Breaking: ಲಾಕ್‌ಡೌನ್ ಸಡಿಲಿಕೆ 3.0: ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಅಂತ್ಯ
ಬೆಂಗಳೂರು, ಜುಲೈ 03: ಲಾಕ್‌ಡೌನ್ ಸಡಿಲಿಕೆ 3.0ದಲ್ಲಿ ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಅಂತ್ಯಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳನ್ನು ಸಂಪೂರ್ಣವಾಗಿ ತೆರೆಯಲು ಅವಕಾಶ ನೀಡಲಾಗಿದೆ.
ಮಾಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ, ರಾತ್ರಿ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಜಾರಿಯಲ್ಲಿರಲಿದೆ.
ಮೆಟ್ರೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆಗೆ ಸಂಪೂರ್ಣ ಅವಕಾಶ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಕೊಡಗು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ವಾರಾಂತ್ಯ ಕರ್ಫ್ಯೂ ಸಡಿಲಗೊಳಿಸಲಾಗಿದೆ.
Recommended Video
ಮದುವೆಯಲ್ಲಿ 100 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ, ಅಂತ್ಯಕ್ರಿಯೆಯಲ್ಲಿ 20 ಮಂದಿ ಪಾಲ್ಗೊಳ್ಳಬಹುದು, ಇದು ಜುಲೈ 5 ರಿಂದ 19ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ.
ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಕಠಿಣ ನಿಬಂಧನೆಗಳನ್ನು ವಿಧಿಸಲಾಗುತ್ತದೆ.












Click it and Unblock the Notifications