ಸಿ.ಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಇಲ್ಲ ಎಂದ ಕೇಂದ್ರ ಸಚಿವ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಇದೀಗ ಇನ್ನೊಂದು ಹಂತವನ್ನೇ ತಲುಪಿದೆ. ಯಾವ ಮಟ್ಟಕ್ಕೆ ಎಂದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವರೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿ ಇದ್ದಾರೆ ಎಂದು ಕೇಂದ್ರ ಸಚಿವರೊಬ್ಬರು ಗುಡುಗಿದ್ದಾರೆ.

ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ)ದಿಂದ ಬದಲಿ ನಿವೇಶನ ಪಡೆದ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ನ ನಡುವೆ ಪ್ರಾರಂಭವಾದ ವಾಕ್ಸಮರ ಇನ್ನೂ ಮುಗಿದಿಲ್ಲ. ಈ ವಾಕ್ಸಮರ ಹಾಗೂ ಚರ್ಚೆ ಸದ್ಯಕ್ಕೆ ಮುಗಿಯುವ ಲಕ್ಷಣಗಳೂ ಸಹ ಕಾಣಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಇದೀಗ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಿರುಗಿಬಿದಿದ್ದರೆ. ತೀವ್ರವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಯೋತ್ಪಾದಕ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದೀಗ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ.

Union Minister CM Siddaramaiah is not mentally stable

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮೊದಲು ಇದಕ್ಕೆ ಚಿಕಿತ್ಸೆ ಪಡೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳುವ ಹತಾಶೆಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕಾಗಿ ಏನೇನೋ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಮೂಡಾ, ವಾಲ್ಮೀಕಿ ಹಗರಣದಿಂದಾಗಿ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿ ಕಳೆದುಕೊಳ್ಳುವುದು ನಿಚ್ಚಳವಾಗಿದೆ. ಅಧಿಕಾರ ಹೋಗೋ ಕನಸು ಬೀಳುತ್ತಿದೆ ಅವರಿಗೆ. ಹೀಗಾಗಿ ತೀವ್ರ ಹತಾಶೆಗೆ ಒಳಗಾಗಿದ್ದಾರೆ. ಅದಕ್ಕೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಅತ್ಯಂತ ಅಪ್ರಬುದ್ಧ ಮಾತು: ರಾಜಕಾರಣದಲ್ಲಿ ಅಧಿಕಾರ ಬರುತ್ತೆ, ಹೋಗುತ್ತೆ. ಈ ಹತಾಶೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ರೀತಿ ಅತ್ಯಂತ ಅಪ್ರಬುದ್ಧ ಮತ್ತು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಖಾರವಾಗಿಯೇ ಜೋಶಿ ತಿರುಗೇಟು ನೀಡಿದ್ದಾರೆ. ಮುಡಾ ಹಗರಣದ ವಿಚಾರದ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅದರಿಂದ ಹೊರ ಬರಲು ಆಗುತ್ತಿಲ್ಲ ಅವರಿಗೆ. ಸಾಲದ್ದಕ್ಕೆ ರಾಜೀನಾಮೆ ಕೊಡಬೇಕು ಎನ್ನುವ ಒತ್ತಡ ಬೇರೆ ಎದುರಾಗಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮೀತವನ್ನೇ ಕಳೆದುಕೊಂಡಿದ್ದಾರೆ. ಹೀಗಾಗಿ, ಮೊದಲು ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Union Minister CM Siddaramaiah is not mentally stable

ಸಿದ್ದರಾಮಯ್ಯ ಅವರು ಮೊದಲು ನಮ್ಮನ್ನು ಟೀಕೆ ಮಾಡುತ್ತಿದ್ದರು. ನಾವು ಅವರನ್ನು ಟೀಕೆ ಮಾಡುತ್ತಿದ್ದೆವು. ಆದರೆ, ಯಾವತ್ತೂ ಹೀಗೆ ಅಪ್ರಬುದ್ಧ ಹೇಳಿಕೆ ಕೊಡುತ್ತಿರಲಿಲ್ಲ. ಅವರು ಈ ರೀತಿ ಹೇಳಿಕೆ ಈಗ ತೀರಾ ಹತಾಶರಾಗಿದ್ದಾರೆ. ರಾಜಕಾರಣದಲ್ಲಿ ಅಧಿಕಾರ ಬರೋದು - ಹೋಗೋದು ಸಹಜ. ಆದರೆ, ಹೀಗೆ ಹತಾಶರಾಗಬಾರದು ಎಂದು ಸಚಿವ ಜೋಶಿ ಸಲಹೆ ಮಾಡಿದರು.

ಆರ್‌ಎಸ್‌ಎಸ್‌ ಆಗಲಿ ಭಜರಂಗದಳ ಆಗಲಿ ಯಾವುದರ ಮೇಲೂ NIA ಕೇಸ್‌ಗಳು ದಾಖಲಾಗಿಲ್ಲ. ಹಿಂದೆ ಅಧಿಕಾರಿಗಳು ತಪ್ಪು ಮಾಡಿದ್ದರೆ ಹಾಗಾದರೆ, ರಾಜಕಾರಣಿಗಳು ಕೇಸ್ ಮಾಡುತ್ತಾರೆಯೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಈಗ ನೀವು ಕೇಸ್ ಮಾಡುತ್ತಿದ್ದೀರಾ ಹಾಗಾದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+