ಲೋಕಾಯುಕ್ತದಲ್ಲೇ ಕೋಟಿ ಡೀಲ್, ವರದಿ ಕೇಳಿದ ಸುಭಾಷ್ ಬಿ.ಆಡಿ
ಬೆಂಗಳೂರು, ಜೂ.24 : ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ಕುರಿತು ವರದಿ ನೀಡುವಂತೆ ಉಪ ಲೋಕಾಯುಕ್ತರು ನಿರ್ದೇಶನ ನೀಡಿದ್ದಾರೆ. ಲೋಕಾಯುಕ್ತ ಕಚೇರಿಯಲ್ಲಿಯೇ ಸರ್ಕಾರಿ ಅಧಿಕಾರಿಯೊಬ್ಬರ ಬಳಿ 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಪ್ರಕರಣ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು.
ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರು ಹಣದ ಬೇಡಿಕೆ ಪ್ರಕರಣದ ಬಗ್ಗೆ 15 ದಿನಗಳಲ್ಲಿ ವರದಿ ನೀಡುವಂತೆ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರಿಗೆ ನಿರ್ದೇಶನ ನೀಡಿದ್ದಾರೆ. ಘಟನೆ ಬೆಳಕಿಗೆ ಬಂದ ಸುಮಾರು ಒಂದೂವರೆ ತಿಂಗಳ ನಂತರ ಉಪ ಲೋಕಾಯುಕ್ತರು ಈ ಬಗ್ಗೆ ವರದಿ ಕೇಳಿದ್ದಾರೆ. [ಕರ್ನಾಟಕದಿಂದ ವರ್ಗಾವಣೆ ಬಯಸಿಲ್ಲ : ಸೋನಿಯಾ ನಾರಂಗ್]

ಲೋಕಾಯುಕ್ತ ಕಚೇರಿಯಲ್ಲಿ ನಡೆದ ಹಣದ ಬೇಡಿಕೆ ಪ್ರಕರಣದ ಕುರಿತು ಜನಾಧಿಕಾರ ಸಂಘರ್ಷ ಪರಿಷತ್ ನೀಡಿರುವ ದೂರಿನ ಅನ್ವಯ ಉಪ ಲೋಕಾಯುಕ್ತರು ವರದಿ ಕೇಳಿದ್ದಾರೆ. ಲೋಕಾಯುಕ್ತದಲ್ಲಿ ನಡೆದ ಈ ಪ್ರಕರಣದ ಬಗ್ಗೆ ಮೇ 11ರಂದು ಸೋನಿಯಾ ನಾರಂಗ್ ರಿಜಿಸ್ಟ್ರಾರ್‌ಗೆ ಪತ್ರ ಬರೆದಿದ್ದರು. ಆದರೆ, ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಲೋಕಾಯುಕ್ತ ಕಚೇರಿಯಲ್ಲಿ ಏನಾಗಿತ್ತು? : 'ನಿಮ್ಮ ಮೇಲೆ ದಾಳಿ ನಡೆಯಲಿದೆ, ನಿಮ್ಮ ವಿರುದ್ಧ ದಾಖಲೆಗಳನ್ನು ಸಂಗ್ರಹಣೆ ಮಾಡಲಾಗಿದೆ. ದಾಳಿ ತಪ್ಪಿಸಬೇಕಾದರೆ 1 ಕೋಟಿ ಕೊಡಿ' ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಎಂಬುವವರಿಂದ ಕೃಷ್ಣರಾವ್ ಎಂಬುವವರು ಹಣ ಕೇಳಿದ್ದರು. ಕೃಷ್ಣರಾವ್ ಹಣ ಕೇಳಿದ್ದಾರೆ ಎಂದು ಕೃಷ್ಣಮೂರ್ತಿ ಅವರು ಸೋನಿಯಾ ನಾರಂಗ್ ಅವರ ಬಳಿ ಮೌಖಿಕವಾಗಿ ಹೇಳಿಕೊಂಡಿದ್ದರು.
ಲೋಕಾಯುಕ್ತರು ಪ್ರತಿಕ್ರಿಯೆ ನೀಡಿಲ್ಲ : ತಮ್ಮ ಸಂಸ್ಥೆಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದ್ದರಿಂದ ವಿವಿಧ ಸಂಘಟನೆಗಳು ಜೂ.24ರ ಬುಧವಾರ ಲೋಕಾಯುಕ್ತ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications