Congress Guarantee: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮೆಚ್ಚಿದ ವಿಶ್ವಸಂಸ್ಥೆ

ಬೆಂಗಳೂರು, ಫೆಬ್ರವರಿ 09: ಕರ್ನಾಟಕದ ರಾಜಕೀಯದಲ್ಲಿ ಸದಾ ಸುದ್ದಿಯಲ್ಲಿರುವುದು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು. 2023ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳನ್ನು ಜನರಿಗಾಗಿ ಘೋಷಣೆ ಮಾಡಿತು. ಜನರು ಪಕ್ಷವನ್ನು ಬೆಂಬಲಿಸಿದರು. ಸ್ಪಷ್ಪ ಬಹುಮತದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತು. 5 ಗ್ಯಾರಂಟಿ ಯೋಜನೆಗಳನ್ನು ಈಗ ಸರ್ಕಾರ ಜಾರಿಗೊಳಿಸಿ, ನುಡಿದಂತೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಈ ಯೋಜನೆಗಳ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ.

United Nations International Organization Appreciate Congress Guarantee Schemes In Karnataka

ಬೆಂಗಳೂರಿಗೆ ಭೇಟಿ ನೀಡಿದ್ದ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಅವನ್ನು ನಗರದ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ ಮಾಡಿದ್ದರು. ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛ ನೀಡಿ, ಸ್ವಾಗತಿಸಿದ್ದರು.

ಗ್ಯಾರಂಟಿ ಯೋಜನೆಗಳ ಮಾಹಿತಿ: ಮುಖ್ಯ ಕಾರ್ಯದರ್ಶಿಗಳು ಈ ಭೇಟಿಯ ಸಮಯದಲ್ಲಿ ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ ನೀಡಿದರು. ಈ ಕ್ರಮಗಳಿಗೆ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡಲಾಗಿದೆ.

ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ, ಕೌಶಲ್ಯದ ಮೂಲಕ ಉದ್ಯೋಗಗಳಿಕೆ, ಅಡುಗೆ ಅನಿಲ ಪೂರೈಕೆ, ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಅವರಿಗೆ ನೀಡಿದರು.

ಮಹಿಳೆಯರು ಸ್ವಸಹಾಯ ಗುಂಪುಗಳನ್ನು ಸಂಘಟಿಸಲು, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿಯನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಇದೇ ಸಂದರ್ಭದಲ್ಲಿ ಶ್ಲಾಘಿಸಿದರು.

ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸಲಹೆ ನೀಡಿದರು. ಇತರ ದೇಶಗಳು ಸಹ ಈ ಅತ್ಯುತ್ತಮ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ನವೀಕರಿಸಬಹುದಾದ ಇಂಧನ ಉತ್ಪಾದನೆ: ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ 40ರಷ್ಟು ಪಾಲು ನವೀಕರಿಸಬಹುದಾದ ಮೂಲಗಳಿಂದ ಬರುತ್ತಿರುವುದರಿಂದ ಕರ್ನಾಟಕವು ಶುದ್ಧ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದಕ್ಕೆ ಸಹ ವಿಶ್ವಸಂಸ್ಥೆಯ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದರು.

ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ, ಸಂಶೋಧನೆ ಮತ್ತು ನಾವೀನ್ಯತೆಗಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕವು ಸಾಧಿಸಿರುವ ಪ್ರಗತಿಯನ್ನು ವಿಶ್ವಸಂಸ್ಥೆಯು ಮೆಚ್ಚಿದೆ. ಇತರ ದೇಶಗಳಿಗೆ ಡಿಜಿಟಲ್ ರೂಪಾಂತರವನ್ನು ಉತ್ತೇಜಿಸುವ ಸಲುವಾಗಿ ಸಹಾಯದ ಅಗತ್ಯವಿದ್ದು, ರಾಜ್ಯದ ಬೆಂಬಲವನ್ನು ಕೋರಿದರು.
ರಾಜ್ಯ, ಜಿಲ್ಲೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಸೂಚಕಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ರಚಿಸಿದ ಸುಸ್ಥಿರ ಅಭಿವೃದ್ದಿ ಗುರಿಗಳ ಡ್ಯಾಶ್‌ಬೋರ್ಡ್ ವೀಕ್ಷಿಸಿ ಶ್ಲಾಘಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+