ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದವಿ ಪರೀಕ್ಷೆ: ಒಂದು ತಿಂಗಳು ಮುಂದೂಡಲು ವಿವಿಗಳಿಗೆ ಸೂಚನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 16: ಕೊರೊನಾ ಸೋಂಕು ಮತ್ತು ಓಮಿಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡುವಂತೆ ಆದೇಶಿಸಲಾಗಿದೆ.

ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್ ಅವರು ವಿಶ್ವವಿದ್ಯಾಲಯಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.

ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆ ಮುಂದೂಡುವಂತೆ RGUHSಗೆ ಆರೋಗ್ಯ ಸಚಿವರ ಪತ್ರಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆ ಮುಂದೂಡುವಂತೆ RGUHSಗೆ ಆರೋಗ್ಯ ಸಚಿವರ ಪತ್ರ

ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, "ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ,'' ಎಂದು ತಿಳಿಸಿದ್ದಾರೆ.

Universities Instructed To Postpone Graduate Semister Examinations For One Month

ಕೊರೊನಾ ಸೋಂಕು ಬಳಿಕ ಇದೀಗ ರಾಜ್ಯದಲ್ಲಿ ಹಿಜಾಬ್ ವಿವಾದ ವಿದ್ಯಾರ್ಥಿಗಳನ್ನು ಕಾಡುತ್ತಿದ್ದು, ಕರ್ನಾಟಕ ರಾಜ್ಯಾದ್ಯಂತ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆ ಬಳಿಕ, ಇದೀಗ ಕಾಲೇಜು ಮತ್ತೆ ಆರಂಭವಾಗಿದೆ. ಆದರೂ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಮತ್ತೆ ಮೊದಲಿನಂತೆ ಆರಂಭವಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

ಚಿಕ್ಕಮಗಳೂರು, ವಿಜಯನಗರಗಳಲ್ಲಿ ನಿಷೇಧಾಜ್ಞೆ ಜಾರಿ
ಇಂದಿನಿಂದ ನಿಷೇಧಾಜ್ಞೆ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಶಾಲಾ-ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿ ಆದೇಶಿಸಲಾಗಿದೆ.

ಇಂದಿನಿಂದ ಫೆಬ್ರವರಿ 23ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಇರಲಿದೆ. ಇಂದು ಚಿಕ್ಕಮಗಳೂರು ನಗರದ ಕಾಲೇಜುಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ವಿದ್ಯಾರ್ಥಿನಿಯರು ಪ್ರತಿಭಟಿಸುವಾಗ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ಕಾಲೇಜು ಮುಂಭಾಗ ಬೃಹತ್ ಜನಸ್ತೋಮ, ಪೋಷಕರು ಸೇರಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ನೀಡಿದ್ದಾರೆ.

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ವಿಜಯನಗರ ಜಿಲ್ಲೆಯ ಕಾಲೇಜುಗಳ ಬಳಿ ಕೂಡ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಆದೇಶ ನೀಡಿದ್ದಾರೆ. ಕಾಲೇಜು ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ.

Recommended Video

ಮುಸ್ಲಿಂರ ಮನಸ್ಥಿತಿ ತುಂಬಾ ಅಪಾಯಕಾರಿ ಎಂದ CT Ravi | Oneindia Kannada

English summary
Additional Chief Secretary of the Department of Higher Education G. Kumar Nayak instructed to postponed the semester examination of all Universities under the Department of Higher Education for one month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X