1200 ಕೋಟಿ ವೆಚ್ಚದಲ್ಲಿ ಶಿರಾಡಿ ಘಾಟ್‌ನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ
ಬೆಂಗಳೂರು, ಜನವರಿ 20 : ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.
ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಗೊಳಿಸಬಹುದಾಗಿದೆ. ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆ.
ರಾಜ್ಯ ಸರ್ಕಾರದಿಂದ ಸಹಕಾರ:
ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಸದ್ಯ ಬಂದ್ ಆಗಿರುವ ಶಿರಾಡಿ ಘಾಟ್ ರಸ್ತೆ:
Recommended Video
ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 75ನ್ನು ಮತ್ತೆ ಬಂದ್ ಮಾಡಲು ಹಾಸನ ಜಿಲ್ಲಾಡಳಿತ ಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಮಾಡಿದೆ. ಹತ್ತು ಕಿಮೀ ರಸ್ತೆ ನಿರ್ಮಾಣಕ್ಕಾಗಿ ಆರು ತಿಂಗಳು ಹಾಗು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲು ಗುತ್ತಿಗೆ ವಹಿಸಿಕೊಂಡ ರಾಜ್ ಕಮಲ್ ಕಂಪೆನಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ..
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications