ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್- ಜೆಡಿಎಸ್ ಮೈತ್ರಿ: ಕಾಂಗ್ರೆಸ್ಸಿಗೆ ತಲೆನೋವಾಗಿ ಕೂತಿರುವ ಆರು ಕ್ಷೇತ್ರಗಳು

|
Google Oneindia Kannada News

Recommended Video

Lok Sabha Elections 2018 : ಈ ಆರು ಕ್ಷೇತ್ರಗಳು ಕಾಂಗ್ರೆಸ್ ಗೆ ತಲೆ ನೋವಾಗಿ ಪರಿಣಮಿಸಿದೆ | Oneindia Kannada

ಕಾಂಗ್ರೆಸ್ ಮತ್ತು ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ನಮಗೆ ಹತ್ತು ನಿಮಗೆ ಹದಿನೆಂಟು ಎಂದು ಪಟ್ಟು ಹಿಡಿದು ಕೂತಿದ್ದ ದೇವೇಗೌಡ್ರು, ತಮ್ಮ ಪಟ್ಟನ್ನು ಈಗ ಕೊಂಚ ಸಡಿಲಿಸಿದ್ದಾರೆ ಎನ್ನುವ ಮಾಹಿತಿಯಿದೆ.

ಮುಂಬರುವ ಚುನಾವಣೆಯಲ್ಲಿ ಯಾರಿಗೆ ಎಷ್ಟು ಸೀಟು ಎನ್ನುವ ಮಾತುಕತೆಯನ್ನು ಗೌಡ್ರು, ಕಾಂಗ್ರೆಸ್ಸಿನ ಹೈಕಮಾಂಡ್ ಲೆವೆಲ್ ನಲ್ಲೇ ಮಾತನಾಡುತ್ತಿರುವುದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ಇರಿಸುಮುರಿಸು ಉಂಟುಮಾಡುತ್ತಿದೆ. ನಮಗೆ ಹತ್ತು ಎನ್ನುತ್ತಿದ್ದ ಗೌಡ್ರು, ಈಗ ಎಂಟು ಸ್ಥಾನ ಸಾಕು ಎನ್ನುವ ಲೆಕ್ಕಾಚಾರದಲ್ಲಿದ್ದಾರಂತೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಆದರೆ, ಗೌಡ್ರು ಕೇಳುತ್ತಿರುವ ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತೀವ್ರ ಸಮಸ್ಯೆಯಾಗುತ್ತಿರುವುದು ಆರು ಕ್ಷೇತ್ರಗಳಲ್ಲಿ. ಯಾಕೆಂದರೆ, ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಎಷ್ಟು ಪ್ರಾಭಲ್ಯವನ್ನು ಹೊಂದಿದೆಯೋ ಅಷ್ಟೇ ಹಿಡಿತವನ್ನೂ ಕಾಂಗ್ರೆಸ್ ಕೂಡಾ ಹೊಂದಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಏನು ಈಗ ಆರು ಕ್ಷೇತ್ರವನ್ನು ಡಿಮಾಂಡ್ ಮಾಡುತ್ತಿದೆಯೋ, ಅದರಲ್ಲಿ ಎರಡು ಜೆಡಿಎಸ್, ಮೂರು ಕಾಂಗ್ರೆಸ್ ಮತ್ತು ಒಂದನ್ನು ಬಿಜೆಪಿ ಗೆದ್ದಿತ್ತು. ಜೊತೆಗೆ, ಒಂದು ವೇಳೆ ಮೈತ್ರಿ ಮುರಿದುಬಿದ್ದರೆ, ಈ ಆರು ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ತ್ರಿಕೋಣ ಸ್ಪರ್ಧೆ ಏರ್ಪಡುವುದು ಖಚಿತ.

ಲೋಕಸಭೆ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಧಿಕೃತ ಒಪ್ಪಿಗೆ ಲೋಕಸಭೆ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಧಿಕೃತ ಒಪ್ಪಿಗೆ

ಕಾಂಗ್ರೆಸ್ ಹೈಕಮಾಂಡ್ ಚಿತ್ತ ಏನಿದ್ದರೂ ನಾಲ್ಕು ರಾಜ್ಯಗಳ ಚುನಾವಣೆಯ ಮೇಲೆ ನೆಟ್ಟಿರುವುದರಿಂದ, ವರ್ಷಾಂತ್ಯದಲ್ಲಿ ಅಥವಾ ಹೊಸವರ್ಷದ ಆದಿಯಲ್ಲಿ ಮೈತ್ರಿಯ ಬಗ್ಗೆ ಅಂತಿಮ ಮಾಹಿತಿ ಹೊರ ಬೀಳಬಹುದು. ಸದ್ಯದ ಮಾಹಿತಿಯ ಪ್ರಕಾರ, ಜೆಡಿಎಸ್ ಡಿಮಾಂಡ್ ಮಾಡುತ್ತಿರುವ ಎಂಟು ಕ್ಷೇತ್ರಗಳಲ್ಲಿ, ಕಾಂಗ್ರೆಸ್ಸಿಗೆ ತಲೆನೋವಾಗಿರುವ ಆರು ಕ್ಷೇತ್ರಗಳು ಯಾವುದು?

ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ಅಸೆಂಬ್ಲಿ ಕ್ಷೇತ್ರಗಳಿವೆ

ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ಅಸೆಂಬ್ಲಿ ಕ್ಷೇತ್ರಗಳಿವೆ

ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ಅಸೆಂಬ್ಲಿ ಕ್ಷೇತ್ರಗಳಿವೆ (ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ, ಕೃಷ್ಣರಾಜನಗರ). ಈ ಎಲ್ಲಾ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಜಯ ಸಾಧಿಸಿತ್ತು. ಹಾಗಾಗಿ, ಸಹಜವಾಗಿಯೇ, ಜೆಡಿಎಸ್ ಈ ಕ್ಷೇತ್ರವನ್ನು ಬಿಟ್ಟುಕೊಡಲು ಕೇಳುತ್ತಿದೆ.

ಆದರೆ, ಕಾಂಗ್ರೆಸ್ ಈ ಕ್ಷೇತ್ರದಲ್ಲಿ ತನ್ನ ಪ್ರಾಭಲ್ಯವನ್ನು ಹೊಂದಿದೆ. ಒಪ್ಪಿಗೆ ನೀಡಿದರೆ ಅಂಬರೀಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎನ್ನುವ ಸುದ್ದಿಯಿದೆ. ಇನ್ನು ಜೆಡಿಎಸ್ ನಿಂದ, ಪ್ರಜ್ವಲ್ ರೇವಣ್ಣ ಅವರ ಹೆಸರು ಮಂಚೂಣಿಯಲ್ಲಿದ್ದರೂ, ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರ ಪುತ್ರನ ಹೆಸರುಮತ್ತು ನಿಖಿಲ್ ಕುಮಾರಸ್ವಾಮಿ ಕೇಳಿಬರುತ್ತಿದೆ.

ಮಂಡ್ಯ ರಾಜಕೀಯದಲ್ಲಿ ಗೆದ್ದವನೇ 'ಗೌಡ', ಪ್ರಜ್ವಲ್ ರೇವಣ್ಣಗೆ ಅಲ್ಲೂ ಕಷ್ಟಕಷ್ಟಮಂಡ್ಯ ರಾಜಕೀಯದಲ್ಲಿ ಗೆದ್ದವನೇ 'ಗೌಡ', ಪ್ರಜ್ವಲ್ ರೇವಣ್ಣಗೆ ಅಲ್ಲೂ ಕಷ್ಟಕಷ್ಟ

ಜೆಡಿಎಸ್ ಡಿಮಾಂಡ್ ಮಾಡುತ್ತಿರುವ ಇನ್ನೊಂದು ಕ್ಷೇತ್ರ

ಜೆಡಿಎಸ್ ಡಿಮಾಂಡ್ ಮಾಡುತ್ತಿರುವ ಇನ್ನೊಂದು ಕ್ಷೇತ್ರ

ಜೆಡಿಎಸ್ ಡಿಮಾಂಡ್ ಮಾಡುತ್ತಿರುವ ಇನ್ನೊಂದು ಕ್ಷೇತ್ರವೆಂದರೆ ಅದು ಬೆಂಗಳೂರು ಉತ್ತರ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಸದಾನಂದ ಗೌಡರು ಜಯಗಳಿಸಿದ್ದರು. ಆದರೆ ಈ ಬಾರಿ ಇಲ್ಲಿ ಅಷ್ಟು ಅನುಕೂಲಕರ ಪರಿಸ್ಥಿತಿ ಬಿಜೆಪಿಗೆ ಇಲ್ಲ ಎನ್ನುವ ಮಾಹಿತಿಯಿದೆ. ಹಾಗಾಗಿ, ಗೌಡ್ರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದತ್ತ ಕಣ್ಣಿಟ್ಟಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ಅಸೆಂಬ್ಲಿ ಸೀಟುಗಳೆಂದರೆ, ಕೆ ಆರ್ ಪುರಂ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ ಮತ್ತು ಪುಲಿಕೇಶಿ ನಗರ. ಇದರಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಎರಡರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದು ಕ್ಷೇತ್ರದಲ್ಲಿ ಗೆದ್ದಿತ್ತು. ಎರಡು ಕ್ಷೇತ್ರಗಳಲ್ಲಿ ಗೆದ್ದಿರುವುದು ಒಂದೆಡೆ, ಜೊತೆಗೆ ಯಶವಂತಪುರದಲ್ಲಿ ಎರಡನೇ ಸ್ಥಾನದಲ್ಲಿ ಇದ್ದಿದ್ದರಿಂದ, ಜೆಡಿಎಸ್ ಈ ಕ್ಷೇತ್ರವನ್ನು ಡಿಮಾಂಡ್ ಮಾಡುತ್ತಿದೆ ಎನ್ನುವ ಮಾಹಿತಿಯಿದೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ವೀರಪ್ಪ ಮೊಯ್ಲಿ ಗೆದ್ದಿದ್ದರು. ಬಿಜೆಪಿಯ ಬಿ ಎನ್ ಬಚ್ಚೇಗೌಡರನ್ನು ಸೋಲಿಸಬೇಕು ಎನ್ನುವ ಉದ್ದೇಶದಿಂದ ಕುಮಾರಸ್ವಾಮಿ, ಜೆಡಿಎಸ್ ನಿಂದ ಕಣಕ್ಕಿಳಿದಿದ್ದರು. ಹಾಗಾಗಿ, ಮೊಯ್ಲಿ ಈ ಕ್ಷೇತ್ರದಿಂದ ಗೆದ್ದಿದ್ದರು. ಈ ಬಾರಿ ಅಲ್ಲಿಂದಲೇ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದೇನೆ ಎಂದು ಮೊಯ್ಲಿ ಹೇಳಿಕೆ ನೀಡಿದ್ದಾಗಿದೆ.

ಆದರೆ, ಜೆಡಿಎಸ್ ಈ ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಡಿಮಾಂಡ್ ಮಾಡುತ್ತಿದೆ ಎನ್ನುವ ಮಾಹಿತಿಯಿದೆ. ಈ ಕ್ಷೇತ್ರದಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳೆಂದರೆ, ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ. ಇದರಲ್ಲಿ, ಕಾಂಗ್ರೆಸ್ ಐದರಲ್ಲಿ, ಜೆಡಿಎಸ್ ಎರಡು ಮತ್ತು ಬಿಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿತ್ತು. ಆದರೆ, ಕ್ಷೇತ್ರದ ಎಲ್ಲಾ ಅಸೆಂಬ್ಲಿ ಸೀಟುಗಳಲ್ಲಿ ಜೆಡಿಎಸ್ ಅಸ್ತಿತ್ವ ಹೊಂದಿರುವುದರಿಂದ, ಈ ಲೋಕಸಭಾ ಕ್ಷೇತ್ರವನ್ನು ತಮಗೆ ನೀಡಬೇಕು ಎನ್ನುವ ಡಿಮಾಂಡ್ ಅನ್ನು ಜೆಡಿಎಸ್ ಮಾಡುತ್ತಿದೆ.

ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ತಂತ್ರ ಬಳಸುತ್ತಿರುವ ಕಾಂಗ್ರೆಸ್‌!ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ತಂತ್ರ ಬಳಸುತ್ತಿರುವ ಕಾಂಗ್ರೆಸ್‌!

ಇನ್ನೊಂದು ಕ್ಷೇತ್ರ ಬೆಂಗಳೂರು ಗ್ರಾಮಾಂತರ

ಇನ್ನೊಂದು ಕ್ಷೇತ್ರ ಬೆಂಗಳೂರು ಗ್ರಾಮಾಂತರ

ಜೆಡಿಎಸ್ ಡಿಮಾಂಡ್ ಮಾಡುತ್ತಿರುವ ಇನ್ನೊಂದು ಕ್ಷೇತ್ರ ಬೆಂಗಳೂರು ಗ್ರಾಮಾಂತರ, ಇದು ಡಿ ಕೆ ಸುರೇಶ್ ಅವರು ಸತತವಾಗಿ ಗೆದ್ದು ಬಂದಿರುವ ಸೀಟು. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಸೆಂಬ್ಲಿ ಕ್ಷೇತ್ರಗಳೆಂದರೆ, ರಾಜರಾಜೇಶ್ವರಿ ನಗರ, ಕುಣಿಗಲ್, ಬೆಂಗಳೂರು ದಕ್ಷಿಣ, ಆನೇಕಲ್, ಮಾಗಡಿ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ.

ಇದರಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಮೂರರಲ್ಲಿ ಜೆಡಿಎಸ್ ಮತ್ತು ಒಂದರಲ್ಲಿ ಬಿಜೆಪಿ ಗೆದ್ದಿತ್ತು. ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಹಿಡಿತವನ್ನು ಹೊಂದಿದೆ, ಹಾಗಾಗಿ ಈ ಸೀಟ್ ಮೇಲೆ ಜೆಡಿಎಸ್ ಕಣ್ಣು.

ಕೆ ಎಚ್ ಮುನಿಯಪ್ಪ ಪ್ರತಿನಿಧಿಸುತ್ತಿರುವ ಕೋಲಾರ

ಕೆ ಎಚ್ ಮುನಿಯಪ್ಪ ಪ್ರತಿನಿಧಿಸುತ್ತಿರುವ ಕೋಲಾರ

ಸೋಲಿಲ್ಲದ ಸರದಾರನಂತೆ ಗೆದ್ದು ಬರುತ್ತಿರುವ ಕೆ ಎಚ್ ಮುನಿಯಪ್ಪ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಕೋಲಾರ. ಈ ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣುನೆಟ್ಟಿದೆ. ಆದರೆ, ಈಗಾಗಲೇ ಈ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಮುನಿಯಪ್ಪ ಘೋಷಿಸಿದ್ದಾರೆ. ತಾವು ಬಯಸಿದ್ದನ್ನು ಹೈಕಮಾಂಡ್ ಲೆವೆಲ್ ನಲ್ಲಿ ಸಾಧಿಸುವಲ್ಲಿ ಯಶಸ್ವಿಯಾಗುತ್ತಿರುವ ಮುನಿಯಪ್ಪ, ಈ ಕ್ಷೇತ್ರದಲ್ಲಿ ಹೊಂದಾಣಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೋಲಾರ ವ್ಯಾಪ್ತಿಯಲ್ಲಿ ಬರುವ ಅಸೆಂಬ್ಲಿ ಕ್ಷೇತ್ರಗಳು, ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸಪುರ, ಮುಳಬಾಗಿಲು, ಕೆಜಿಎಫ್, ಬಂಗಾರಪೇಟೆ, ಕೋಲಾರ ಮತ್ತು ಮಾಲೂರು. ಇದರಲ್ಲಿ ನಾಲ್ಕರಲ್ಲಿ ಕಾಂಗ್ರೆಸ್, ಎರಡರಲ್ಲಿ ಜೆಡಿಎಸ್ ಮತ್ತು ಒಬ್ಬರು ಪಕ್ಷೇತರ ಅಭ್ಯರ್ಥಿ ಗೆದ್ದಿದ್ದರು.

ಹಾಸನ ಕ್ಷೇತ್ರದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ

ಹಾಸನ ಕ್ಷೇತ್ರದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ

ಜೆಡಿಎಸ್ ವರಿಷ್ಠ ದೇವೇಗೌಡರು ಪ್ರತಿನಿಧಿಸುತ್ತಿರುವ ಹಾಸನ ಕ್ಷೇತ್ರದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿರುವುದು ಗೌಡ್ರಿಗೆ ಮುಜುಗರಕ್ಕೀಡುಮಾಡಿದೆ ಎನ್ನಲಾಗುತ್ತಿದೆ. ಹಾಸನದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನೇರ ಹಣಾಹಣಿಯಿದ್ದರೂ, ಬಿಜೆಪಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎರಡರಲ್ಲಿ ಗೆದ್ದಿರುವುದರಿಂದ, ಈ ಬಾರಿ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆಯಿದೆ.

ಕಾಂಗ್ರೆಸ್ಸಿನ ಎ ಮಂಜು ಅವರಿಗೆ ಗೌಡ್ರ ಕುಟುಂಬದ ಜೊತೆಗೆ ಹೊಂದಾಣಿಕೆ ಇಲ್ಲದೇ ಇರುವುದರಿಂದ, ಮೈತ್ರಿಗೆ ಅಪಸ್ವರ ಕೇಳಿಬರುತ್ತಿದೆ. ಹಾಸನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ, ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೇನರಸೀಪುರ, ಅರಕಲಗೂಡು ಮತ್ತು ಸಕಲೇಶಪುರ ಕ್ಷೇತ್ರಗಳಲ್ಲಿ ಜೆಡಿಎಸ್ ಆರು ಮತ್ತು ಬಿಜೆಪಿ ಎರಡು ಸ್ಥಾನದಲ್ಲಿ ಗೆದ್ದಿದೆ.

English summary
Upcoming Loksabha election - 2019, possibility of tough negotiation between JDS and Congress for six seats in Karnataka, including Bengaluru Rural, Bengaluru North.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X