HD Kumaraswamy: ಸ್ವಪಕ್ಷೀಯರಿಂದಲೇ ಸಿದ್ಧರಾಮಯ್ಯಗೆ ಶರಪಂಜರ ಸೃಷ್ಟಿ: ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು, ಜುಲೈ 30: ನಲವತ್ತು ವರ್ಷಗಳ ಹಿಂದೆಯೇ ಕುಮಾರಸ್ವಾಮಿ ಅವರು ಮೂಡಾ ನಿವೇಶನ ಪಡೆದಿದ್ದಾರೆ, ಸ್ವಾಧೀನ ಪತ್ರವನ್ನೂ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿಸುಳ್ಳು ಹೇಳಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಿದ್ದರಾಮಯ್ಯ ಅವರದ್ದು ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿಯ ಐಡಿಯಾಲಜಿ ಎಂದು ಕುಟುಕಿದ್ದು, ಅದನ್ನು ಸಿದ್ದಾಲಜಿ (Siddalogy) ಎಂದು ಕರೆದಿದ್ದಾರೆ.

Union Minister HD Kumaraswamy Lashed Out At CM Siddaramaiah

ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯನವರೇ. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕುಮಾರಸ್ವಾಮಿ ಸಿಎಂಗೆ ತಿರುಗೇಟು ನೀಡಿದ್ದಾರೆ.

ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ 'ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?' 'ಸುಳ್ಳು ಸಂಶೋಧಕ ಸಿದ್ದರಾಮಯ್ಯ'ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.

'ಮೂಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ' ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ.. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯತೆ ನನಗೆ ಅರ್ಥವಾಗುತ್ತದೆ. ಪಾಪ.. ನಿಮ್ಮ ಪಕ್ಷದವರೇ ನಿಮಗೆ 'ಶರಪಂಜರ' ಸೃಷ್ಟಿಸುತ್ತಿದ್ದಾರೆ! ಎಂದು ಕುಮಾರಸ್ವಾಮಿ ಅವರು ಸಿದ್ಧರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ ಸಹಕಾರ, ಅಸಹಕಾರ.. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ! ಆ ಸಿದ್ದಾಲಜಿ (Siddalogy) ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ ಸಿದ್ದಾಲಜಿ ನನಗೆ ಚೆನ್ನಾಗಿಯೇ ಗೊತ್ತಿದೆ ಎಂದು ನೇರವಾಗಿ ಸಿಎಂಗೆ ಕುಟುಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+