ಉಪ್ಪಿ ಪಕ್ಷದಿಂದ ಇಬ್ಬರು ಬೈಎಲೆಕ್ಷನ್‌ ಕಣಕ್ಕೆ, ಮತದಾರರಿಗೂ ಸ್ಪೆಷಲ್‌ ರಿಕ್ವೆಸ್ಟ್‌

ರಾಜ್ಯದ ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಕಾಂಗ್ರೆಸ್‌ ಹಾಗೂ ಎನ್‌ಡಿಎಸ್‌ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಇದೀಗ ಉತ್ತಮ ಪ್ರಜಾಕೀಯ ಪಕ್ಷದಿಂದಲೂ (ಯುಪಿಪಿ) ಅಭ್ಯರ್ಥಿಗಳು ಬೈಎಲೆಕ್ಷನ್‌ ಅಂಗಳಕ್ಕೆ ಲಗ್ಗೆ ಇಟ್ಟಿದ್ದಾರೆ.

ಈ ಬಗ್ಗೆ ಉತ್ತಮ ಪ್ರಜಾಕೀಯ ಪಕ್ಷದ ಸ್ಥಾಪಕರೂ ಆಗ ರಿಯಲ್‌ ಸ್ಟಾರ್‌ ಉಪೇಂದ್ರ ಮಾಹಿತಿ ನೀಡಿದ್ದಾರೆ. ಚನ್ನಪಟ್ಟಣ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

UPP Party Candidates Who Have Filed Their Nomination Papers For The By-Elections

2024ರ ಕರ್ನಾಟಕ ವಿಧಾನಸಭಾ ಉಪಚುನಾವಣೆಯ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆಲ್ಲ ಶುಭವಾಗಲಿ ಎಂದು ಹಾರೈಸಿದ್ದಾರೆ. ನೀವು ಜವಾಬ್ದಾರಿ ತೆಗೆದುಕೊಳ್ಳುವುದಾದರೆ ಮಾತ್ರ ಮತ ನೀಡಿ ಎಂದೂ ಉಪ್ಪಿ ಮತದಾರರಿಗೆ ಕಿವಿಮಾತು ಹೇಳಿದ್ದಾರೆ.

ಇನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್‌ನಿಂದ ಸಿ.ಪಿ.ಯೋಗೇಶ್ವರ್‌ ಹಾಗೂ ಎನ್‌ಡಿಎ ಮೈತ್ರಿಯ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣದಲ್ಲಿದ್ದಾರೆ. ನಿನ್ನೆ ಅದ್ಧೂರಿಯಾಗಿ ನಾಮಪತ್ರವೂ ಸಲ್ಲಿಸಿ ಬಂದಿದ್ದಾರೆ. ಇದೀಗ ಉತ್ತಮ ಪ್ರಜಾಕೀಯ ಪಕ್ಷದಿಂದಲೂ ಅಭ್ಯರ್ಥಿಗಳು ತೊಡೆ ತಟ್ಟಿದ್ದಾರೆ.

UPP Party Candidates Who Have Filed Their Nomination Papers For The By-Elections

ಚನ್ನಪಟ್ಟಣ ಉಪ ಚುನಾವಣೆಯು ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಹೈವೋಲ್ಟೇಜ್‌ ಕ್ಷೇತ್ರ. ಇನ್ನು ಮೂರನೇ ಬಾರಿ ನಿಖಿಲ್‌ ಕುಮಾರ್‌ಸ್ವಾಮಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಅವರ ಬಳಿ ಕೋಟಿ ಕೋಟಿ ರೂಪಾಯಿ ಆಸ್ತಿಯೂ ಇದ್ದು, 70 ಕೋಟಿ ರೂಪಾಯಿ ಸಾಲವೂ ಇದೆ ಎಂದು ತಿಳಿದುಬಂದಿದೆ.

ಮೈತ್ರಿ ಅಭ್ಯರ್ಥಿಯಾಗಿರೋ ನಿಖಿಲ್ ಕುಮಾರಸ್ವಾಮಿ ಅವರು ಅದ್ಧೂರಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರು ಆಸ್ತಿ ವಿವರಗಳನ್ನು ಘೋಷಿಸಿದ್ದು, ಬರೋಬ್ಬರಿ 100 ಕೋಟಿಗೂ ಹೆಚ್ಚು ಆಸ್ತಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರಿನಲ್ಲಿದೆ. ನಿಖಿಲ್ ಅವರ ಬಳಿ ಬರೋಬ್ಬರಿ 113 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.

UPP Party Candidates Who Have Filed Their Nomination Papers For The By-Elections

ಇದರಲ್ಲಿ 78.15 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 29.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಇದೆ ಎನ್ನಲಾಗಿದೆ. ನಿಖಿಲ್ ಪತ್ನಿ ರೇವತಿ ಅವರ ಹೆಸರಿನಲ್ಲಿ 5.49 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಹಾಗೂ 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ದಂಪತಿ ಪುತ್ರನ ಹೆಸರಲ್ಲೂ 11 ಲಕ್ಷ ರೂಪಾಯಿ ಹಣ ಮೀಸಲಾಗಿದೆ.

ಇನ್ನು ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಅವರು ಬಿಜೆಪಿಯಿಂದ ಕಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಕಾಂಗ್ರೆಸ್‌ ಘೋಷಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಕಗ್ಗಂಟಾಗಿದ್ದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಮತ್ತೊಂದೆಡೆ ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಪುತ್ರಿಗೆ ಕಾಂಗ್ರೆಸ್‌ ಟಿಕೆಟ್ ಕೊಡಲಿದೆ ಎಂದು ಹೇಳಲಾಗಿತ್ತು. ಅಂತಿಮವಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರಿಗೆ ಕಾಂಗ್ರೆಸ್‌ ಚಾನ್ಸ್‌ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+