ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನ್‌ಲಾಕ್ 3.0: ಚಿತ್ರಮಂದಿರಗಳನ್ನು ತೆರೆಯಲು ಅವಕಾಶವಿಲ್ಲ

|
Google Oneindia Kannada News

ಬೆಂಗಳೂರು, ಜುಲೈ 03: ರಾಜ್ಯದಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಮಾಲ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿಲ್ಲ.

ಈ ಹೊಸ ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿಲ್ಲ. ಶೂಟಿಂಗ್‌ಗಳು ಯಥಾಪ್ರಕಾರ ಮುಂದುವರೆಯಲಿದೆ. ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್‌ಗಳು ತೆರೆಯುವುದಿಲ್ಲ, ಬಿಡುಗಡೆಗೆ ತಯಾರಾಗಿದ್ದ ಚಿತ್ರತಂಡಗಳಿಗೆ ಭಾರಿ ನಿರಾಸೆ ಮೂಡಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಎರಡನೇ ಅಲೆಯ ಬಳಿಕ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್​ಲಾಕ್ 3.O ಅನ್ವಯವಾಗಲಿದೆ.

Karnataka Unlock 3.0: Cinema Halls To Remain Shut In Karnataka

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅನ್​ಲಾಕ್ ಅನ್ವಯವಾಗಲಿದೆ ಎಂದಿದ್ದಾರೆ. ಮಂಗಳೂರು, ಮೈಸೂರು ಸಹಿತ ಅನ್​ಲಾಕ್ 3.0 ಅನ್ವಯವಾಗಲಿದೆ. ಕೊವಿಡ್ ಉಸ್ತುವಾರಿ ಸಚಿವರ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ ಸಿಎಂ ಅಧಿಕೃತ ‌ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದ್ದಾರೆ. 3ನೇ ಹಂತದ ಅನ್​ಲಾಕ್ ಪ್ರಕ್ರಿಯೆ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಉಪಮುಖ್ಯಮಂತ್ರಿ ಹಾಗೂ ಕೊವಿಡ್ ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷ ಅಶ್ವತ್ಥ್ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ‌, ಡಾ.ಕೆ.ಸುಧಾಕರ್‌, ಜಗದೀಶ್ ಶೆಟ್ಟರ್‌, ಅರವಿಂದ ಲಿಂಬಾವಳಿ, ಸಿ..ಎಸ್‌. ರವಿಕುಮಾರ್‌ ಸಭೆಯಲ್ಲಿ ಭಾಗಿಯಾಗಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್‌, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ.

ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇಕಡಾ 100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಮಾಲ್‌ಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ.

Recommended Video

ಸಿದ್ದರಾಮಯ್ಯ ಮುಂದೆ ನಡೀಲಿಲ್ಲ ಡಿಕೆಶಿ ಆಟ | Karnataka Congress Inside Politics | Oneindia Kannada

ರಾಜ್ಯದಲ್ಲಿ ದೇವಾಲಯಗಳನ್ನು ತೆರೆಯುವ ಬಗ್ಗೆ ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ. ಭಕ್ತರಿಗೆ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗಷ್ಟೇ ಅವಕಾಶ ಮಾಡಿಕೊಡಲಾಗಿದೆ. ಬಾರ್​ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

English summary
Karnataka Unlock 3.0: Cinema Halls To Remain Shut In Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X