ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಅನ್‌ಲಾಕ್‌ 2.0; 16 ಜಿಲ್ಲೆಗಳಿಗೆ ಅನ್‌ಲಾಕ್‌ ಘೋಷಣೆ

|
Google Oneindia Kannada News

ಬೆಂಗಳೂರು, ಜೂನ್ 19: ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಆಗಲಿದ್ದು, ಕೊರೊನಾ ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ. 5ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆ ಮಾಡಲಾಗಿದೆ.

ಲಾಕ್‌ಡೌನ್‌ ಸಡಿಲಿಕೆ ಮಾಡುವ ಸಂಬಂಧ ಶನಿವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದ ನಂತರ ಈ ಘೋಷಣೆ ಮಾಡಿದ್ದಾರೆ.

ಶೇ.5% ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆ ಮಾಡಿದ್ದು, ಈ ಜಿಲ್ಲೆಗಳಲ್ಲಿ ಸರ್ಕಾರಿ ಬಸ್‌ಗಳ ಓಡಾಟಕ್ಕೂ ಸೋಮವಾರದಿಂದ ಅವಕಾಶ ಮಾಡಿಕೊಡಲಾಗಿದೆ.

Unlock 2.0: Yediyurappa Announced Unlock In 16 Districts

ತಾಂತ್ರಿಕ ಸಮಿತಿ ಸಲಹೆ ಮೇರೆಗೆ ಚರ್ಚಿಸಿ ಈ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಮಂಡ್ಯ, ತುಮಕೂರು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಂಗಳೂರು, ಕೋಲಾರ, ರಾಯಚೂರು, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆ ಮಾಡಲಾಗಿದೆ.

ಉಳಿದ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ. ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು ಎಂದು ತಿಳಿಸಿದ್ದಾರೆ.

ಅನ್‌ಲಾಕ್‌ನಲ್ಲಿ ಸರ್ಕಾರಿ ಬಸ್‌ಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಹೋಟೆಲ್‌ಗಳಿಗೆ ಸಂಜೆ ಐದವರೆಗೂ ಅನುಮತಿ ನೀಡಿದ್ದು, ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ವಿಧದ ಅಂಗಡಿಗಳನ್ನೂ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ದೇವಸ್ಥಾನಕ್ಕೆ ಅನುಮತಿ ನೀಡಲಾಗಿಲ್ಲ. ನೈಟ್‌ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ.

ಲಾಡ್ಜ್‌, ರೆಸಾರ್ಟ್‌ ತೆರೆಯಲು ಅವಕಾಶ ನೀಡಲಾಗಿದೆ. ಹೊರಾಂಗಣ ಚಿತ್ರೀಕರಣ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಕೊರೊನಾ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜೂನ್ 14ರಿಂದ ಲಾಕ್‌ಡೌನ್ ಅನ್ನು ಒಂದು ವಾರಗಳ ಕಾಲ ಮುಂದೂಡಲಾಗಿತ್ತು. ಕಳೆದ ಏಪ್ರಿಲ್ 27ರಿಂದ ಕರ್ನಾಟಕದಲ್ಲಿ ಜಾರಿ ಮಾಡಲಾಗಿದ್ದ ಕೋವಿಡ್ -19 ಲಾಕ್‌ಡೌನ್‌ ಅನ್ನು ಜೂನ್ 14ರ ನಂತರ ಅಲ್ಪ ಸಡಿಲಿಕೆ ಮಾಡಲಾಗಿತ್ತು. ಇದೀಗ ಜೂನ್ 21ರ ನಂತರ ಹಲವು ಸಡಿಲಿಕೆಗಳನ್ನು ಮಾಡಲಾಗಿದೆ.

Recommended Video

Kohli, ರಹಾನೆಗಿಂತ ರೋಹಿತ್, ಶುಭ್ ಮನ್ ಸೂಪರ್ ಎಂದ ಬ್ಯಾಟಿಂಗ್ ಕೋಚ್ | Oneindia Kannada

English summary
Unlock 2.0: Yediyurappa Announced Unlock In 16 Districts,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X