ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಊಹಪೋಹ: ಸ್ಪಷ್ಟನೆ

ಬೆಂಗಳೂರು, ಫೆಬ್ರವರಿ 17: ತೀವ್ರ ಜ್ವರ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವುದಾಗಿ ಹೇಳಲಾಗುತ್ತಿದೆ.

ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ವೈದ್ಯರ ಸೂಚನೆಯ ಮೇರೆಗೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

Union Minister HD Kumaraswamy Admitted To Hospital

ಕೇಂದ್ರ ಸಚಿರರಾದ ಬಳಿಕ ಹೆಚ್‌ ಡಿ ಕುಮಾರಸ್ವಾಮಿ ಅವರು ನಿರಂತರವಾಗಿ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಅವರು ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಸದ್ಯ ಅಪೋಲೋ ಆಸ್ಪತ್ರೆಯ ವೈದ್ಯರಿಂದ ಹೆಚ್.ಡಿ ಕುಮಾರಸ್ವಾಮಿಗೆ ಚಿಕಿತ್ಸೆ ಪಡೆದು, ಜೆಪಿ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಅನಾರೋಗ್ಯದ ಕಾರಣ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಈ ವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರೋದಾಗಿ ಹೇಳಲಾಗುತ್ತಿದೆ.

ಇನ್ನೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಆರೋಗ್ಯದ ಕುರಿತು ಊಹಪೋಹಗಳು ಕೇಳಿ ಬಂದಿದ್ದು, ಈ ಕುರಿತು ಹೆಚ್‌ ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂದು ಅವರ ಆಪ್ತ ವಲಯದಿಂದ ಮಾಹಿತಿ ತಿಳಿದು ಬಂದಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+