ʼಇಂಡಿಯಾ ಒಕ್ಕೂಟ ಬಹುಮತ ಪಡೆದು ಸರ್ಕಾರ ರಚಿಸುತ್ತೆʼ

ಬೆಂಗಳೂರು, ಜೂನ್‌ 03: ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದರು.

ಸೋಮವಾರ ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

Union of India gets majority and forms government Says DK Shivakumar

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಖಂಡಿತವಾಗಿ ಭೇಟಿ ನೀಡುತ್ತೇನೆ. ಹೆಚ್ಚು ಮಳೆ ಸುರಿದು ತೊಂದರೆ ಉಂಟಾಗಿರುವ ಭಾಗಗಳನ್ನು ಪರಿಶೀಲನೆ ನಡೆಸಲಾಗುವುದು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ತಿಳಿಸಿದರು. ಇನ್ನೂ ಪರಿಷತ್ ಚುನಾವಣೆ ಮತದಾನ ಮುಗಿದ ನಂತರ ಅಧಿಕಾರಿಗಳ ಸಭೆ ನಡೆಸಲಾಗುವುದು. ತೊಂದರೆಗಳನ್ನು ನಿವಾರಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ. ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ.ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+