ಡಿಕೆ ಶಿವಕುಮಾರ್ ಬಿಜೆಪಿಗೆ ಸೇರ್ತಾರಾ?, ಜಾವಡೇಕರ್ ಹೇಳಿದ್ದೇನು?

ಬೆಂಗಳೂರು, ನವೆಂಬರ್ 14: ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ ಐಟಿ ಅಧಿಕಾರಿಗಳು ಡಿಕೆಶಿಯನ್ನು ಬಿಜೆಪಿಗೆ ಸೇರಿ ಎಂದು ಒತ್ತಡ ಹೇರಿದ್ದರು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪಗಳಿಗೆ ಎಡೆಮಾಡಿಕೊಟ್ಟಿದೆ.

ಇದಕ್ಕೆಲ್ಲ ಇದೀಗ ಸ್ವತಃ ಕರ್ನಾಟಕ ಬಿಜೆಪಿ ಚುನಾವಣೆ ಉಸ್ತುವಾರಿ ಹಾಗೂ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್ ಮಂಗಳವಾರ ಸ್ಪಷ್ಟನೆ ನೀಡಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

Union minister Prakash Javadekar has reacts about DK Shivakumar join BJP

"ಡಿ.ಕೆ.ಶಿವಕುಮಾರ್ ಬಿಜೆಪಿಗೆ ಸೇರುತ್ತಾರೆ ಎನ್ನುವುದು ಆಧಾರ ರಹಿತವಾಗಿದ್ದು, ಬಿಜೆಪಿಗೆ ಬರುವಂತೆ ಅವರಿಗೆ ಆಹ್ವಾನವೇ ನೀಡಿಲ್ಲ" ಎಂದು ಪ್ರಕಾಶ ಜಾವಡೇಕರ್ ಸ್ಪಷ್ಟಪಡಿಸಿದರು.

ಇನ್ನು ಡಿಕೆಶಿ ಅವರನ್ನು ಬಿಜೆಪಿಗೆ ಸೇರುವಂತೆ ಐಟಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.

ಇದನ್ನು ಐಟಿ ಅಧಿಕಾರಿಗಳು ತಳ್ಳಿ ಹಾಕಿ, ಇಂತಹ ಯಾವುದೇ ಒತ್ತಡಗಳನ್ನು ಡಿಕೆ ಶಿವಕುಮಾರ್ ಮೇಲೆ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+