HDK VS DKS: ಡಿ ಕೆ ಶಿವಕುಮಾರ್‌ನಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ : ಹೆಚ್‌ ಡಿ ಕುಮಾರಸ್ವಾಮಿ ಹೀಗೆ ಹೇಳಿದ್ಯಾಕೆ?

ಬೆಂಗಳೂರು, ಜೂನ್‌ 20: 2028ಕ್ಕೆ ಜೆಡಿಎಸ್ -ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೋಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ನೀಡಿರುವ ಅಹಂಕಾರದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ. ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯವನ್ನು ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ದಾರಿದ್ರ್ಯ ಇರುವುದು ಅವರಿಗೆ. ಮನುಷ್ಯತ್ವದ ದಾರಿದ್ರ್ಯ ಅವರಿಗೆ ಇದೆ. ಜನರಿಂದ ಕೊಳ್ಳೆ ಹೊಡೆದ ಆ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕಾ? ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ, ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ. ಆ ವ್ಯಕ್ತಿಯ ಪಾಪದ ಹಣ, ಲೂಟಿ ಹೊಡೆದಿರುವ ಹಣದಿಂದ ಬಟ್ಟೆ ತರಿಸಿಕೊಳ್ಳಬೇಕಾ? ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

Union Minister HD Kumaraswamy scathing attack on DCM D K Shivakumar

ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ. ಓ ಅದಾ..? ನಿಮಗೆ ಅಚ್ಚರಿನಾ? ಅಚ್ಚರಿನಾ? ಅದು ನಿರಂತರವಾಗಿ ನಡೆಯುತ್ತಿದೆ. ಸೈಟ್ ಕೊಡಬೇಕಾದರೆ, ದುಡ್ಡು ಕೊಡಬೇಕಾದರೆ ಕಮಿಷನ್ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣಭೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿ ನಾನು ಕಾನೂನು ಹೋರಾಟ ಮಾಡುತ್ತಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ನಾನು ಮೊದಲೇ ಹೇಳಿದ್ದೇನೆ. ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು. ರಾಜಕೀಯ ದ್ವೇಷ ಮಾಡುತ್ತಿದೆ ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ. ಆದರೆ ಇವರು ಮಾಡುತ್ತಿರುವುದು ಏನು? ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಇಟ್ಟುಕೊಂಡು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾಲವೇ ಉತ್ತರ ನೀಡುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+