ಮಂಡ್ಯದ ವರ್ತುಲ ರಸ್ತೆ ಯೋಜನೆ, ಪ್ರಮುಖ ಹೆದ್ದಾರಿ ಅಭಿವೃದ್ಧಿ ಬಗ್ಗೆ ಮಹತ್ವದ ಚರ್ಚೆ

ಕೇಂದ್ರ ಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಮಂಡ್ಯದ ವರ್ತುಲ ರಸ್ತೆ ಯೋಜನೆ ಸೇರಿದಂತೆ ರಾಜ್ಯದ ಪ್ರಮುಖ ಕಾಮಗಾರಿಗಳ ಬಗ್ಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ತಾತ್ಕಾಲಿಕವಾಗಿ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳನ್ನು ಮುಗಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದೆ. ಮಂಡ್ಯದ ವರ್ತುಲ ರಸ್ತೆ ಯೋಜನೆಯೂ ಕರ್ನಾಟಕದ ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿದೆ. ಆದರೆ ಈ ಯೋಜನೆಯ ಕಾಮಗಾರಿ ಬಾಕಿ ಉಳಿದಿದೆ. ಈ ಯೋಜನೆ ಸೇರಿದಂತೆ ಹಲವು ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆಯಾಗಿದೆ. ಅದರ ವಿವರ ಇಲ್ಲಿದೆ.

ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಮುಗಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು ಎಂದು ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್‌ ಮಾಡುವ ಮೂಲಕ ಯಾವೆಲ್ಲ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆದಿದೆ ಎನ್ನುವುದನ್ನು ವಿವರಿಸಿದ್ದಾರೆ. ಅದರ ವಿವರ ಮುಂದುವರಿದು ಇದೆ.

Union Minister HD Kumaraswamy Nitin Gadkaris Discussion about Mandya Ring Road Project

ಮಂಡ್ಯದ ವರ್ತುಲ ರಸ್ತೆ ಯೋಜನೆ ರಾಜ್ಯದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆ ಜಾರಿ ಆಗುವುದರಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುಕೂಕವಾಗಲಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಕಾಮಗಾರಿಯ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ಮಾಡಲಾಗಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದಕ್ಕೆ ಮನವಿ ಮಾಡಲಾಗಿದೆ. ಅಲ್ಲದೇ ವಿವಿಧ ಕಾಮಗಾರಿಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಆ ಕಾಮಗಾರಿಗಳ ವಿವರ ಈ ರೀತಿ ಇದೆ.

* ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ -ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ನಗರದ ಎಲ್ಲಾ ಜಂಕ್ಷನ್, ಪಾದಚಾರಿ ಮಾರ್ಗ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಾಗಿದೆ. ಈ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಮನವಿ ಮಾಡಲಾಗಿದೆ.

* ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ.

* ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿ (NH-42).

* ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು ನಡುವಿನ ಹೆದ್ದಾರಿ (NH-69).

* ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69.

* NH-42ರಿಂದ ಹೊಸಕೋಟೆ -ಗೌನಿಪಲ್ಲಿ - ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮನವಿಗೆ ನಿತಿನ್ ಗಡ್ಕರಿ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು ಎಂದು ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+