ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಪಟ್ಟಿ ಪರಿಷ್ಕರಣೆಗೆ ಅರ್ಜಿ ಸಲ್ಲಿಸಲು ಅವಕಾಶ

|
Google Oneindia Kannada News

ಬೆಂಗಳೂರು, ಡಿಸೆಂಬರ್ 04 : ಚುನಾವಣಾ ಆಯೋಗ ರಾಜ್ಯದ 224 ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಯಾವುದೇ ತಿದ್ದುಪಡಿಗಳಿದ್ದರೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಕರಡು ಮತದಾರರ ಪಟ್ಟಿಯ ಪ್ರತಿಗಳನ್ನು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ವರ್ಗಾವಣೆರಾಜ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ವರ್ಗಾವಣೆ

'ಡಿಸೆಂಬರ್ 6 ರಿಂದ 21 ರ ತನಕ ಮತದಾರರ ಪಟ್ಟಿಯ ವಿವರಗಳನ್ನು ಗ್ರಾಮಸಭೆ, ಮುನ್ಸಿಪಾಲಿಟಿ, ನಗರಸಭೆ ಹಾಗೂ ಪಂಚಾಯತಿಗಳಲ್ಲಿ ಪರಿಶೀಲನೆ ನಡೆಯಲಿದೆ. ಡಿಸೆಂಬರ್ 3 ರಿಂದ 17 ರವರೆಗೆ ಬೂತ್ ಮಟ್ಟದಲ್ಲಿ ವಿಶೇಷ ಆಂದೋಲನ ಮತ್ತು ಅರ್ಜಿಗಳನ್ನು ಸ್ವೀಕರಿಸಲಾಗುವುದು' ಎಂದರು.

Update your details or register yourself on voter list

ಡಿಸೆಂಬರ್ 29 ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತೆಗೆದುಹಾಕುವಿಕೆ ಹಾಗೂ ವಿವರಗಳ ತಿದ್ದುಪಡಿಗೆ ಮತದಾರರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2018ರ ಫೆಬ್ರವರಿ 15 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.

ಮೇ ಮೊದಲ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ?

ಅರ್ಹ ಮತದಾರರಾಗಿದ್ದು, ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಬಿಟ್ಟು ಹೋಗಿದ್ದಲ್ಲಿ ನಮೂನೆ 6 ರ ಅರ್ಜಿಯಲ್ಲಿ ಮತದಾರರ ನೋಂದಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ನೋಂದಣಾಧಿಕಾರಿಗಳ ಕಚೇರಿ/ತಾಲೂಕು ಕಚೇರಿ/ನಗರ ಪಾಲಿಕೆ/ಬಿಬಿಎಂಪಿ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಅರ್ಜಿಗಳು ಲಭ್ಯವಿದೆ. ವೆಬ್‍ಸೈಟ್‌ ಮೂಲಕವೂ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

2013 ರಲ್ಲಿ ನಡೆದ ವಿಧಾನಸಭೆಯ ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಒಟ್ಟು 4,18,38,541 ಮತದಾರರಿದ್ದರು. ಪ್ರಸ್ತುತ ಕರಡು ಮತದಾರರ ಪರಿಷ್ಕೃತ ಪಟ್ಟಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 4,90, 06,901 ಮತದಾರರಿದ್ದಾರೆ.

ಇವರಲ್ಲಿ ಮಹಿಳೆಯರು 2,41,34,805, ಪುರುಷರು 2,48,67,756 ಪುರುಷ ಹಾಗೂ 4,340 ತೃತೀಯ ಲಿಂಗಿಯ ಮತದಾರರಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 72 ಲಕ್ಷ ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ ಒಟ್ಟು 85,88,762 ಮತದಾರರಿದ್ದು ಅದರಲ್ಲಿ ಪುರುಷರು 45,02,576, ಮಹಿಳೆಯರು 40,84,802 ಹಾಗೂ ತೃತೀಯ ಲಿಂಗಿಯರು 1,384 ಮತದಾರರಿದ್ದಾರೆ.

18-19 ವಯೋಮಾನದ 7,69,472 ಹೊಸ ಮತದಾರರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ. ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಪರಿಷ್ಕೃತ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತದೆ.

English summary
Update your details or register yourself on voter list ahead of Karnataka assembly elections 2018. People can submit application till December 29, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X