ವಿವಾಹಿತ ಮಹಿಳಾ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ನಗರದ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರೇಶ್ವರಪ್ಪ ಲೇಔಟಿನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಮೃತಳನ್ನು ವಿದ್ಯಾ ಎಂದು ಗುರುತಿಸಲಾಗಿದೆ. ಇವರು ಕೊಡಗು ಮೂಲದವರು. ಸೋಮಣ್ಣ ಎಂಬುವವರನ್ನು 2 ವರ್ಷಗಳ ಹಿಂದೆ ಮದುವೆಯಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ದಂಪತಿಗೆ ಮಕ್ಕಳಾಗಿರಲಿಲ್ಲ.
ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಹೆ ಮಾಡಿಕೊಂಡಿದ್ದಾರೆ. ಸಂಜೆ ಪತಿ ಸೋಮಣ್ಣ ಮತ್ತು ತವರು ಮನೆಯವರು ದೂರವಾಣಿ ಕರೆ ಮಾಡಿದಾಗ ವಿದ್ಯಾ ಕರೆಗೆ ಪ್ರತಿಕ್ರಿಯಿಸಿಲ್ಲ. ಅನುಮಾನಗೊಂಡು ಸೋಮಣ್ಣ ತಕ್ಷಣ ಮನೆಗೆ ಬಂದು ನೋಡಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಿದ್ಯಾ ಮರಣ ಪತ್ರ ಬರೆದಿಟ್ಟು ಸತ್ತಿದ್ದಾರೆ ಎಂದು ಎಚ್ಎಎಲ್ ಪೊಲೀಸರು ತಿಳಿಸಿದ್ದಾರೆ.











Click it and Unblock the Notifications