ನು ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಪಾಲು 8,633 ಕೋಟಿ ರೂ. ಸೇರಿದೆ.
"ಕೇಂದ್ರ ಸರ್ಕಾರವು ರಾಜ್ಯಕ್ಕೆ 2022 ರ ಮೇ 31 ರ ವರೆಗಿನ 8,633 ಕೋಟಿ ರೂ ಜಿಎಸ್‌ಟಿ ಪರಿಹಾರ ಮಂಜೂರು ಮಾಡಿದ್ದು, ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವರಾಗಿ ನಿರ್ಮಲಾ ಸೀತಾರಾಮನ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇಂದ್ರವು ರಾಜ್ಯಗಳಿಗೆ ನೀಡಬೇಕಾದ 86,912 ಕೋಟಿ ರೂ ಜಿ ಎಸ್ ಟಿ ಪರಿಹಾರ ನೀಡಿದ್ದು, ಸುಭಿಕ್ಷ ಆರ್ಥಿಕತೆಯತ್ತ ಇದೊಂದು ಮಹತ್ವದ ಹೆಜ್ಜೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.












Click it and Unblock the Notifications