HD Kumaraswamy: ಹೆಬ್ಬೆಟ್ಟು ಗೃಹ ಸಚಿವರು ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಮಂಡ್ಯ,ಡಿಸೆಂಬರ್ 26: ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವರು ಇದ್ದಾರೆ. ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎನ್ನುವುದು ಸ್ವತಃ ಅವರಿಗೇ ಗೊತ್ತಿಲ್ಲ. ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಪ್ರಕರಣ ನಿರ್ವಹಿಸಿದ ಗೃಹ ಸಚಿವ ಪರಮೇಶ್ವರ್ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಭೇಟಿ ಮಾಡಲು ಪೊಲೀಸ್ ಸ್ಟೇಷನ್‌ಗೆ ಬಂದ ಬಿಜೆಪಿ ನಾಯಕರಿಗೆ ಕೂತು ಮಾತನಾಡಲು ಅವಕಾಶ ಕೊಟ್ಟರು ಎಂದು ಪೊಲೀಸ್ ಅಧಿಕಾರಿಯನ್ನು ರಾಜ್ಯ ಸರಕಾರ ಸಸ್ಪೆಂಡ್ ಮಾಡಿದೆ. ಆದರೆ, ಸಿ.ಟಿ.ರವಿ ತಲೆ ಹೊಡೆದು ರಕ್ತ ಬರುವಂತೆ ಮಾಡಿದವರ ವಿರುದ್ಧ ಕ್ರಮ ಏನು? ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ರಾಜ್ಯದಲ್ಲಿರುವ ಗೃಹ ಸಚಿವ ಹೆಬ್ಬೆಟ್ಟು. ಅವರ ಇಲಾಖೆಯಲ್ಲಿ ಏನು ನಡೆಯುತ್ತಿದೆ ಸ್ವತಃ ಅವರಿಗೇ ಗೊತ್ತಿಲ್ಲ. ಕಳೆದ ಎರಡು ದಿನಗಳಿಂದ ಬರುತ್ತಿರುವ ಚಿನ್ನ ದೋಖಾ ಕೇಸುಗಳ ವಿರುದ್ಧ ಗೃಹ ಇಲಾಖೆಯ ಏನು ಕ್ರಮ ಕೈಗೊಂಡಿದೆ. ಇವರು ಬರೀ ಗಾಂಧೀಜಿ ಅವರ ಹೆಸರು ಹೇಳಿದರೆ ಆಗಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು, ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಳಗಾವಿಯಲ್ಲಿ ಕೋಟ್ಯಂತರ ರೂಪಾಯಿ ಜನಗಳ ದುಡ್ಡು ಖರ್ಚು ಮಾಡಿ ಏನು ಸಂದೇಶ ಕೊಡುತ್ತಿದ್ದಾರೆ ಇವರು. ಇದು ನಾಗರೀಕ ಸರಕಾರವಾ? ಇಂತಹ ವಾತಾವರಣ ಹಿಂದೆಂದೂ ರಾಜ್ಯದಲ್ಲಿ ಇರಲಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯ ಎಲ್ಲಿಗೆ ಹೋಗಿ ನಿಲ್ಲಲಿದೆ? ಎಂದು ಹೆಚ್ ಡಿ ಕುಮಾರಸ್ವಾಮಿ ಕೇಳಿದರು.
ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ: JDS ಒತ್ತಾಯ
ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂಬುದಾಗಿ ಜೆಡಿಎಸ್ ಆಗ್ರಹಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದ ಕಾಂಗ್ರೆಸ್ ಸರ್ಕಾರ. ಬಾಕಿ ಉಳಿಸಿಕೊಂಡಿರುವ ಪಿಎಫ್ ಹಣ, 38 ತಿಂಗಳ ಆರಿಯರ್ಸ್ ಮತ್ತು ಗ್ಯಾಚ್ಯುಟಿ ಹಣವನ್ನ ಪಾವತಿಸುವಂತೆ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕ ಹೇಳಿದೆ.
ಡಿಸೆಂಬರ್ 30ರ ಒಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೇ, ರಾಜ್ಯವ್ಯಾಪಿ ಸರ್ಕಾರಿ ಬಸ್ ಸೇವೆ ಬಂದ್ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಅಂತ ಒತ್ತಾಯಿಸಿದೆ.












Click it and Unblock the Notifications