Gruha Lakshmi: ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಅಪ್‌ಡೇಟ್
ಬೆಂಗಳೂರು, ಏಪ್ರಿಲ್01: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಕಾಂಗ್ರೆಸ್ ಸರ್ಕಾರ ಕಳೆದ ಮೂರು ತಿಂಗಳಿನಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಿಲ್ಲ ಎಂದು ರಾಜ್ಯದ ಮಹಿಳೆಯರು ಹಾಗೂ ವಿಪಕ್ಷಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ವು. ಇದೀಗ ಯುಗಾದಿ ಹಬ್ಬಕ್ಕೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಿದ್ದು, ಇನ್ನೂ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಬಾಕಿ ಇದೆ.
ಹಲವು ತಿಂಗಳಿನಿಂದ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮನೆಯ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೊನೆಗೂ ಗುಡ್ ನ್ಯೂಸ್ ನೀಡಿದೆ. ಯುಗಾದಿ ಹಬ್ಬದ ದಿನವೇ ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಹಣ ಬಿಡುಗಡೆ ಸಂಬಂಧ ಮಹತ್ವದ ಮಾಹಿತಿಯನ್ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದು, ಜನವರಿ ಕಂತಿನ ಹಣ ಬಿಡುಗಡೆ ಬಗ್ಗೆ ಮಾಹಿತಿಯನ್ನ ನೀಡಿದ್ದರು. ಈಗಾಗಲೇ ಜನವರಿ ಕಂತಿನ ಗೃಹಲಕ್ಷ್ಮಿ ಹಣವನ್ನು ಖಜಾನೆಗೆ ಕಳಿಸಿದ್ದೇವೆ. ಇದು ಫಲಾನುಭವಿಗಳಿಗೆ ಯುಗಾದಿ ಹಾಗೂ ರಂಜಾನ್‌ಗೆ ಖುಷಿ ಸುದ್ದಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಜನವರಿ ತಿಂಗಳ ಹಣವನ್ನು ನಾವು ಈಗಾಗಲೇ ಕ್ಲಿಯರ್ ಮಾಡಿದ್ದೇವೆ. ಇನ್ನು ಫೆಬ್ರವರಿ ಕಂತಿನ ಹಣವನ್ನು ಕೂಡ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಾಕಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಡಿಸೆಂಬರ್ ತಿಂಗಳ ಗೃಹ ಲಕ್ಷ್ಮಿ ಹಣ ಜನವರಿ 14 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೆ ನೀಡಿದ್ರು. ಆದರೆ, ಕಾರಣಾಂತರಗಳಿಂದ ಹಣ ಬಿಡುಗಡೆ ತಡವಾಗಿತ್ತು. ಡಿಸೆಂಬರ್ ತಿಂಗಳ ಹಣ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದು, ಇದೀಗ ಜನವರಿ ತಿಂಗಳ ಹಣವನ್ನ ಸರ್ಕಾರ ವರ್ಗಾವಣೆ ಮಾಡಿದೆ. ಇನ್ನೂ ಫೆಬ್ರವರಿ ತಿಂಗಳ ಹಣ ಏಪ್ರಿಲ್ 15 ರ ಒಳಗೆ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಮಾರ್ಚ್ 31ರಂದು ಬಿಡುಗಡೆಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದರು. ಅಲ್ಲದೇ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ 4,000 ರೂಪಾಯಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಇದೀಗ ಕೇವಲ ಒಂದು ತಿಂಗಳ ಹಣವನ್ನು ಮಾತ್ರ ಮೊದಲ ಹಂತದಲ್ಲಿ ಜಮೆ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇನ್ನೂ ಫೆಬ್ರವರಿ ತಿಂಗಳ ಹಣ ಬಿಡುಗಡೆ ಆದಷ್ಟು ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.
ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಏಪ್ರಿಲ್ 15 ರ ಒಳಗೆ ಬಿಡುಗಡೆಯಾಗಲಿದ್ದು, ಮಾರ್ಚ್ ತಿಂಗಳ ಹಣ ಬಿಡುಗಡೆ ಯಾವಾಗ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಈಗಾಗಲೇ ಎರಡು ತಿಂಗಳ ಒಟ್ಟಿಗೆ ಮಹಿಳೆಯರ ಖಾತೆಗೆ ಜಮಾ ಮಾಡುವುದಾಗಿ ಹೇಳಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೇವಲ ಒಂದು ತಿಂಗಳ ಹಣವನ್ನ ಜಮಾ ಮಾಡಿದ್ದು, ಇದೀಗ ಫೆಬ್ರವರಿ ತಿಂಗಳ ಹಣ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications