ಆರೋಗ್ಯ ಕ್ಷೇತ್ರ; ಕರ್ನಾಟಕಕ್ಕೆ ಕೊಡುಗೆ ಕೊಟ್ಟ ಕೇಂದ್ರ ಸರ್ಕಾರ
ಬೆಂಗಳೂರು, ಜನವರಿ 19 : ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಕೊಡುಗೆ ನೀಡಿದೆ. ರಾಜ್ಯದಲ್ಲಿ ಹೊಸದಾಗಿ 100 ಎನ್‌ಸಿಡಿ ಕ್ಲಿನಿಕ್‌ಗಳನ್ನು ಆರಂಭಿಸಲು ಅನುಮೋದನೆ ನೀಡಿದೆ.
ಸಾಂಕ್ರಾಮಿಕವಲ್ಲದ ರೋಗಗಳಿಗೆ ಚಿಕಿತ್ಸೆ ನೀಡುವ ಎಸ್‌ಸಿಡಿ ಕ್ಲಿನಿಕ್‌ಗಳನ್ನು ಗ್ರಾಮೀಣ ಮಟ್ಟಕ್ಕೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಇನ್ನಷ್ಟು ಕ್ಲಿನಿಕ್ ತೆರೆಯಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ ಇರುವ ಕ್ಲಿನಿಕ್‌ಗಳ ಜೊತೆಗೆ ಇನ್ನೂ 100 ಕ್ಲಿನಿಕ್ ಆರಂಭವಾಗಲಿದೆ. 2020ರ ಏಪ್ರಿಲ್‌ನಿಂದ ಕ್ಲಿನಿಕ್ ನಿರ್ಮಾಣವನ್ನು ಆರಂಭಿಸಲಾಗುತ್ತದೆ.

ಪ್ರಸ್ತುತ ರಾಜ್ಯದಲ್ಲಿ ಜಿಲ್ಲಾ ಮಟ್ಟದ 30 ಮತ್ತು ತಾಲೂಕು ಮಟ್ಟದ 243 ಎನ್‌ಸಿಡಿ ಕ್ಲಿನಿಕ್‌ಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಈಗ ಹೊಸ ಕ್ಲಿನಿಕ್‌ಗಳು ಆರಂಭವಾದರೆ ಗ್ರಾಮೀಣ ಮಟ್ಟಕ್ಕೂ ಕ್ಲಿನಿಕ್‌ಗಳನ್ನು ವಿಸ್ತರಣೆ ಮಾಡಲಾಗುತ್ತದೆ.
ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡ ಸಮಸ್ಯೆ, ಕ್ಯಾನ್ಸರ್, ಹೃದಯ ಕಾಯಿಲೆಗಳಿಗೆ ಈ ಕೇಂದ್ರದಲ್ಲಿ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತದೆ. ಗ್ರಾಮೀಣ ಮಟ್ಟಕ್ಕೂ ಕ್ಲಿನಿಕ್ ವಿಸ್ತರಣೆಯಾದರೆ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.












Click it and Unblock the Notifications