ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 2 ಹೆದ್ದಾರಿಗಳಿಗೆ ಒಪ್ಪಿಗೆ ಕೊಟ್ಟ ಕೇಂದ್ರ

|
Google Oneindia Kannada News

ಬೆಂಗಳೂರು, ಮಾರ್ಚ್ 30; ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದ ಒಪ್ಪಿಗೆ ಸಿಗುತ್ತಿದೆ.

ಕರ್ನಾಟಕದ ಎರಡು ಹೆದ್ದಾರಿ ಯೋಜನೆಗಳಿಗೆ ಮಂಗಳವಾರ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಎರಡು ಯೋಜನೆಗಳು ಸುಮಾರು 890 ಕೋಟಿ ರೂ.ಗಳಿಗೂ ಅಧಿಕ ವೆಚ್ಚದ್ದಾಗಿವೆ.

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಮಂಗಳವಾರ ಟ್ವೀಟ್ ಮೂಲಕ ಈ ರಸ್ತೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ಸಂಸದರು ಈ ಹಿಂದೆ ಸಲ್ಲಿಕೆ ಮಾಡಿದ್ದ ಮನವಿಯ ಆಧಾರದ ಮೇಲೆ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.

ಬೆಂ-ಮೈ 10 ಪಥದ ರಸ್ತೆ ಕುರಿತು ನಿತಿನ್ ಗಡ್ಕರಿ ಟ್ವೀಟ್ ಬೆಂ-ಮೈ 10 ಪಥದ ರಸ್ತೆ ಕುರಿತು ನಿತಿನ್ ಗಡ್ಕರಿ ಟ್ವೀಟ್

Union Govt Approved For Karnatakas Two Road Project

ಯೋಜನೆ 1; ಮಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ-73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ಎರಡು ಪಥಗಳ ರಸ್ತೆ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಯೋಜನೆ ವೆಚ್ಚ 718.52 ಕೋಟಿ ರೂ. ಆಗಿದೆ.

6 ಪಥವಾಗಲಿದೆ ಬೆಂಗಳೂರು-ಹೈದರಾಬಾದ್ ರಸ್ತೆ 6 ಪಥವಾಗಲಿದೆ ಬೆಂಗಳೂರು-ಹೈದರಾಬಾದ್ ರಸ್ತೆ

ಯೋಜನೆ 2; ರಾಷ್ಟ್ರೀಯ ಹೆದ್ದಾರಿ 173ರ ಹೊಸದುರ್ಗ-ಹೊಳಲ್ಕೆರೆ ಮಾರ್ಗವನ್ನು ಸುಸಜ್ಜಿತವಾದ ಎರಡು ಪಥದ ರಸ್ತೆಯಾಗಿ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 170.34 ಕೋಟಿ ರೂ. ವೆಚ್ಚ ಮಾಡಲು ಒಪ್ಪಿಗೆ ಕೊಡಲಾಗಿದೆ.

ಬೆಂಗಳೂರು-ಮೈಸೂರು 10 ಪಥದ ರಸ್ತೆ ಯಾವಾಗ ಪೂರ್ಣ?ಬೆಂಗಳೂರು-ಮೈಸೂರು 10 ಪಥದ ರಸ್ತೆ ಯಾವಾಗ ಪೂರ್ಣ?

ಹಲವು ಯೋಜನೆಗಳಿಗೆ ಒಪ್ಪಿಗೆ; 2020ರ ಡಿಸೆಂಬರ್‌ನಲ್ಲಿ ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವರ್ಚುವಲ್‌ ಮೂಲಕ ನೆರವೇರಿಸಿದ್ದರು.

ಕಳೆದ 6 ವರ್ಷಗಳಲ್ಲಿ ಕರ್ನಾಟಕದಲ್ಲಿ 900 ಕಿ. ಮೀ. ಗಿಂತ ಹೆಚ್ಚಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಗಳಿಗೆ ಸೇರಿಸಲಾಗಿದೆ. ಈಗ ರಾಜ್ಯದಲ್ಲಿ ಒಟ್ಟು 7,652 ಕಿ. ಮೀ. ರಾಷ್ಟ್ರೀಯ ಹೆದ್ದಾರಿ ಇದೆ. 2,384 ಕಿ. ಮೀ. ಉದ್ದದ 37,311 ಕೋಟಿ ರೂ. ವೆಚ್ಚದ ಒಟ್ಟು 71 ಕಾಮಗಾರಿಗಳು ನಡೆಯುತ್ತಿವೆ.

12,286 ಕೋಟಿ ರೂ. ವೆಚ್ಚದ 1,127 ಕಿ. ಮೀ. ಉದ್ದ ಹೊಂದಿರುವ 26 ಕಾಮಗಾರಿಗಳಲ್ಲಿ ಶೇ 70 ಕ್ಕಿಂತ ಹೆಚ್ಚಿನ ಕಾಮಗಾರಿ ಪೂರ್ಣಗೊಂಡಿದೆ. 1257 ಕಿ. ಮೀ. ಉದ್ದದ 25,025 ಕೋಟಿ ರೂ. ವೆಚ್ಚದ 45 ಕಾಮಗಾರಿಗಳಲ್ಲಿ ಶೇ 70ರವರೆಗೆ ಪ್ರಗತಿಯನ್ನು ಸಾಧಿಸಲಾಗಿದೆ.

ವ್ಯಾಪಾರ ಮತ್ತು ಆರ್ಥಿಕತೆಯ ಉತ್ತೇಜನಕ್ಕಾಗಿ ಬಂದರುಗಳಿಗೆ ಸುಗಮ ಸಂಚಾರ ಸಂಪರ್ಕ ಕಲ್ಪಿಸಲು, ಗೋವಾ ಗಡಿಯಿಂದ ಕೇರಳ ಗಡಿಯವರೆಗಿನ 4 ಪಥಗಳ ರಸ್ತೆಯು, ಬಂದರು ನಗರವಾದ ಬೇಲೇಕೇರಿ, ಕಾರವಾರ ಮತ್ತು ಮಂಗಳೂರನ್ನು ಸಂಪರ್ಕಿಸಲಿದೆ. 278 ಕಿ. ಮೀ. ಉದ್ದದ ಈ ರಸ್ತೆ ಕಾಮಗಾರಿಯನ್ನು 3,443 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಸುಮಾರು 1,16,144 ಕೋಟಿ ರೂ. ಗಳನ್ನು ಹೂಡಿಕೆ ಮಾಡಲಿದೆ. 2019-21ನೇ ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿ 5083 ಕೋಟಿ ರೂ. ವೆಚ್ಚದ 275 ಕಿ. ಮೀ. ನ 11 ರಸ್ತೆ ಯೋಜನೆಗಳಿಗೆ ಟೆಂಡರ್ ನೀಡಲಾಗಿದೆ.

ಬೆಂಗಳೂರು-ಮೈಸೂರು ರಸ್ತೆ; ಸೋಮವಾರ ನಿತಿನ್ ಗಡ್ಕರಿ ಬೆಂಗಳೂರು-ಮೈಸೂರು ನಡುವಿನ 10 ಪಥದ ರಸ್ತೆ ಕಾಮಗಾರಿಯ ಚಿತ್ರಗಳನ್ನು ಟ್ವೀಟ್ ಮಾಡಿದ್ದರು. ರಾಷ್ಟ್ರೀಯ ಹೆದ್ದಾರಿ 275ರ ವಿಸ್ತರಣೆ ಕಾರ್ಯವನ್ನು ಅಕ್ಟೋಬರ್ ವೇಳೆಗೆ ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದ್ದರು.

ಈ ಯೋಜನೆ ಪೂರ್ಣಗೊಂಡ ಬಳಿಕ ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಅವಧಿ 3 ಗಂಟೆಯ ಬದಲಿಗೆ 75 ನಿಮಿಷಗಳಿಗೆ ತಗ್ಗಲಿದೆ ಎಂದು ಕೇಂದ್ರ ಸಚಿವರು ಹೇಳಿದ್ದರು. ಬೆಂಗಳೂರು-ನಿಢಘಟ್ಟ-ಮೈಸೂರು ನಡುವಿನ 117 ಕಿ. ಮೀ. ಉದ್ದದ ಹೆದ್ದಾರಿಯನ್ನು 8350 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದರು.

Recommended Video

ಡಿನೋಟಿಫಿಕೇಷನ್ ಕೇಸ್ - ಯಡಿಯೂರಪ್ಪ ಗೆ ದೊಡ್ಡ ತಲೆ ನೋವು ! | Oneindia Kannada

English summary
Union minister for road transport and highways Nitin Gadkari tweeted that union government approved for Karnataka's two road project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X