Get Updates
Get notified of breaking news, exclusive insights, and must-see stories!

ವಯನಾಡು ಭೂಕುಸಿತ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ ಎಂದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು, ಜುಲೈ. 30: ಕೇರಳದ ವಯನಾಡಿನಲ್ಲಿ ಆಗಿರುವ ಭೂಕುಸಿತದಲ್ಲಿ ಸಾವಿನ ಸಂಖ್ಯೆ ನೂರರ ಹತ್ತಿರಕ್ಕೆ ಹೋಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಈವರೆಗೂ 93 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 30 ಮತ್ತು 31 ರಂದು ಎರಡು ದಿನಗಳ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇರಳ ಸರ್ಕಾರ ಘೋಷಿಸಿದೆ.

ಕೇರಳ ನಮ್ಮ ರಾಜ್ಯದ ಪಕ್ಕದಲ್ಲೇ ಇರುವ ಕಾರಣ ಇಲ್ಲಿಯೂ ಪ್ರವಾಹ ಉಂಟಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಲ್ಲಿಯೂ ಮಳೆ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಗ್ರಹಿಸಿದ್ದಾರೆ.

Union minister HD Kumaraswamy Reaction on Wayanad landslides

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆರೆದುಕೊಂಡಿರುವ ಅವರು, "ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ" ಎಂದಿದ್ದಾರೆ.

"ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ನೂರಾರು ಗ್ರಾಮಗಳಿಗೆ ನುಗ್ಗಿದೆ, ಅಪಾರ ಬೆಳೆ ನಾಶವಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಜನರ ಜತೆಯಲ್ಲಿರಬೇಕು" ಎಂದು ಹೇಳಿದ್ದಾರೆ.

"ಸರಕಾರ, ಸಚಿವರು, ಶಾಸಕರು, ಅಧಿಕಾರಿಗಳಿಗೆ ನನ್ನ ಕಳಕಳಿಯ ಸಲಹೆ ಇಷ್ಟೇ. ಇಂಥ ದುರಿತ ಪರಿಸ್ಥಿತಿಯಲ್ಲಿ ಇಡೀ ಆಡಳಿತ ವ್ಯವಸ್ಥೆ ಜನರ ಹತ್ತಿರದಲ್ಲಿರಬೇಕು. ರೈತರೊಂದಿಗೆ ನೇರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿರಬೇಕು. ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯವನ್ನು ನಿರ್ಲಕ್ಷಿಸಬಾರದು" ಎಂದು ಒತ್ತಾಯಿಸಿದ್ದಾರೆ.

Union minister HD Kumaraswamy Reaction on Wayanad landslides

"ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೂಡಲೇ ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+