ಗೌರಿ ಲಂಕೇಶ್ ಹತ್ಯೆ ಖಂಡಿಸಿದ ಅಮೆರಿಕ
ಬೆಂಗಳೂರು, ಸೆಪ್ಟೆಂಬರ್ 06 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಮೆರಿಕ ಸಹ ಮಹಿಳಾ ಪತ್ರಕರ್ತೆ ಹತ್ಯೆಯನ್ನು ಖಂಡಿಸಿದೆ. ಕರ್ನಾಟಕ ಸರ್ಕಾರ ಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿದೆ.
ನವದೆಹಲಿಯಲ್ಲಿನ ಅಮೆರಿಕ ರಾಯಭಾರ ಕಚೇರಿಯಲ್ಲಿ ಹಿರಿಯ ವಿದೇಶಾಂಗ ಸೇವೆ ಕೌನ್ಸೆಲರ್, ಮುಖ್ಯ ನಿರ್ವಾಹಕಿಯಾಗಿರುವ ಮೇರಿ ಕೇ ಲಾಸ್ ಕಾರ್ಸನ್ ಈ ಕುರಿತು ಟ್ವಿಟ್ ಮಾಡಿದ್ದಾರೆ.
We condemn murder of #GauriLankesh. Deeply saddened. Heartfelt condolences to her friends/family. https://t.co/xehrc7o9lj #PressFreedom
— MaryKay Loss Carlson (@USAmbIndia) September 6, 2017

ಮಂಗಳವಾರ ರಾತ್ರಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯಲ್ಲಿ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಇಂದು ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಿತು.
ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆಗೆ ಭಾರೀ ಖಂಡನೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಿವಿಧ ಕೇಂದ್ರ ಸಚಿವರು, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಹತ್ಯೆಯನ್ನು ಖಂಡಿಸಿದ್ದಾರೆ.
Karnataka Chief Minister Siddaramaiah pays tribute to #GauriLankesh in Bengaluru's Chamrajpet pic.twitter.com/ZjWeZV52jR
— ANI (@ANI) September 6, 2017
ಗೌರಿ ಲಂಕೇಶ್ ಹತ್ಯೆಯ ತನಿಖೆಗೆ ಕರ್ನಾಟಕ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಸೇರಿದಂತೆ ಹಲವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.












Click it and Unblock the Notifications