ಉಡುಪಿ-ಚಿಕ್ಕಮಗಳೂರಿನಿಂದಲೇ ಸ್ಪರ್ಧಿಸುವೆ ಎಂದ ಶೋಭಾ ಕರಂದ್ಲಾಜೆ: ಸಿಟಿ ರವಿಗೆ ಟಾಂಗ್
ಬೆಂಗಳೂರು, ಫೆಬ್ರವರಿ 16: 2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿಯಿದ್ದು ರಾಜಕೀಯ ಚಟುವಟಿಕೆಗಳು ಈಗಾಗಲೇ ಆರಂಭಗೊಂಡಿದೆ. ರಾಜ್ಯದಲ್ಲಿ ಒಂದೊಂದೇ ಕ್ಷೇತ್ರಗಳಿಗೆ ಸದ್ದಿಲ್ಲದೇ ಅಭ್ಯರ್ಥಿ ಅಂತಿಮವಾಗುತ್ತಿದ್ದು, ಇನ್ನೊಂದೆಡೆ ಟಿಕೆಟ್‌ಗಾಗಿ ಲಾಭಿ, ಪಕ್ಷಾಂತರ ಕೂಡ ಆರಂಭವಾಗಿದೆ. ದಿನದಿಂದ ದಿನಕ್ಕೆ ರಾಜಕೀಯ ಕಣ ರಂಗೇರುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎದುರು ಸೋಲು ಕಂಡಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಗ್ಗುಬಡಿಯಲು ಜೆಡಿಎಸ್ ಜೊತೆ ಕೈ ಜೋಡಿಸಿದ್ದು, ಈ ಬಾರಿ ಎಲ್ಲಾ ಕ್ಷೇತ್ರದಿಂದ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕಿಲಿಸಲು ಸಜ್ಜಾಗುತ್ತಿದೆ. ಹೀಗಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರಾಗಬಹುದು ಎನ್ನುವ ಚರ್ಚೆ ನಡೆಯುತ್ತಿದ್ದು, ಈ ಗೊಂದಲಕ್ಕೆ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ತಮ್ಮದೇ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ ಎಂದು ಹೇಳಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ನನ್ನ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಪ್ರಚಾರಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಪಕ್ಷಾಂತರ ಆರಂಭವಾಗಿರುವ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಯಾರು ಕಾಂಗ್ರೆಸ್‌ಗೆ ಮರಳುತ್ತಾರೋ, ಯಾರು ಬಿಜೆಪಿಯಲ್ಲಿ ಇರುತ್ತಾರೋ ಗೊತ್ತಿಲ್ಲ. ಬಿಜೆಪಿಯಿಂದ ಲಾಭ ಪಡೆದು ಹೋದವರು ಅವರೇ ನಷ್ಟ ಅನುಭವಿಸುತ್ತಾರೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸುವರ್ಣಾವಕಾಶ ನಮ್ಮ ಮುಂದಿದೆ ಎಂದು ಹೇಳಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ ರವಿ ಸಕ್ರಿಯ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರೆಂಬುದಕ್ಕೆ ಹಲವು ಹೆಸರುಗಳು ಕೇಳಿಬರುತ್ತಿದೆ. ಸದ್ಯ ಕ್ಷೇತ್ರ ಬಿಜೆಪಿಯ ಪಾಲಾಗಿರುವುದರಿಂದ ಪಕ್ಷದಲ್ಲೇ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಸಿ.ಟಿ ರವಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಗೆಲುವು ಸಾಧಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸುತ್ತಿದ್ದು, ಸಿ.ಟಿ ರವಿ ಮೌನವಾಗಿಗೆಯೇ ಒಪ್ಪಿಗೆ ನೀಡಿದಂತೆ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದಾರೆ.
ಇನ್ನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರ ಜೊತೆ ಬೆರೆಯುತ್ತಿದ್ದಾರೆ. ಈ ಮೂಲಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಆಕಾಂಕ್ಷಿ ಎನ್ನುವುದನ್ನು ಬಿಂಬಿಸುತ್ತಿದ್ದಾರೆ. ಇವರ ಜೊತೆಗೆ ಡಿ.ಎನ್. ಜೀವರಾಜ್ ಕೂಡ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಿರುವಾಗ ಟಿಕೆಟ್ ಆಕಾಂಕ್ಷಿಗಳಿಗೆ ಟಾಂಗ್ ಕೊಡುವಂತೆ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications