HD Kumaraswamy: ಕಾವೇರಿ ಸರ್ವಪಕ್ಷ ಸಭೆಗೆ ಗೈರು; ಬಾದಾಮಿ, ಗೊಡಂಬಿ ತಿನ್ನೊಕೆ ಹೋಗಬೇಕಿತ್ತಾ? ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳ

ನವದೆಹಲಿ, ಜುಲೈ 16: ತಮಿಳುನಾಡಿಗೆ ಈ ತಿಂಗಳ ಅಂತ್ಯದವರೆಗೂ 1 ಟಿಎಂಸಿ ನೀರು ಬಿಡಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಹಿನ್ನೆಲೆಯಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಗೆ ಮಂಡ್ಯದ ಸಂಸದರು ಆಗಿರುವ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ಗೈರಾಗಿದ್ದರು. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರೈತರ ನೆಪದಲ್ಲಿ ನಾಲೆಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ್ದಾರೆ. ಈಗ ಸರ್ವಪಕ್ಷ ಸಭೆ ಕರೆದರೆ ಹೋಗಿ ಏನು ಮಾಡೋದು? ಸಭೆಯಲ್ಲಿ ಕೊಡುವ ಗೊಡಂಬಿ, ಬಾದಾಮಿ ತಿನ್ನಲಿಕ್ಕೆ ಹೋಗಬೇಕಿತ್ತಾ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Union Minister HD Kumaraswamy Defends His Absence For Cauvery All Party Meet

CWRC ಶಿಫಾರಸು ಹಿನ್ನಲೆ ಸರ್ವಪಕ್ಷ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಕರೆದಿದ್ದರು ಈ ಸಭೆಯನ್ನು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಕೆಆರ್‌ಎಸ್ ನಿಂದ ರೈತರ ಹೆಸರಿನಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ನೀರು ಬಿಟ್ಟು ಕಾಟಾಚಾರಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊಡುವ ಗೊಡಂಬಿ ಬಾದಾಮಿ ತಿನ್ನೊಕೆ ಹೋಗಬೇಕಿತ್ತಾ ನಾನು? ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ನೀರು ಬಿಟ್ಟಿದ್ದಕ್ಕೆ ಶಹಬ್ಬಾಸಗಿರಿ ಕೊಡಲು ಹೋಗಬೇಕಾಗಿತ್ತಾ? ಮಂಡ್ಯದಲ್ಲಿ ನಾನು ಜನತಾ ದರ್ಶನ ಮಾಡಿದರೆ ಅಧಿಕಾರಿಗಳು ಭಾಗಿಯಾಗಬಾರದು ಎಂದು ಆದೇಶ ಮಾಡಿದ್ದಾರೆ. ಅಧಿಕಾರಗಳ ಜತೆ ಸಭೆ ನಡೆಸಬಾರದು ಎಂದು ಆದೇಶದ ಮಾಡಿದ ಮೇಲೆ ನಮ್ಮಿಂದ ಏನು ಬಯಸ್ತಾರೆ ಇವರು? ಎಂದು ಕೇಂದ್ರ ಸಚಿವರು ಖಾರವಾಗಿ ಪ್ರಶ್ನಿಸಿದರು.

ಪಾಂಡವಪುರದಲ್ಲಿ ಮತ ಕೊಟ್ಟ ಜನರಿಗೆ ಧನ್ಯವಾದ ಹೇಳಬೇಕಿತ್ತು, ಹೋಗಿದ್ದೆ. ಯಾವ ಸಂದರ್ಭದಲ್ಲಿ ಯಾವ ಕಾರ್ಯಕ್ರಮಕ್ಕೆ ಹೋಗಬೇಕು ಎಂಬುದು ನನಗೆ ಗೊತ್ತಿದೆ. ಇವರ ಅನುಮತಿ ಪಡೆಯಬೇಕಾ? ಏನಕ್ಕೆ ಸಭೆ ಮಾಡಿದ್ದೀರಿ? ಏನು ನಿರ್ಧಾರ ಮಾಡಿದ್ದೀರಿ? ಸಭೆ ಮಾಡಿದ ಮೇಲೂ ಕಡಿಮೆ ಪ್ರಮಾಣದ ನೀರು ಬಿಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕಿಡಿಕಾರಿದರು.

ಇವರು ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಆಂಧ್ರ ಪ್ರದೇಶದ ವಿಶಾಖಪಟ್ಟಣಕ್ಕೆ ಹೋದರೆ ಅಲ್ಲಿನ ಮುಖ್ಯಮಂತ್ರಿಗಳು ಫೋನ್ ಮಾಡಿ ಸಹಕಾರ ಕೇಳ್ತಾರೆ. ನಾನು ರಾಜ್ಯದ ಯೋಜನೆಗಳಿಗೆ ಸಹಿ ಹಾಕಿದರೆ ಅದನ್ನು ನಿಲ್ಲಿಸಲು ಪ್ರಯತ್ನ ಮಾಡುತ್ತೀರಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇನ್ನೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹೆಚ್‌ ಡಿ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಯಾವುದೇ ಕಾರ್ಯಕ್ರಮ ಮಾಡಿದರೂ ಪ್ರಾಮಾಣಿಕವಾಗಿ ಮಾಡುತ್ತೇವೆ. ಇವರ ಥರ ಕಾನೂನು ಬಾಹಿರ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಮಾಡಲು ಯಾರು ಇವರ ಹಿಂದೆ ನಿಂತರೋ ಅವರ ಬದುಕಲ್ಲೇ ಚೆಲ್ಲಾಟ ಆಡುತ್ತಿದ್ದಾರೆ. ಅವರು ಎಷ್ಟು ಶಾಪ ಹಾಕ್ತಿದ್ದಾರೆ ಗೊತ್ತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ನಾನು ಕಾರ್ಪೋರೆಷನ್ ಕಸ ಎತ್ತಿದ್ದಿನಿ. ಸಿನಿಮಾ ಡಬ್ಬಾ ಹೊತ್ತಿದ್ದೀನಿ, ನಮ್ಮ ಕಾಲದಲ್ಲಿ ಸಿಡಿ ಇರಲಿಲ್ಲ. ಕಂಡ ಕಂಡ ಕಡೆ ಕೊಳ್ಳೆ ಹೊಡೆದು ಜೀವನ ಮಾಡಿಲ್ಲ. ಭಾನುವಾರವೂ ಸಭೆ ನಡೆಸಿ ನನ್ನ ವಿರುದ್ಧ ದಾಖಲೆ ಹುಡುಕುತ್ತಿದ್ದಾರೆ. ಸಣ್ಣ ಪುಟ್ಟ ಏನಾದರೂ ಸಿಗುತ್ತವಾ ಎಂದು ಹುಡುಕುತ್ತಿದಾರೆ ಎಂದು ಕೇಂದ್ರ ಸಚಿವರು ಹೆಚ್‌ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+