ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 3 ವರ್ಷಗಳಲ್ಲಿ ಗ್ರಾಮೀಣ ಭಾಗದ ಪ್ರತಿ ಮನೆಗೆ 'ನಲ್ಲಿ ನೀರು' ಹೇಗೆ?

|
Google Oneindia Kannada News

ಬೆಂಗಳೂರು, ಮೇ 20: ಹಿಂದೆಂದಿಗಿಂತಲೂ ನೀರಿನ ಅಗತ್ಯತೆ ಹೆಚ್ಚಾಗಿರುವ ಈ ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ತ್ವರಿತಗತಿಯಲ್ಲಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಯೋಜನೆಯನ್ನು ಕರ್ನಾಟಕ ರಾಜ್ಯದಲ್ಲಿ ಪೂರ್ಣಗೊಳಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತಂತೆ ಕೇಂದ್ರ ಸಚಿವ ಶೇಖಾವತ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ್ದಾರೆ.

ಏನಿದು ಜಲ ಜೀವನ್ ಮಿಷನ್?

ಏನಿದು ಜಲ ಜೀವನ್ ಮಿಷನ್?

ದೇಶದ ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ಶುದ್ಧ ನಲ್ಲಿ ನೀರನ್ನು ಒದಗಿಸುವ ಗುರಿ ಹೊಂದಿರುವ ಯೋಜನೆಯೆ 'ಜಲ ಜೀವನ್ ಮಿಷನ್'. ಕಳೆದ ವರ್ಷವೇ ಯೋಜನೆ ಆರಂಭವಾಗಿದ್ದು, ಮುಂದಿನ ಮೂರು ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕೇಂದ್ರ ಜಲ ಶಕ್ತಿ ಸಚಿವಾಲಯ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತಿದೆ.

ಒಟ್ಟು 3.5 ಲಕ್ಷ ಕೋಟಿ ರೂಪಾಯಿಗಳ ಯೋಜನೆ ಇದಾಗಿದ್ದು, ದೇಶದ ಗ್ರಾಮೀಣ ಭಾಗದ 18 ಕೋಟಿ ಕುಟುಂಬಗಳಿಗೆ ನಲ್ಲಿ (ನಳ) ನೀರು ಪೂರೈಕೆ ಮಾಡುವುದು ಯೋಜನೆಯ ಉದ್ದೇಶ. ಸಧ್ಯ ಗ್ರಾಮೀಣ ಭಾಗದ 3 ಕೋಟಿ ಕುಟುಂಬಗಳಿಗೆ ಶುದ್ಧ ನೀರಿನ ಸರಬರಾಜು ಆಗುತ್ತಿದೆ. ಮಳೆನೀರು ಕೊಯ್ಲು, ಅಂತರ್ಜಲ ಪುನರ್ಭರ್ತಿ ಮತ್ತು ಮನೆಯ ತ್ಯಾಜ್ಯ ನೀರನ್ನು ಕೃಷಿ ಬಳಕೆಗೆ ಮಾಡಿಕೊಳ್ಳುವುದು ಯೋಜನೆಯಲ್ಲಿ ಸೇರಿದೆ. ಗ್ರಾಮೀಣ ಭಾಗದಲ್ಲಿ ಕೆರೆ ಕಟ್ಟೆಗಳ ಜಲಮೂಲಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವುದು ಯೋಜನೆಯಲ್ಲಿ ಸೇರಿದೆ.

15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು

15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು

ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ ಶೇಕಡಾ 50ರ ಅನುದಾನದೊಂದಿಗೆ ಜಾರಿಗೊಳಿಸಲಾಗುತ್ತಿದೆ. ರಾಜ್ಯಕ್ಕೆ 1,150 ಕೋಟಿ ರೂ. ಅನುದಾನ ಮಂಜೂರಾಗಿದೆ. ರಾಜ್ಯದಲ್ಲಿ 15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಜೋಡಿಸುವ ಗುರಿ ನಿಗದಿ ಪಡಿಸಲಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಈ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ಜಲಶಕ್ತಿ ಸಚಿವರಿಗೆ ಭರವಸೆ ಕೊಟ್ಟಿದ್ದಾರೆ.

ಅನುದಾನದ ಕೊರತೆ ಇಲ್ಲ

ಅನುದಾನದ ಕೊರತೆ ಇಲ್ಲ

ಜಲ ಶಕ್ತಿ ಮಿಷನ್ ಯೋಜನೆಗೆ ಅನುದಾನದ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಿಎಂಗೆ ತಿಳಿಸಿದ್ದಾರೆ. ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನು ಸೇರಿಸಿಕೊಂಡು, 2022-23 ರೊಳಗೆ ರಾಜ್ಯದಾದ್ಯಂತ ಯೋಜನೆಯನ್ನು ಜಾರಿಗೊಳಿಸುವಂತೆ ಶೇಖಾವತ್ ಅವರು ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ.

ಆರಂಭದಲ್ಲಿ, ಜಲ ಮೂಲ ಲಭ್ಯವಿರುವ, ಗ್ರಾಮಗಳಲ್ಲಿ ಯೋಜನೆ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಲಾದೆ.

ಸಚಿವರು ಭಾಗಿ

ಸಚಿವರು ಭಾಗಿ

ವಿಡಿಯೊ ಕಾನ್ಫರೆನ್ಸ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಭಾಗವಹಿಸಿದ್ದರು.

English summary
'Jala Jeevan Mission' is a project aimed at providing clean drinking water to every family in the rural part of the country. Union Water Resources Minister Gajendra Singh Shekhawat has instructed the state government to complete the project in Karnataka in the next three years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X