• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

AIIMS in Karnataka : ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರ ಸಮ್ಮತಿ

|
Google Oneindia Kannada News

ಬೆಂಗಳೂರು, ಮೇ 18 : ರಾಜ್ಯದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಆರಂಭಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮನವಿ ಮಾಡಿದ್ದರು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ, ಏಮ್ಸ್ ಸ್ಥಾಪನೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆ ತರುವ ಉದ್ದೇಶದಿಂದ ಏಮ್ಸ್ ಸಂಸ್ಥೆಯನ್ನು ರಾಜ್ಯದಲ್ಲಿ ಆರಂಭಿಸುಂತೆ ಸುಧಾಕರ್ ಮನವಿ ಸಲ್ಲಿಸಿದ್ದಾರೆ.

ಸಚಿವ ಸುಧಾಕರ್ ಆಯೋಜಿಸಿದ್ದ ಆರೋಗ್ಯ ಮೇಳ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆಸಚಿವ ಸುಧಾಕರ್ ಆಯೋಜಿಸಿದ್ದ ಆರೋಗ್ಯ ಮೇಳ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆ

ರಾಜ್ಯದಲ್ಲಿ ಈಗಾಗಲೇ ವೈದ್ಯಕೀಯ ಶಿಕ್ಷಣ ಕ್ಷೇತ್ರ ಸಾಕಷ್ಟು ಬೆಳೆದಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಶಿಕ್ಷಣ ಪಡೆದು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೈದ್ಯರಾಗುವ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಲು ಏಮ್ಸ್ ಸಂಸ್ಥೆ ಸ್ಥಾಪಿಸಬೇಕು ಎಂದು ಸಚಿವರು ಮನವಿ ಮಾಡಿದ್ದರು.

ನಿಮ್ಹಾನ್ಸ್ ಕ್ಯಾಂಪಸ್; ಕೇಂದ್ರ ಸಚಿವರನ್ನು ಭೇಟಿಯಾದ ವೇಳೆ ನಿಮ್ಹಾನ್ಸ್ ಸಂಸ್ಥೆಯ ಹೊಸ ಕ್ಯಾಂಪಸ್ ನಿರ್ಮಾಣ ಕುರಿತು ಸಚಿವ ಡಾ. ಕೆ. ಸುಧಾಕರ್ ಕೇಂದ್ರ ಆರೋಗ್ಯ ಸಚಿವರ ಜೊತೆ ಚರ್ಚಿಸಿದರು. 2021ರಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪಿಸಲು ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ ಇದರ ಬದಲು, ನಿಮ್ಹಾನ್ಸ್ ಪಿಜಿ ಸಂಸ್ಥೆ ಆರಂಭಿಸುವಂತೆ ಆರ್ಥಿಕ ಸ್ಥಾಯಿ ಸಮಿತಿ ಸಲಹೆ ನೀಡಿತ್ತು. ಅದರಂತೆ, 2100 ಕೋಟಿ ರೂ. ವೆಚ್ಚದಲ್ಲಿ 2,344 ಹಾಸಿಗೆಯ ಕಟ್ಟಡ ಹಾಗೂ ಪಿಜಿ ಕೇಂದ್ರವನ್ನು 8 ವರ್ಷಗಳಲ್ಲಿ ನಿರ್ಮಿಸುವ ಪ್ರಸ್ತಾವವನ್ನು 2022ರ ಫೆಬ್ರವರಿಯಲ್ಲಿ ಸಲ್ಲಿಸಲಾಗಿತ್ತು. ಆದರೆ ಇದನ್ನು ಪರಿಷ್ಕರಿಸುವಂತೆ ಸಮಿತಿಯು ಸಲಹೆ ನೀಡಿತ್ತು.

ಚಿಕ್ಕಬಳ್ಳಾಪುರದ ಮೆಗಾ ಆರೋಗ್ಯ ಮೇಳ ವಿಶ್ವದಾಖಲೆಯಾಗುತ್ತದೆ: ಡಾ. ಸುಧಾಕರ್ ಚಿಕ್ಕಬಳ್ಳಾಪುರದ ಮೆಗಾ ಆರೋಗ್ಯ ಮೇಳ ವಿಶ್ವದಾಖಲೆಯಾಗುತ್ತದೆ: ಡಾ. ಸುಧಾಕರ್

538 ಹಾಸಿಗೆಗಳ ಪಾಲಿ ಟ್ರಾಮಾ ಕೇಂದ್ರ ಹಾಗೂ ಪಿಜಿ ಸೆಂಟರ್ ನಿರ್ಮಿಸುವ ಡಿಪಿಆರ್ ಸಿದ್ಧಪಡಿಸಿ ನೀಡಲಾಗಿದೆ. ಈ ಯೋಜನೆಯಲ್ಲಿ ಕಟ್ಟಡ ನಿರ್ಮಾಣಕ್ಕೆ 489 ಕೋಟಿ ರೂ. ಖರ್ಚಾಗಲಿದ್ದು, 260.76 ಕೋಟಿ ರೂ. ವೈದ್ಯಕೀಯ ಉಪಕರಣಗಳಿಗೆ ಹಾಗೂ ವಾರ್ಷಿಕ 159 ಕೋಟಿ ರೂ. ಮಾನವ ಸಂಪನ್ಮೂಲಕ್ಕೆ ಖರ್ಚಾಗಲಿದೆ.

ಸಚಿವ ಡಾ. ಕೆ. ಸುಧಾಕರ್; "ರಾಜ್ಯಕ್ಕೆ ಏಮ್ಸ್ ಸಂಸ್ಥೆಯನ್ನು ನೀಡಲು ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರಕ್ಕೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯಗೆ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಏಮ್ಸ್ ಸ್ಥಾಪನೆಯಾದರೆ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮತ್ತಷ್ಟು ಮುಂಚೂಣಿಗೆ ಬರಲು ಹಾಗೂ ರಾಜ್ಯದ ಜನರಿಗೆ ವಿಶ್ವದರ್ಜೆಯ ಆರೋಗ್ಯ ಸೇವೆ ದೊರೆಯಲು ಸಹಾಯಕವಾಗಲಿದೆ" ಎಂದು ಸಚಿವರು ಹೇಳಿದ್ದಾರೆ.

Union Govt Positive Respons To Set Up AIIM At Karnataka Sasy K Sudhakar

ಸಚಿವರು ಸಲ್ಲಿಸಿದ ಮನವಿಗಳು

* ಆರೋಗ್ಯ ಸೇವೆ ನೀಡುವಲ್ಲಿ ನರ್ಸಿಂಗ್ ಹಾಗೂ ಅಲೈಡ್ ಆರೋಗ್ಯ ವಿಜ್ಞಾನಗಳು ಮುಖ್ಯ ಪಾತ್ರ ವಹಿಸಿವೆ. ಇದಕ್ಕಾಗಿ ರಾಜ್ಯಮಟ್ಟದಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸುವುದು.

* ಆಸ್ಪತ್ರೆಗಳ ಆಡಳಿತ ನಿರ್ವಹಣೆಯ ಬಗ್ಗೆ ವೈದ್ಯರಿಗೆ ತರಬೇತಿ ನೀಡುವುದು ಅವಶ್ಯಕ. ವೈದ್ಯರ ತರಬೇತಿ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಆಡಳಿತದ ಪಠ್ಯವನ್ನು ಕೂಡ ಸೇರಿಸಬೇಕಿದೆ. ಇದರಲ್ಲಿ ಪಿಪಿಪಿ ಮಾದರಿಯನ್ನು ಅನುಸರಿಸಬಹುದು.

* ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ನೀಡುವ ಅನುದಾನವು ಖಾಸಗಿ ಮೆಡಿಕಲ್ ಕಾಲೇಜುಗಳನ್ನು ಹೊಂದಿರದ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಈ ನಿಯಮ ಸಡಿಲಿಸಲು ಮನವಿ ಮಾಡಲಾಗಿದೆ.

* ಸೀಟು ಹಂಚಿಕೆ ವೇಳೆ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರತ್ಯೇಕ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯುತ್ತದೆ. ಇಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ ಇರುವುದಿಲ್ಲ. ಈ ನಿಯಮವನ್ನು ಬದಲಿಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಕ್ರಮ ವಹಿಸಬೇಕಿದೆ.

* ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಫಾರ್ಮಸಿ ಕ್ಷೇತ್ರಗಳಲ್ಲಿ ಅಂತರಾಷ್ಟ್ರೀಯ ಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮ ರೂಪಿಸುವಂತೆ ಮನವಿ ಸಲ್ಲಿಸಲಾಗಿದೆ.

* ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರೂಪಿಸಿವ ಯೋಜನೆಗಳಲ್ಲಿ ಸ್ಥಳೀಯ ಹಾಗೂ ಪ್ರಾದೇಶಿಕ ಆರೋಗ್ಯ ಸಮಸ್ಯೆಗಳಿಗೆ ಒತ್ತು ನೀಡಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲು ಕೋರಲಾಗಿದೆ.

English summary
Karnataka health minister Dr. K. Sudhakar said that union health minister Dr Mansukh Mandaviya given green signal for establishing an All India Institute Of Medical Science (AIIMS) in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X