ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಅನ್ ಲಾಕ್ 3.0: ರಾಜ್ಯದಲ್ಲಿ ಏನಿರುತ್ತೆ ಏನಿರಲ್ಲ?

|
Google Oneindia Kannada News

ಬೆಂಗಳೂರು, ಜುಲೈ.30: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಅನ್ ಲಾಕ್ 3.0 ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ. ಬುಧವಾರವಷ್ಟೇ ಕೇಂದ್ರ ಗೃಹ ಸಚಿವಾಲಯವು ಮಾರ್ಗಸೂಚಿ ಬಿಡುಗಡೆಗೊಳಿಸಿತ್ತು.

Recommended Video

Hardik Pandya And Natasa Stankovic Blessed With A Baby Boy | Oneindia Kannada

ಜುಲೈ.31ರಂದು ಅನ್ ಲಾಕ್ 2.0 ಅವಧಿ ಅಂತ್ಯಗೊಳ್ಳುವ ಹಿನ್ನೆಲೆ ಹೊಸ ಮಾರ್ಗಸೂಚಿಯನ್ನು ರಿಲೀಸ್ ಮಾಡಲಾಗಿತ್ತು. ಆಗಸ್ಟ್.01ರಿಂದ ಆಗಸ್ಟ್.31ರವರೆಗೂ ಅನ್ ಲಾಕ್ 3.0 ಮಾರ್ಗಸೂಚಿಗಳು ಜಾರಿಯಲ್ಲಿ ಇರಲಿದ್ದು, ರಾಜ್ಯಗಳು ಸ್ಥಳೀಯ ಮಟ್ಟದಲ್ಲಿ ಯಾವುದಕ್ಕೆಲ್ಲ ಅನುಮತಿ ನೀಡಬೇಕು ಎನ್ನುವುದನ್ನು ಆಯಾ ಸರ್ಕಾರಗಳೇ ತೀರ್ಮಾನಿಸುವಂತೆ ಕೇಂದ್ರದ ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು.

ಅನ್ ಲಾಕ್-3.0 ಮಾರ್ಗಸೂಚಿ ಬಿಡುಗಡೆ: ಪ್ರಮುಖ ಅಂಶಗಳು ಇಲ್ಲಿವೆಅನ್ ಲಾಕ್-3.0 ಮಾರ್ಗಸೂಚಿ ಬಿಡುಗಡೆ: ಪ್ರಮುಖ ಅಂಶಗಳು ಇಲ್ಲಿವೆ

ಕೇಂದ್ರ ಗೃಹ ಸಚಿವಾಲಯ ಮಾರ್ಗಸೂಚಿ ಬೆನ್ನಲ್ಲೇ ಗುರುವಾರ ರಾಜ್ಯ ಸರ್ಕಾರವು ಅನ್ ಲಾಕ್ 3.0 ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಕರ್ನಾಟಕದಲ್ಲಿ ಮುಂದಿನ ಒಂದು ತಿಂಗಳ ಕಾಲ ಯಾವೆಲ್ಲ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ ಎನ್ನುವುದರ ಕುರಿತು ವಿಸ್ತೃತ ವರದಿ ಇಲ್ಲಿದೆ ನೋಡಿ.

ಕರ್ನಾಟಕ ಅನ್ ಲಾಕ್ -3.0 ಪ್ರಮುಖ ಅಂಶಗಳು:

ಕರ್ನಾಟಕ ಅನ್ ಲಾಕ್ -3.0 ಪ್ರಮುಖ ಅಂಶಗಳು:

- ರಾಜ್ಯದಲ್ಲಿ ರಾತ್ರಿ ಸಂದರ್ಭದಲ್ಲಿ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧ(ರಾತ್ರಿ ಕರ್ಫ್ಯೂ)ವನ್ನು ತೆರವುಗೊಳಿಸಲಾಗಿದೆ

- ಆಗಸ್ಟ್.05ರಿಂದ ಜಿಮ್ ಮತ್ತು ಯೋಗ ಇನ್ಸ್ ಟ್ಯೂಟ್ ತೆರೆಯುವುದಕ್ಕೆ ಕೇಂದ್ರ ಸರ್ಕಾರದ ಅನುಮತಿ

- ಆಗಸ್ಟ್.31ರವರೆಗೂ ಯಾವುದೇ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳನ್ನು ತೆರೆಯುವಂತಿಲ್ಲ. ಬದಲಿಗೆ ಆನ್ ಲೈನ್ ತರಗತಿಯನ್ನು ಮುಂದುವರಿಸುವುದಕ್ಕೆ ಅನುಮತಿ ನೀಡಲಾಗಿದೆ.

- ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್, ಮನರಂಜನಾ ಉದ್ಯಾನವನ, ಬಾರ್, ಆಡಿಟೋರಿಯಮ್, ಸಿನಿಮಾ ಹಾಲ್, ಸಭಾಭವನಗಳನ್ನು ತೆರೆಯುವುದಕ್ಕೆ ಅನುಮತಿಯಿಲ್ಲ

- ಮುಂದಿನ ಆದೇಶದವರೆಗೂ ಮೆಟ್ರೋ ಸಂಚಾರಕ್ಕೂ ಅನುಮತಿಯಿಲ್ಲ

- ಸಾಮಾಜಿಕ / ರಾಜಕೀಯ / ಕ್ರೀಡಾ / ಮನರಂಜನಾ / ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ನಡೆಸುವುದಕ್ಕೆ ಅನುಮತಿಯಿಲ್ಲ.

- ಕೇಂದ್ರ ಗೃಹ ಸಚಿವಾಲಯದಿಂದ ಅನುಮತಿ ಉಳ್ಳವರಿಗೆ ಮಾತ್ರ ಅಂತಾರಾಷ್ಟ್ರೀಯ ಸಂಚಾರಕ್ಕೆ ಅವಕಾಶ.

ಆಗಸ್ಟ್.15ರಂದು ಸ್ವಾತಂತ್ರ್ಯ ದಿನಾಚರಣೆಗೆ ಅನುಮತಿ

ಆಗಸ್ಟ್.15ರಂದು ಸ್ವಾತಂತ್ರ್ಯ ದಿನಾಚರಣೆಗೆ ಅನುಮತಿ

ಕರ್ನಾಟಕದಲ್ಲಿ ಆಗಸ್ಟ್.15ರಂದು ಜಿಲ್ಲೆ, ಉಪ ವಿಭಾಗ, ತಾಲೂಕು, ಮುನ್ಸಿಪಲ್, ಪಂಚಾಯತಿ ಹಂತದಲ್ಲಿ ಸ್ವಾತಂತ್ರ್ಯ ದಿನ ಆಚರಿಸುವುದಕ್ಕೆ ಅನುಮತಿ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಕೇಂದ್ರ ಗೃಹ ಸಚಿವಾಲಯವು ಸೂಚಿಸಿರುವ ಶಿಷ್ಟಾಚಾರವನ್ನು ಪಾಲಿಸುವುದು ಕಡ್ಡಾಯವಾಗಿದೆ.

ಲಾಕ್ ಡೌನ್ ಕಂಟೇನ್ಮೆಂಟ್ ಝೋನ್ ಗಳಿಗೆ ಮಾತ್ರ ಸೀಮಿತ

ಲಾಕ್ ಡೌನ್ ಕಂಟೇನ್ಮೆಂಟ್ ಝೋನ್ ಗಳಿಗೆ ಮಾತ್ರ ಸೀಮಿತ

- ರಾಜ್ಯದಲ್ಲಿ ಗುರುತಿಸಲಾಗಿರುವ ಕಂಟೇನ್ಮೆಂಟ್ ಝೋನ್ ಗಳಲ್ಲಿ ಆಗಸ್ಟ್.31ರವರೆಗೂ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಮತ್ತು ಜಿಲ್ಲಾಕೇಂದ್ರಗಳಲ್ಲಿ ಜಿಲ್ಲಾಡಳಿತವು ಕಂಟೇನ್ಮೆಂಟ್ ಝೋನ್ ಗಳನ್ನು ಗುರುತಿಸಿ, ಮಾರ್ಗಸೂಚಿ ಪಾಲನೆ ಬಗ್ಗೆ ನಿಗಾ ವಹಿಸಲಿದೆ.

- ಆಗಸ್ಟ್.31ರವರೆಗೂ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಕೇಂದ್ರ ಗೃಹ ಸಚಿವಾಲಯವು ತಿಳಿಸಿದೆ.

- ಕಂಟೇನ್ಮೆಂಟ್ ಝೋನ್ ಗಳ ಪಟ್ಟಿಯನ್ನು ಆಯಾ ಜಿಲ್ಲಾಡಳಿತದ ವೆಬ್ ಸೈಟ್, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ವೆಬ್ ಸೈಟ್ ಗಳಲ್ಲಿ ಅಪ್ ಲೋಡ್ ಮಾಡಲಾಗುತ್ತದೆ. ಹಾಗೂ ಕಂಟೇನ್ಮೆಂಟ್ ಝೋನ್ ಗಳ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಮಾಹಿತಿ ನೀಡಲಾಗುತ್ತದೆ.

- ಕಂಟೇನ್ಮೆಂಟ್ ಝೋನ್ ಗಳಲ್ಲಿ ಚಟುವಟಿಕೆಗಳ ಮೇಲೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು. ಕಟ್ಟುನಿಟ್ಟಾಗಿ ಲಾಕ್ ಡೌನ್ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳುವುದು.

ಕೊರೊನಾವೈರಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ

ಕೊರೊನಾವೈರಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ

ಅನಾರೋಗ್ಯ ಪೀಡಿತರು, 65 ವರ್ಷಕ್ಕಿಂತ ಮೇಲ್ಪಟ್ಟವರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಗರ್ಭಿಣಿಯರು ಸಾರ್ವಜನಿಕವಾಗಿ ಓಡಾಡುವುದಕ್ಕಿಂತ ಮನೆಗಳಲ್ಲೇ ಸುರಕ್ಷಿತವಾಗಿ ಇರುವುದು ಉತ್ತಮ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ವೈದ್ಯಕೀಯ ತಪಾಸಣೆ, ಅಗತ್ಯ ವಸ್ತುಗಳ ಖರೀದಿಗೆ ತೆರಳಲು ಅನುಮತಿ ನೀಡಲಾಗಿದೆ. ಈ ಸಂದರ್ಭಗಳಲ್ಲೂ ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವಂತೆ ಸಲಹೆ ನೀಡಲಾಗಿದೆ.

English summary
Unlock-3.0 Highlights: Karnataka State Government Released Guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X