'ಎಫ್.ಎಂ ರೇನ್ ಬೋ ಕನ್ನಡ ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸ'
ಬೆಂಗಳೂರು, ಜ 28: 101.3 ಎಫ್.ಎಂ ರೇನ್ ಬೋ ಕನ್ನಡ ಕಾಮನಬಿಲ್ಲು ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದು ಹೀಗೆ:
"ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ".
"ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ ʼ101.3 ಎಫ್.ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼ ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿರುವುದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು".
"ರೇನ್ ಬೋ ಕನ್ನಡ ಕಾಮನಬಿಲ್ಲು ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ".

ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ
"ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ ʼಅಮೃತವರ್ಷಿಣಿʼಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ" - ಕುಮಾರಸ್ವಾಮಿ ಟ್ವೀಟ್.

ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ
"ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡನಾಡನ್ನು ಉದ್ಧಾರ ಮಾಡುತ್ತೇವೆಂದು ಗೆದ್ದುಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ" - ಕುಮಾರಸ್ವಾಮಿ ಟ್ವೀಟ್.

ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ
"ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿಭಾಷೆಗೆ ಕೊಳ್ಳಿ ಇಡುತ್ತಿರುವ ʼಭಾಷಾಂತಕʼರನ್ನು ನೋಡುತ್ತಾ ಸುಮ್ಮನೆ ಕೂರಲಾರರು, ನೆನಪಿರಲಿ. ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ" - - ಕುಮಾರಸ್ವಾಮಿ ಟ್ವೀಟ್.

ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು
"ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ. ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ. ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ" ಎಂದು ಕುಮಾರಸ್ವಾಮಿಯವರು ಸರಣಿ ಟ್ವೀಟ್ ಅನ್ನು ಮಾಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications