HD Kumaraswamy: ಅನಾರೋಗ್ಯ ಹಿನ್ನೆಲೆ ಹೆಚ್‌ಡಿ ಕುಮಾರಸ್ವಾಮಿ ಇಂದು ಚೆನ್ನೈ ಆಸ್ಪತ್ರೆಗೆ ದಾಖಲು?

ಇತ್ತೀಚೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗಿತ್ತು. ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಮುಂದಾಗಿದ್ದು, ಇಂದು ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಅವರು ಕೆಲಸದ ಒತ್ತಡದಿಂದ ತುಂಬಾ ದಣಿದಿದ್ದರಿಂದ ಅವರಿಗೆ ಅನಾರೋಗ್ಯ ಕಂಡುಬಂದಿದೆ. ಈ ಹಿನ್ನೆಲೆ ಚಿಕಿತ್ಸೆಗಾಗಿ ಅವರು ಚೆನ್ನೈಗೆ ತೆರಳಲಿದ್ದಾರೆ ಎನ್ನಲಾಗಿದೆ.

ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ. ಕಳೆದ ಮೂರ್ನಾಲ್ಕು ದಿನದಿಂದ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಂಡುಬಂದಿದ್ದು, ಚೆನ್ನೈನಲ್ಲಿ ಚಿಕಿತ್ಸೆ ಪಡೆದು ಬಳಿಕ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ. ಈ ಹಿಂದೆಯೂ ಅವರು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದರು.

Union Minister H D Kumaraswamy Likely To Be Hospitalized For Treatment Today

ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ವೈದ್ಯರ ಸೂಚನೆ ಮೇರೆಗೆ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿತ್ತು.

ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸುವ ಅವರು ಬಿಡುವಿಲ್ಲದೆ ವಿವಿಧ ರಾಜ್ಯಗಳಿಗೆ ಪ್ರವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಅವರ ದೇಹ ತುಂಬಾ ದಣಿದು ಕೆಲಸದ ಒತ್ತಡದಿಂದ ಆರೋಗ್ಯ ಹದಗೆಟ್ಟಿತ್ತು. ಸದ್ಯ ಅಪೋಲೋ ಆಸ್ಪತ್ರೆಯ ವೈದ್ಯರಿಂದ ಅವರು ಚಿಕಿತ್ಸೆ ಕೂಡ ಪಡೆದಿದ್ದು, ಅವರ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು.

Union Minister H D Kumaraswamy Likely To Be Hospitalized For Treatment Today

ಅಲ್ಲದೆ ಅನಾರೋಗ್ಯ ಕಂಡುಬಂದ ಹಿನ್ನೆಲೆ ಹೆಚ್‌ಡಿ ಕುಮಾರಸ್ವಾಮಿ ಅವರ ಕಾರ್ಯಕ್ರಮಗಳು ಕೂಡ ರದ್ದಾಗಿವೆ ಎನ್ನಲಾಗಿದೆ. ಆದರೆ ಕುಮಾರಸ್ವಾಮಿ ಅವರ ಆಪ್ತರು ಅನಾರೋಗ್ಯದ ವಿಚಾರವನ್ನು ಅಲ್ಲಗಳೆದಿದ್ದಾರೆ. ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಹೆಚ್‌ಡಿಕೆ ವಿರುದ್ಧ ಒತ್ತುವರಿ ಆರೋಪ: ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಸಂಸದ ಡಾ.ಸಿಎನ್‌ ಮಂಜುನಾಥ್‌ ಹಾಗೂ ಅವರ ಸಂಬಂಧಿಗಳು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಕಂದಾಯ ಇಲಾಖೆ ಹಾಗೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಅಧಿಕಾರಿಗಳು ಕೂಡ ಇಲ್ಲಿನ ಜಮೀನಿಗೆ ಭೇಟಿ ನೀಡಿ ಸರ್ವೇ ಕೆಲಸ ಆರಂಭಿಸಿದ್ದಾರೆ.

ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸುಮಾರು 14 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ ಎಂದು ಆರೋಪಿಸಿ, ಎಸ್‌.ಆರ್‌. ಹಿರೇಮಠ ಅವರು ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮಣ್ಣ ಅವರ ಹೆಸರು ಕೂಡ ಉಲ್ಲೇಖಿಸಿದ್ದಾರೆ. ಇದರ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ನಡೆಸಿತ್ತು.

ವಿಚಾರಣೆ ವೇಳೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಕುಮಾರಸ್ವಾಮಿ ಉನ್ನತ ಹುದ್ದೆಯಲ್ಲಿರುವ ಕಾರಣ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಲ್ಲವೇ? ನಿಮ್ಮನ್ನು ಜೈಲಿಗೆ ಕಳುಹಿಸಿದರೆ ಎಲ್ಲವೂ ಸರಿ ಹೋಗುತ್ತೆ ಎಂದು ವಾರ್ನಿಂಗ್‌ ಕೊಟ್ಟಿತ್ತು. ಜೊತೆಗೆ ತಕ್ಷಣವೇ ಈ ಆರೋಪ ಸಂಬಂಧ ಸರ್ವೇ ನಡೆಸಿ ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದೆ. ಈ ಹಿನ್ನೆಲೆ ಸರ್ವೇ ಕೆಲಸ ಶುರುವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+