ಟಿಪ್ಪು ಜಯಂತಿ : ಬೆಳಗಾವಿಯಲ್ಲಿ ಮುಸ್ಲಿಂ ಮುಖಂಡರಿಂದ ಬಹಿಷ್ಕಾರ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 10 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ 3ನೇ ವರ್ಷದ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಇಂದು ನಡೆಸುತ್ತಿದೆ. ಪ್ರತಿಪಕ್ಷ ಬಿಜೆಪಿಯ ವ್ಯಾಪಕ ವಿರೋಧದ ನಡುವೆಯೇ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿದೆ.

In Pics : ಟಿಪ್ಪು ಸುಲ್ತಾನ್ ಯಾರಂತ ಗೊತ್ತಾ ಪುಟ್ಟಾ?

ಟಿಪ್ಪು ಜಯಂತಿ ಕರ್ನಾಟಕದ ವಿವಿಧ ಜಿಲ್ಲೆಗಳ ಸುದ್ದಿಗಳು

* ಬೆಳಗಾವಿಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಟಿಪ್ಪು ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಜಾಥಾ ನಡೆಸಲು ಅನುಮತಿ ನೀಡಿಲ್ಲ ಎಂಬ ಕಾರಣಕ್ಕೆ ಮುಸ್ಲಿಂ ಮುಖಂಡರು ಜಯಂತಿಯನ್ನು ಬಹಿಷ್ಕಾರ ಮಾಡಿದ್ದಾರೆ.

* ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶುಕ್ರವಾರ ಬೆಳಗ್ಗೆ ಕೆಎಸ್ಆರ್‌ಟಿಸಿ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

* ಟಿಪ್ಪು ಜಯಂತಿ ವಿರೋಧಿಸಿ ನವೆಂಬರ್ 10ರ ಶುಕ್ರವಾರ ಕೊಡಗು ಬಂದ್‌ಗೆ ಕರೆ ನೀಡಲಾಗಿದೆ. ಮಡಿಕೇರಿಯಲ್ಲಿ ಖಾಸಗಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

* ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿವಮೊಗ್ಗ, ಸಾಗರ ಮತ್ತು ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

* ಕಲಬುರಗಿ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಆದೇಶ ಹೊರಡಿಸಿದ್ದಾರೆ.

ಟಿಪ್ಪು ಜಯಂತಿ: ಕೊಡಗಿನಲ್ಲಿ ಖಾಕಿ ಸರ್ಪಗಾವಲು!

ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಶುಕ್ರವಾರ ಕೊಡಗು ಬಂದ್‌ಗೆ ಕರೆ ನೀಡಲಾಗಿದೆ. ಕಲಬುರಗಿ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

 Updates : Tipu Jayanti in Karntaka on November 10, 2017

ಕರ್ನಾಟಕದ ವಿವಿಧ ಜಿಲ್ಲೆಗಳ ಸುದ್ದಿಗಳ Updates ಇಲ್ಲಿದೆ...

ಇಂದು ರಾಜ್ಯದಾತ್ಯಂತ ಆಚರಣೆಗೊಳ್ಳಲಿದೆ ವಿವಾದದ ಟಿಪ್ಪು ಜಯಂತಿ!

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Congress government would celebrate the birth anniversary of 18th century ruler Tipu Sultan for the third year on Friday, November 10, 2017. Tipu Jayanti Here are the updates.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ