Government Employees: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ, ಅಪ್‌ಡೇಟ್
ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳಲ್ಲಿ ಉತ್ತಿರ್ಣರಾಗಲು ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಸರ್ಕಾರಿ ನೌಕರರು ಪರೀಕ್ಷೆ ಉತ್ತೀರ್ಣರಾಗಲು ಮತ್ತಷ್ಟು ಅವಕಾಶವನ್ನು ನೀಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ವಾರ್ಷಿಕ ಬಡ್ತಿಗೆ ಅರ್ಹರಾಗುವುದಿಲ್ಲ ಎಂದು ಸಹ ಸುದ್ದಿ ಹಬ್ಬಿದೆ.
ಸದ್ಯದ ಮಾಹಿತಿ ಪ್ರಕಾರ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗಲು ಡಿಸೆಂಬರ್ 31ರ ತನಕ ಅವಕಾಶ ನೀಡಲಾಗಿದೆ. ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಹುದ್ದೆಗಳಲ್ಲಿರುವ ಸರ್ಕಾರಿ ನೌಕರರು ಕಡ್ಡಾಯವಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ರೂಪಿಸಿದೆ.
ಈ ನಿಯಮಾವಳಿಗಳ ನಿಯಮ 1(3)ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ, 50 ವರ್ಷಗಳ ವಯಸ್ಸಾಗಿರುವ ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡುವುದು ಕಡ್ಡಾಯವಾಗಿದೆ.
ಈ ಹಿಂದೆ ಸರ್ಕಾರ ದಿನಾಂಕ 31/12/2022ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಆದೇಶಿಸಿತ್ತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಂತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕವನ್ನು ಬಳಿಕ ಮುಂದೂಡಲಾಗಿತ್ತು.
ಮತ್ತೊಮ್ಮೆ ಆದೇಶ ಹೊರಡಿಸಿದ ಸರ್ಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು 31/12/2024 ರವರೆಗೆ ವಿಸ್ತರಿಸಿತು. ಈಗ ಡಿಸೆಂಬರ್ 31 ಸಮೀಪಿಸುತ್ತಿದೆ. ಪುನಃ ಸರ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಕಾಲಾವಧಿಯನ್ನು ವಿಸ್ತರಣೆ ಮಾಡಲಿದೆಯೇ? ಎಂಬುದು ಇನ್ನೂ ತಿಳಿದುಬಂದಿಲ್ಲ.
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದಲ್ಲಿ ವಾರ್ಷಿಕ ಬಡ್ತಿ ಗಳಿಸಲು ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಿದೆ. ಅಲ್ಲದೇ ಈ ಹಿಂದೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಹೊಂದಿದ ಅಧಿಕಾರಿ/ ನೌಕರರಿಗೆ ರೂ. 5000 ಪ್ರೋತ್ಸಾಹ ಧನವನ್ನು ನೀಡಲಾಗುತ್ತಿತ್ತು.
ಈ ಹಿಂದಿನ ಆದೇಶದಲ್ಲಿ ಕರ್ನಾಟಕ ಸರ್ಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡುವ ಅವಧಿಯನ್ನು 31/12/2024 ರವರೆಗೆ ವಿಸ್ತರಿಸಿತ್ತು. ಸದ್ಯ ಎಷ್ಟು ನೌಕರರು ಇನ್ನೂ ಪರೀಕ್ಷೆ ಪಾಸು ಮಾಡಿಲ್ಲ? ಎಂಬ ಮಾಹಿತಿ ಲಭ್ಯವಿಲ್ಲ. ಸರ್ಕಾರಿ ನೌಕರರಿಗೆ ನೆರವಾಗಲು ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗುತ್ತದೆಯೇ?.
ಸರ್ಕಾರದ ಆದೇಶದ ಪ್ರಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ವಾಹನ ಚಾಲಕರು, ಪ್ರಾಥಮಿಕ ಶಿಕ್ಷಕರು, ಕಾನ್ಸ್‌ಟೇಬಲ್‌ಗಳು, ನರ್ಸ್‌ಗಳು, ರೇಷ್ಮೆ ಪ್ರದರ್ಶಕರು, ಅರಣ್ಯ ರಕ್ಷಕರು, ಅಬಕಾರಿ ರಕ್ಷಕರು, ಆರೋಗ್ಯ ಕಾರ್ಯಕರ್ತರು, ಅರಣ್ಯ ವೀಕ್ಷಕರು, ಬೇಲಿಫ್ಸ್ ಮತ್ತು ಪ್ರೋಸಸ್ ಸರ್ವ‌್ರಗಳು ಮತ್ತು ಡಿ ಗುಂಪಿನ ಹುದ್ದೆಗಳು. ಈ ಹುದ್ದೆಗಳಿಗೆ ಆಯ್ಕೆಗೊಳ್ಳುವ ಅಥವಾ ಈ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹಾಗೂ ಕಾಲಕಾಲಕ್ಕೆ ಸರ್ಕಾರವು ಅಧಿಸೂಚಿಸಬಹುದಾದ ಇತರ ಹುದ್ದೆಗಳಿಗೆ ಅನ್ವಯವಾಗುವುದಿಲ್ಲ.
ಸರ್ಕಾರವು ನಿರ್ದಿಷ್ಟ ಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ, ಕಂಪ್ಯೂಟರ್ ಸಾಕ್ಷರ ಪರೀಕ್ಷೆಯನ್ನು ಶೇಕಡ 60 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಡೆದು ಪಾಸು ಮಾಡದಿದ್ದಲ್ಲಿ, ಅಂತಹ ಅಭ್ಯರ್ಥಿಯನ್ನು ನೇಮಕ ಮಾಡತಕ್ಕದ್ದಲ್ಲ. ಅಂತಹ ಪರೀಕ್ಷೆಯನ್ನು ಸರ್ಕಾರ ಅಥವಾ ಅದು ಅನುಮೋದಿಸಿದ ಏಜೆನ್ಸಿಯು ನಡೆಸತಕ್ಕದ್ದು ಎಂದು ನಿಯಮ ಹೇಳಿದೆ.
-
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications