ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌ : 4,000 ಹಣ ಬಿಡುಗಡೆ,ಈ ದಿನವೇ ಮಹಿಳೆಯರ ಖಾತೆಗೆ!

ಬೆಂಗಳೂರು, ಸೆಪ್ಟೆಂಬರ್‌ 03: 2023 ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಬರೋಬ್ಬರಿ ಎರಡು ವರ್ಷ ಪೂರೈಸಿದೆ. ಮಹಿಳೆಯರನ್ನು ಬೆಂಬಲಿಸಲು ಮತ್ತು ಅವರ ಜೀವನೋಪಾಯವನ್ನು ಸುಧಾರಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ. ಕರ್ನಾಟಕ ಸರ್ಕಾರವು ಎರಡು ವರ್ಷಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದ ಮಹತ್ವದ ಕಲ್ಯಾಣ ಕಾರ್ಯಕ್ರಮವಾಗಿದೆ. ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳೆಯರಿಗೆ ಮಾಸಿಕ ₹2,000 ಆರ್ಥಿಕ ಸಹಾಯವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಈ ಮೊತ್ತವನ್ನು ನೇರವಾಗಿ ಮಹಿಳೆಯ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಕಳೆದ ಒಂದು ವರ್ಷದಿಂದ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗುತ್ತಿದ್ದು, ಇದೀಗ ಮೂರು ತಿಂಗಳಿಗೊಮ್ಮೆ ಹಣ ಜಮಾ ಮಾಡುತ್ತೇವೆ ಗ್ಯಾರಂಟಿ ಯೋಜನೆ ಅಧ್ಯಕ್ಷ ಹೆಚ್‌ ಎಂ ರೇವಣ್ಣ ಅವರು ನೀಡಿದ ಹೇಳಿಕೆಯಿಂದ ರಾಜ್ಯದ ಮಹಿಳೆಯರು ಹಾಗೂ ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿಯನ್ನ ನಡೆಸಿದ್ದಾರೆ.

Update on the release of two months of funds under the Griha Lakshmi Scheme

ಇದರ ನಡುವೆ ಸರ್ಕಾರ ಈಗಾಗಲೇ ಮೂರ್ನಾಲ್ಕು ತಿಂಗಳ ಗೃಹ ಲಕ್ಷ್ಮಿ ಹಣವನ್ನ ಬಾಕಿ ಉಳಿಸಿಕೊಂಡಿದೆ. ಕಳೆದ ತಿಂಗಳೇ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಇದುವರೆಗೂ ಗೃಹ ಲಕ್ಷ್ಮಿ ಹಣ ಬಂದಿಲ್ಲ. ಇದೀಗ ಗೃಹಲಕ್ಷ್ಮಿ ಯೋಜನೆಯಡಿ 22 ಮತ್ತು 23ನೇ ಕಂತಿನ ಒಟ್ಟು ₹4,000 ಹಣವನ್ನು ಇದೇ ತಿಂಗಳು ಬರುವ ಸೆಪ್ಟೆಂಬರ್‌ 7 ಮತ್ತು 9ನೇ ತಾರೀಕಿಗೆ ಬಿಡುಗಡೆ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಗೃಹಲಕ್ಷ್ಮಿ ಯೋಜನೆಯ 22 ಮತ್ತು 23ನನೇ ಕಂತಿನ ₹4,000 ಹಣವನ್ನು ದಸರಾ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?

* ಆಧಾರ್ ಕಾರ್ಡ್ ಇದು ಅದು ನಿಮ್ಮ ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ.

* ಪಡಿತರ ಚೀಟಿ ನಿಮ್ಮ ಬಳಿ ಇರಬೇಕು. ಇದರಿಂದ ನಿಮ್ಮ ಕುಟುಂಬಸ್ಥರ ಮಾಹಿತಿ ಅಪ್ಡೇಟ್ ಮಾಡಲಾಗುತ್ತದೆ.

* ಮಾಸಿಕ ಭತ್ಯೆಯ ನೇರ ಲಾಭ ವರ್ಗಾವಣೆಯನ್ನು ಸುಲಭಗೊಳಿಸಲು ಈ ಯೋಜನೆಯು ನಿಮ್ಮ ಬ್ಯಾಂಕ್ ಪಾಸ್‌ಬುಕ್‌ ಅಥವಾ ಕ್ಯಾನ್ಸಲ್ ಚೆಕ್ ಸಹ ಒದಗಿಸಬೇಕಾಗುತ್ತದೆ.

* ಕೆಲವು ಸಂದರ್ಭಗಳಲ್ಲಿ ಅರ್ಜಿ ಪ್ರಕ್ರಿಯೆಯ ಸಮಯದಲ್ಲಿ ಸಂವಹನ ಮತ್ತು ಒಟಿಪಿ ಪರಿಶೀಲನೆಗಾಗಿ ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ಸಹ ಒದಗಿಸಬೇಕಾಗಬಹುದು.

ಈ ಯೋಜನೆಗೆ ಯಾರ್ಯಾರು ಅರ್ಜಿ ಸಲ್ಲಿಸಬಹುದು?

* ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

* ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ನೀಡಲಾದ ಅಂತ್ಯೋದಯ, ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) / ಬಡತನ ರೇಖೆಗಿಂತ ಮೇಲಿನ (ಎಪಿಎಲ್) ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರಾಗಿ ಪಟ್ಟಿ ಮಾಡಲ್ಪಟ್ಟಿರಬೇಕು.

* ಪ್ರತಿ ಕುಟುಂಬಕ್ಕೆ ಒಬ್ಬ ಮಹಿಳೆ ಮಾತ್ರ ಈ ಪ್ರಯೋಜನಗಳನ್ನು ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+