'ಕುಮಾರಸ್ವಾಮಿ ಹೆದರೋದು ಆ ಇಬ್ಬರಿಗೆ ಮಾತ್ರ..' ಯಾರವರು?

ರಾಜ್ಯ ರಾಜಕಾರಣದಲ್ಲಿ ಹಾಲಿ ಹಾಗೂ ಮಾಜಿ ಸಿಎಂಗಳ ಜಗಳ ಜೋರಾಗಿಗೆ. ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನಡುವೆ ಟಾಕ್‌ ವಾರ್‌ ನಡೆಯುತ್ತಿದ್ದು, ಇಂದು ಕುಮಾರಸ್ವಾಮಿ ಅವರು ಮತ್ತೆ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿಗೆ ನನ್ನ ಬಗ್ಗೆ ಭಯ ಇದೆ. ನಾನು ಅಧಿಕಾರದಲ್ಲಿ ಇದ್ದರೆ ಅವರ ಪಕ್ಷ ದುರ್ಬಲವಾಗುತ್ತದೆ ಎನ್ನುವ ಭಯ ಕಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಅವರು ದೆವ್ವ ಆಗಿದ್ದರೆ ಭಯ ಬೀಳಬೇಕು. ಅವರೇನು ದೆವ್ವ ಅಲ್ಲವಲ್ಲ, ಹಾಗಾಗಿ ನಾನ್ಯಾಕೆ ಅವರಿಗೆ ಭಯ ಬೀಳಬೇಕು? ಎಂದು ಕುಮಾರಸ್ವಾಮಿ ಟಾಂಗ್‌ ನೀಡಿದ್ದಾರೆ.

Union Minister HD Kumaraswamy Said That CM Siddaramaiah Is Not A Devil

ನಮ್ಮ ಜೆಡಿಎಸ್ ಪಕ್ಷ ದುರ್ಬಲವಾಗುತ್ತೋ? ಅಥವಾ ಬಲವಾಗುತ್ತೋ? ಎನ್ನುವುದನ್ನು ಆ ದೇವರು ನೋಡಿಕೊಳ್ಳುತ್ತಾನೆ. ಈ ಕುಮಾರಸ್ವಾಮಿ ಹೆದರುವುದು ಕೇವಲ ದೇವರಿಗೆ ಮತ್ತು ಜನರಿಗೆ ಮಾತ್ರ. ಮೊದಲು ಅವರು ಸಮಸ್ಯೆಯಲ್ಲಿರುವುದನ್ನು ಬಗೆಹರಿಸಿಕೊಳ್ಳಲಿ ಎಂದು ಗುಡುಗಿದ್ದಾರೆ.

ಸಿದ್ದರಾಮಯ್ಯ ಅವರಂತಹ ಲಕ್ಷ ಜನ ಬಂದರೂ ನಾನು ಹೆದರುವುದಿಲ್ಲ. ನಾನೇನು ಸಿದ್ದರಾಮಯ್ಯ ಅವರಿಂದ ರಾಜಕೀಯಕ್ಕೆ ಬಂದಿದ್ದೀನಾ? ನನ್ನ ಸ್ವಂತ ದುಡಿಮೆ ಹಾಗೂ ಕಾರ್ಯಕರ್ತರಿಂದಾಗಿ ಈ ಮಟ್ಟಕ್ಕೆ ಬಂದಿದ್ದೇನೆ. ನಾನು ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಜಕೀಯ ಮಾಡಿಲ್ಲ. ದೇವೇಗೌಡರ ನೆರಳಿನಲ್ಲಿ ಬೆಳೆದು ಬಂದಿರುವ ನಾನು ನಾಡಿನ ಜನರಿಗೆ ಮಾತ್ರ ಹೆದರುತ್ತೇನೆ ಎಂದು ಹೇಳಿದ್ದಾರೆ.

Union Minister HD Kumaraswamy Said That CM Siddaramaiah Is Not A Devil

ಕುಮಾರಸ್ವಾಮಿ ಹತ್ತಿರ ಇವರದು ಏನು ನಡೆಯಲ್ಲ. ಎಫ್‌ಐಆರ್ ಮಾಡಿ ಹೆದರಿಸುವ ಕೆಲಸ ಅಷ್ಟೇ. ಕಾಲ ಪ್ರತಿಯೊಂದಕ್ಕೂ ಉತ್ತರ ನೀಡಲಿದೆ. ಈ ಸರ್ಕಾರ ಎಲ್ಲವನ್ನು ಬಿಟ್ಟಿರುವ ಸರ್ಕಾರ. ಭಯ ಭಕ್ತಿ ಇಲ್ಲದ ಭಂಡ ಸರ್ಕಾರ. ಇವತ್ತಿನ ರಾಜಕೀಯ ಬೆಳವಣಿಗೆಗೆ ಕಾಲವೇ ಉತ್ತರ ಕೊಡಲಿದೆ ಎಂದು ಹೇಳಿದರು.

ಕುಮಾರಸ್ವಾಮಿ ಹತ್ತಿರ ಯಾರ ಆಟವೂ ನಡೆಯುವುದಿಲ್ಲ. ಎಫ್‌ಐಆರ್ ಮಾಡಿದಕ್ಕೆ ಹೆದರುವ ವ್ಯಕ್ತಿ ನಾನಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ನೀಡಲಿದೆ. ಎಲ್ಲವನ್ನೂ ಬಿಟ್ಟಿರುವ ಸರ್ಕಾರ ಇದು. ಭಯ ಭಕ್ತಿಯೇ ಇಲ್ಲದ ಭಂಡ ಸರ್ಕಾರ. ಇವತ್ತಿನ ರಾಜಕೀಯ ಬೆಳವಣಿಗೆಗೆ ಕಾಲವೇ ಉತ್ತರ ಕೊಡುತ್ತೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಚನ್ನಪಟ್ಟಣ ಚುನಾವಣೆಗೆ 50 ಕೋಟಿ ರೂಪಾಯಿಗಾಗಿ ತನಗೆ ಬೆದರಿಕೆ ಹಾಕಿರುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರ ವಿರುದ್ಧ ಉದ್ಯಮಿ ವಿಜಯ್‌ ತಾತಾ ದೂರು ನೀಡಿದ್ದಾರೆ. ಉದ್ಯಮಿ ಕೊಟ್ಟಿರುವ ದೂರಿನ ಮೇರೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಬಗ್ಗೆ ಎಫ್‌ಐಆರ್‌ ದಾಖಲಾಗಿರುವುದು ನಿಜ. ಈ ಪ್ರಕರಣವನ್ನು ನಿಸ್ಪಕ್ಷಪಾತವಾಗಿ, ಪಾರದರ್ಶಕವಾಗಿ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಪೊಲೀಸ್‌ ಕಮೀಷನರ್‌ ಬಿ.ದಯಾನಂದ್‌ ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಬಂಧಿಸಬೇಕು ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+