ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಸ್ಮೃತಿ ಇರಾನಿ

|
Google Oneindia Kannada News

ಬೆಂಗಳೂರು, ಸೆ.10: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಹಾಗೂ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, "ಜನಸ್ಪಂದನಾ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು ನಾಳೆ ಬೆಳಗ್ಗೆ 12ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಆಗಮಿಸುವ ಬಗ್ಗೆ ಇಂದು ಖಾತ್ರಿ ಪಡಿಸಲಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಆಗಮಿಸಲಿದ್ದಾರೆ," ಎಂದು ಹೇಳಿದ್ದರು. ನಡ್ಡಾ ಬರುವುದು ಬಹುತೇಕ ಅನುಮಾನ ಇದ್ದರು ಸ್ಮೃತಿ ಇರಾನಿ ಹೈಕಮಾಂಡ್ ಪರವಾಗಿ ಬರುವುದು ಖಚಿತವಾಗಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ ಬೆಳಗ್ಗೆ 11.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ ಮತ್ತು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಅವರು ಸ್ವಾಗತ ಕೋರಲಿದ್ದಾರೆ.

Union Minister Smriti Irani will come to BJP Janaspandana program

ಬಿಜೆಪಿ ಸರ್ಕಾರದ 3 ವರ್ಷಗಳ ಸಾಧನೆಯ ಕುರಿತು ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರ L&T ಮುಂಭಾಗ" "ಜನಸ್ಪಂದನ" ಸಮಾವೇಶ ನಡೆಯಲಿದೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಡಾ.ಕೆ. ಸುಧಾಕರ್, ಎಂ.ಟಿ.ಬಿ. ನಾಗರಾಜ್, ಎನ್ ಮುನಿರತ್ನ, ಅರಗ ಜ್ಞಾನೇಂದ್ರ, ರಾಜ್ಯದ ಸಚಿವರು, ಸಂಸದರು , ಶಾಸಕರು ಮತ್ತು ಪಕ್ಷದ ಮುಖಂಡರುಗಳು ಭಾಗವಹಿಸಲಿದ್ದಾರೆ.

English summary
After completing one year of the Chief Minister Basavaraj Bommai government and three years of the BJP government, preparations are being made for the event held in Doddaballapur. Union Minister of Women and Child Development Smriti Irani will participate in the program.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X