ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ವಿವಿಗಳಲ್ಲಿ ಇ-ಆಫೀಸ್ ಬಳಕೆ ಕಡ್ಡಾಯಕ್ಕೆ ಮಾ.1ರ ಗಡುವು

|
Google Oneindia Kannada News

ಬೆಂಗಳೂರು, ಫೆಬ್ರವರಿ 25: ಕರ್ನಾಟಕದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ಇ-ಕಚೇರಿಯನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನು ಮುಂದೆ ವಿಶ್ವವಿದ್ಯಾಲಗಳು ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಆನ್‌ಲೈನ್‌ನಲ್ಲಿ ಕಳುಹಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್ 1ರ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ನೀಟ್ ವಿಳಂಬ: ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್ನೀಟ್ ವಿಳಂಬ: ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್

ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಇ-ಆಫೀಸ್' ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿಶ್ವವಿದ್ಯಾಲಯಗಳಿಗೆ ಈ ಹಿಂದೆ ಸೂಚನೆ ನೀಡಲಾಗಿತ್ತು. ಆದರೂ ಕೆಲವು ವಿವಿಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ,' ಎಂದು ಎಚ್ಚರಿಕೆ ನೀಡಿದ್ದಾರೆ.

Karnatakas University Must Follow E-Office Compulsory from March 1st: Aswatha narayana

ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ:

ಉನ್ನತ ಶಿಕ್ಷಣ ಇಲಾಖೆಯ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಆದರೆ ಇಲಾಖೆಗೆ ವಿವಿಗಳಿಂದ ಎಲ್ಲ ಪತ್ರಗಳು, ಕಡತಗಳು ಹಾಗೂ ಪ್ರಸ್ತಾವನೆಗಳು ಭೌತಿಕ ರೂಪದಲ್ಲಿ ಬರುತ್ತಿವೆ. ಇದರಿಂದ ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲ ಉದ್ದೇಶವೇ ವಿಫಲವಾದಂತಾಗಿದೆ ಎಂದು ಸಚಿವ ಅಶ್ವಸ್ಥ ನಾರಾಯಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿ.ವಿ.ಗಳ ಆಡಳಿತವೂ ಸೇರಿದಂತೆ ಪ್ರತಿಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು ಎನ್ನುವುದು ಇ-ಆಫೀಸ್ ತಂತ್ರಾಂಶದ ಗುರಿಯಾಗಿದೆ. ವಿ.ವಿ.ಗಳು ಸಮಕಾಲೀನ ಶೈಲಿಯನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇ-ಆಫೀಸ್ ಬಳಕೆ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸಮಿತಿ:

ಜೊತೆಗೆ, ಎನ್ಇಪಿ ಅನುಸಾರ ವಿ.ವಿ.ಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟ್ರೀಯ ಶೈಕ್ಷಣಿಕ ಕೋಶ (ಎನ್ಎಡಿ), ಇ-ಆಫೀಸ್ ಬಳಕೆಗೆ ವಿ.ವಿ.ಗಳಲ್ಲಿನ ಸಿಬ್ಬಂದಿಯನ್ನು ಹೇಗೆ ಸಿದ್ಧಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿ, 15 ದಿನಗಳಲ್ಲಿ ತಮಗೆ ವರದಿ ನೀಡುವಂತೆಯೂ ಅವರು ಸೂಚಿಸಿದ್ದಾರೆ.

ರಾಜ್ಯಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನಾಚರಣೆ:

ರಾಜ್ಯಾದ್ಯಂತ 2023ರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನ'ವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಶುಕ್ರವಾರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಏರ್ಪಡಿಸಿದ್ದ 29ನೇ ವರ್ಷದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ರಾಜ್ಯವು ಇಂದು ಗಳಿಸಿರುವ ಆರ್ಥಿಕ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಪಾತ್ರ ಅಗಾಧವಾಗಿದೆ ಎಂದರು.

ವಿಜ್ಞಾನ-ತಂತ್ರಜ್ಞಾನಗಳಲ್ಲಿ ಮುಂಚೂಣಿಯಲ್ಲಿ ರಾಜ್ಯ:

ಕರ್ನಾಟಕವು ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಮೊದಲಿನಿಂದಲೂ ದೇಶದಲ್ಲಿ ಮುಂಚೂಣಿಯಲ್ಲಿದೆ. ನೂರಾರು ವರ್ಷಗಳ ಹಿಂದೆಯೇ ರಾಜ್ಯದಲ್ಲಿ ಭದ್ರ ಬುನಾದಿ ಬಿದ್ದಿದೆ. ರಾಜ್ಯವು ಸಾಧಿಸಿರುವ ಸಾಮಾಜಿಕ ಸುಧಾರಣೆಗಳ ಹಿಂದೆ ತಂತ್ರಜ್ಞಾನದ ಕೊಡುಗೆಯಿದೆ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಪರಿಷತ್ತಿನ ಅಧ್ಯಕ್ಷ ಗಿರೀಶ್ ಕಡ್ಲೇವಾಡ, ವಿಜ್ಞಾನಿ ಡಾ.ಅನುರಾಧಾ, ಕೆ.ವಿ.ಮಾಲಿನಿ, ಬಿ.ಎನ್. ಶ್ರೀನಾಥ್, ಶ್ರೀಮತಿ ಹರಿಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ಬಾಲವಿಜ್ಞಾನಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬದುಕಿನ ಪ್ರತಿ ಸಮಸ್ಯೆಗೂ ವಿಜ್ಞಾನದಲ್ಲಿ ಪರಿಹಾರವಿದೆ. ಆದ್ದರಿಂದ ಮಕ್ಕಳಲ್ಲಿ ಪೂರ್ವ ಪ್ರಾಥಮಿಕ ಹಂತದಿಂದಲೇ ಗಣಿತ ಮತ್ತು ವಿಜ್ಞಾನಗಳ ಬಗ್ಗೆ ಒಲವು ಮೂಡಿಸಬೇಕು. ಈಗ ಮಾನವಿಕಗಳ ಕಲಿಕೆಯಲ್ಲೂ ತಂತ್ರಜ್ಞಾನ ನಿರ್ಣಾಯಕ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಏನೇ ಕಲಿತರೂ ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕು. ಜೊತೆಗೆ ವಿಜ್ಞಾನವು ನಮ್ಮ ಸಂಸ್ಕೃತಿ ಮತ್ತು ಧರ್ಮಗಳ ಭಾಗವಾಗಬೇಕು ಎಂದು ಸಚಿವರು ಸಲಹೆ ನೀಡಿದರು.

ವೈಜ್ಞಾನಿಕ ಕಲಿಕೆಗೆ ಒತ್ತು:

ಮಕ್ಕಳ ಕಲಿಕೆಯಲ್ಲಿ ಮೂರರಿಂದ ಹನ್ನೆರಡನೇ ವರ್ಷದವರೆಗೆ ನಿರ್ಣಾಯಕ ಹಂತವಾಗಿದೆ. ಈ ಹಂತದಲ್ಲೇ ಮಕ್ಕಳು ಶೇ.85ರಷ್ಟು ಕಲಿಕೆ ನಡೆಯುತ್ತದೆ. ಆದ್ದರಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವೈಜ್ಞಾನಿಕ ಕಲಿಕೆಗೆ ಒತ್ತು ಕೊಡಲಾಗಿದೆ ಎಂದರು.

English summary
Karnataka's University Must Follow E-Office Compulsory from March 1st, says Minister Aswatha narayana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X